ಹೈದರಾಬಾದ್: ತೆಲಂಗಾಣ ಪೊಲೀಸರು (Telangana Police) ಇಂದು ರೋಹಿತ್ ವೇಮುಲ (Rohith Vemula) ಸಾವಿನ ಪ್ರಕರಣವನ್ನು ಮುಕ್ತಾಯಗೊಳಿಸಿದ್ದಾರೆ. ಈ ಪ್ರಕರಣದಲ್ಲಿನ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಪೊಲೀಸರು ಸಲ್ಲಿಸಿದ ಅಂತಿಮ ವರದಿಯಲ್ಲಿ ರೋಹಿತ್ ವೇಮುಲ ದಲಿತನೇ ಅಲ್ಲ. ಆತ ತನ್ನ ನಿಜವಾದ ಜಾತಿಯ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ. ಈ ಹೇಳಿಕೆಯನ್ನು ರೋಹಿತ್ ಅವರ ಸಹೋದರ ‘ಅಸಂಬದ್ಧ’ ಎಂದು ಟೀಕಿಸಿದ್ದಾರೆ.
ರೋಹಿತ್ ವೇಮುಲ ಅವರ ಜಾತಿ ಪ್ರಮಾಣಪತ್ರಗಳನ್ನು ನಕಲಿ ಎಂದು ಪೊಲೀಸರು ಹೇಳಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ. ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದು, ಆಗಿನ ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ಎಂಎಲ್‌ಸಿ ಎನ್. ರಾಮಚಂದರ್ ರಾವ್ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಅಪ್ಪಾ ರಾವ್, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮುಖಂಡರನ್ನು ದೋಷಮುಕ್ತಗೊಳಿಸಲಾಗಿದೆ. ರೋಹಿತ್ ಸಾವಿನ ಸಮಯದಲ್ಲಿ ಸ್ಮೃತಿ ಇರಾನಿ ಅವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿದ್ದರು.
ಇದನ್ನೂ ಓದಿ: ತಮಿಳುನಾಡು: ತಾನು ಕಲಿತ ಶಾಲೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ದಲಿತ ಯುವಕನಿಗೆ ಥಳಿತ
ಹೈಕೋರ್ಟ್ ಈಗ ರೋಹಿತ್ ವೇಮುಲ ಅವರ ಕುಟುಂಬಕ್ಕೆ ಪ್ರತಿಭಟನಾ ಅರ್ಜಿಯ ರೂಪದಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸುವಂತೆ ಹೇಳಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ರೋಹಿತ್ ವೇಮುಲ ದಲಿತ ಎಂಬ ಕಾರಣಕ್ಕೆ ಆತನನ್ನು ಸಾಯಿಸಲಾಯಿತು ಎಂದು ಹೇಳಿಕೆ ನೀಡಿದ್ದರು. ಇದೀಗ ತೆಲಂಗಾಣದ ಕಾಂಗ್ರೆಸ್ ಸರ್ಕಾರವೇ ಆತ ದಲಿತನಲ್ಲ ಎಂದು ಕ್ಲೋಸರ್ ರಿಪೋರ್ಟ್ ಸಲ್ಲಿಸಿದೆ.
ಏನಿದು ಪ್ರ
2016ರ ಜನವರಿಯಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ರೋಹಿತ್ ವೇಮುಲ ಆತ್ಮಹತ್ಯೆ ಮಾಡಿಕೊಂಡ ಘಟನೆಯು ವಿಶ್ವವಿದ್ಯಾನಿಲಯಗಳಲ್ಲಿ ದಲಿತರ ವಿರುದ್ಧದ ತಾರತಮ್ಯದ ಬಗ್ಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಯಿತು. ವಿಶ್ವವಿದ್ಯಾನಿಲಯದ ಉಪಕುಲಪತಿಗಳು ಮತ್ತು ಬಿಜೆಪಿಯ ಪ್ರಚೋದನೆಯಿಂದ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಭಾರೀ ಪ್ರತಿಭಟನೆಗಳು, ಹೋರಾಟಗಳು ನಡೆದಿದ್ದವು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ