AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ರೋಹಿತ್ ಪವಾರ್ ಆಪ್ತ ಸಹಾಯಕನ 12 ವರ್ಷದ ಮಗಳು ಶವವಾಗಿ ಪತ್ತೆ

ಮಹಾರಾಷ್ಟ್ರದ ಬಾರಾಮತಿಯಲ್ಲಿ ಶಾಸಕ ರೋಹಿತ್ ಪವಾರ್ ಆಪ್ತ ಸಹಾಯಕ ಅಜಿತ್ ದಶಾವತಾರೆ ಅವರ 12 ವರ್ಷದ ಮಗಳು ಶವವಾಗಿ ಪತ್ತೆಯಾಗಿದ್ದಾಳೆ. ತಾಯಿಯೊಂದಿಗೆ ಮುನಿಸಿಕೊಂಡು ಮನೆಯಿಂದ ಹೋಗಿದ್ದ ಬಾಲಕಿ ನಿಗೂಢವಾಗಿ ಸಾವನ್ನಪ್ಪಿದ್ದು, ಇಡೀ ಪ್ರದೇಶದಲ್ಲಿ ಆತಂಕ ಮನೆ ಮಾಡಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ. ಸಿಸಿಟಿವಿ ಪರಿಶೀಲಿಸಿ, ಆತ್ಮಹತ್ಯೆ ಅಥವಾ ದುಷ್ಕೃತ್ಯದ ಕುರಿತು ಸತ್ಯಶೋಧನೆ ನಡೆಸಲಾಗುತ್ತಿದೆ.

ಶಾಸಕ ರೋಹಿತ್ ಪವಾರ್ ಆಪ್ತ ಸಹಾಯಕನ 12 ವರ್ಷದ ಮಗಳು ಶವವಾಗಿ ಪತ್ತೆ
ಪೊಲೀಸ್
ನಯನಾ ರಾಜೀವ್
|

Updated on: Aug 23, 2026 | 1:39 PM

Share

ಬಾರಾಮತಿ, ಆಗಸ್ಟ್​ 23: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಎನ್‌ಸಿಪಿ (ಶರದ್‌ಚಂದ್ರ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಅವರ ಆಪ್ತ ಸಹಾಯಕ (PA) ಅಜಿತ್ ದಶಾವತಾರೆ ಅವರ 12 ವರ್ಷದ ಅಪ್ರಾಪ್ತ ಮಗಳು ಭಾನುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾಳೆ. ಘಟನೆಯಿಂದ ಇಡೀ ಪ್ರದೇಶದಲ್ಲಿ ಆತಂಕ ಮತ್ತು ಆಘಾತದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಆಯಾಮಗಳಿಂದ ತನಿಖೆ ಆರಂಭಿಸಿದ್ದಾರೆ.

ತಾಯಿಯೊಂದಿಗೆ ಮುನಿಸು: ಶನಿವಾರ ಮನೆಯಲ್ಲಿ ಸಣ್ಣ ವಿಚಾರಕ್ಕೆ ತಾಯಿಯೊಂದಿಗೆ ವಾಗ್ವಾದ ನಡೆಸಿದ್ದ ಬಾಲಕಿ, ಕೋಪಗೊಂಡು ಮನೆಯಿಂದ ಹೊರಟು ಹೋಗಿದ್ದಳು. ಬಾಲಕಿ ಸಂಜೆಯಾದರೂ ಮನೆಗೆ ವಾಪಸ್ ಬಾರದಿದ್ದಾಗ ಕುಟುಂಬಸ್ಥರು ಸುತ್ತಮುತ್ತ ಹುಡುಕಾಟ ನಡೆಸಿ, ನಂತರ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ದಾಖಲಿಸಿದ್ದರು.

ಭಾನುವಾರ ಬೆಳಗ್ಗೆ ಬಾರಾಮತಿ ತೆಹ್ಸಿಲ್‌ನ ರುಯಿ ಗ್ರಾಮದ ಸಾಯಿನಗರ ಪ್ರದೇಶದಲ್ಲಿರುವ ಆಕೆಯ ಮನೆಯ ಸಮೀಪದಲ್ಲೇ ಬಾಲಕಿಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪಂಚನಾಮೆ ನಡೆಸಿ, ಸಾವಿನ ನಿಖರ ಕಾರಣ ತಿಳಿಯಲು ಶವವನ್ನು ಬಾರಾಮತಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮತ್ತಷ್ಟು ಓದಿ: ಮಹಾರಾಷ್ಟ್ರದಲ್ಲಿ ದುರಂತ: ಬೆಟ್ಟದ ಅಂಚಿನಲ್ಲಿ ನಿಂತಿದ್ದ ಮಗನನ್ನು ರಕ್ಷಿಸಲು ಹೋಗಿ ತಂದೆ-ತಾಯಿ ಸೇರಿ ಮೂವರು ಸಾವು

ಶನಿವಾರ ಸಂಜೆಯಿಂದ ಭಾನುವಾರ ಬೆಳಗಿನವರೆಗೆ ಬಾಲಕಿ ಎಲ್ಲೆಲ್ಲಿ ಹೋಗಿದ್ದಳು ಎಂಬುದನ್ನು ತಿಳಿಯಲು ಸ್ಥಳೀಯ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಇದು ಆತ್ಮಹತ್ಯೆಯೋ ಅಥವಾ ಬೇರೆ ಯಾವುದಾದರೂ ದುಷ್ಕೃತ್ಯವೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಾರಾಮತಿಯಲ್ಲಿ ಆತಂಕ: ಪ್ರಭಾವಿ ರಾಜಕೀಯ ನಾಯಕರ ಆಪ್ತ ಸಿಬ್ಬಂದಿಯ ಕುಟುಂಬದಲ್ಲೇ ಇಂತಹ ಘಟನೆ ನಡೆದಿರುವುದರಿಂದ ಸ್ಥಳೀಯರಲ್ಲಿ ಭದ್ರತೆಯ ಬಗ್ಗೆ ಕಳವಳ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವೈದ್ಯಕೀಯ ವರದಿ ಬಂದ ನಂತರವೇ ಸಾವಿನ ಕಾರಣ ದೃಢಪಡಲಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ