AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ವೈದ್ಯಕೀಯ ವಿದ್ಯಾರ್ಥಿನಿಯ ಅಪಹರಿಸಿ ಹಲ್ಲೆ ನಡೆಸಿದ ವೈದ್ಯ

ವೈದ್ಯಕೀಯ ವಿದ್ಯಾರ್ಥಿನಿಯನ್ನು ಅಪಹರಿಸಿ ಹಲ್ಲೆ ನಡೆಸಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ವೈದ್ಯನೊಬ್ಬ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಬಳಿಕ ಥಳಿಸಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ. ವೈದ್ಯರೊಬ್ಬರು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡಿದ್ದು ಆರೋಪಿಯನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ. ಪ್ರತಿಯೊಂದು ಅಂಶವನ್ನು ಗಮನದಲ್ಲಿಟ್ಟುಕೊಂಡು ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ.

ಹರ್ಯಾಣ: ವೈದ್ಯಕೀಯ ವಿದ್ಯಾರ್ಥಿನಿಯ ಅಪಹರಿಸಿ ಹಲ್ಲೆ ನಡೆಸಿದ ವೈದ್ಯ
ಕಾಲೇಜುImage Credit source: India Today
ನಯನಾ ರಾಜೀವ್
|

Updated on: Aug 19, 2024 | 12:00 PM

Share

ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ನಿರತ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಹರ್ಯಾಣದ ರೋಹ್ಟಕ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.

ವೈದ್ಯರೊಬ್ಬರು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡಿದ್ದು ಆರೋಪಿಯನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ. ಪ್ರತಿಯೊಂದು ಅಂಶವನ್ನು ಗಮನದಲ್ಲಿಟ್ಟುಕೊಂಡು ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ.

ಪಿಜಿಐಎಂಎಸ್ ಬಿಡಿಎಸ್ ವಿದ್ಯಾರ್ಥಿ ನಿನ್ನೆ ರಾತ್ರಿ ಹಲ್ಲೆ ನಡೆದಿರುವ ಬಗ್ಗೆ ದೂರು ನೀಡಿದ್ದಾರೆ. ತಕ್ಷಣ ಪೊಲೀಸ್​ ತಂಡ ಆಸ್ಪತ್ರೆಗೆ ತಲುಪಿದ್ದಾರೆ. ಕೌನ್ಸೆಲಿಂಗ್ ಜತೆಗೆ ವಿದ್ಯಾರ್ಥಿಯ ಕುಟುಂಬ ಮತ್ತು ವಕೀಲರ ಸಮ್ಮುಖದಲ್ಲಿ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಯಿತು.

ಮತ್ತಷ್ಟು ಓದಿ: ತಮಿಳುನಾಡು: ಎನ್​ಸಿಸಿ ಶಿಬಿರದಲ್ಲಿ 12 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, 9 ಮಂದಿ ಬಂಧನ

ಸಂತ್ರಸ್ತೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಿಕೊಳ್ಳಲಾಗಿದೆ. ಆಗಸ್ಟ್ 16ರಂದು ಆರೋಪಿ ವಿದ್ಯಾರ್ಥಿನಿಯನ್ನು ಅಪಹರಿಸಿ ಚಂಡೀಗಢಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿನಿ ಹಾಗೂ ಆರೋಪಿ ಇಬ್ಬರೂ ಪಿಜಿಐಎಂಎಸ್​ಗೆ ಸೇರಿದವರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸಂತ್ರಸ್ತ ವಿದ್ಯಾರ್ಥಿನಿ ಬಿಡಿಎಸ್ ಓದುತ್ತಿದ್ದಾರೆ. ಇಬ್ಬರೂ ಸುಮಾರು 5-6 ತಿಂಗಳಿನಿಂದ ಪರಿಚಿತರು. ಲೈಂಗಿಕ ಕಿರುಕುಳ ಅಥವಾ ಅತ್ಯಾಚಾರ ನಡೆದಿರುವ ಬಗ್ಗೆ ವರದಿಯಾಗಿಲ್ಲ. ವಿಷಯದ ಗಂಭೀರತೆ ತಿಳಿದ ಪೊಲೀಸರು ದಾಳಿ ನಡೆಸಿ ಆರೋಪಯನ್ನು ಬಂಧಿಸಿದ್ದಾರೆ, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆಕೆಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು