ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ನಿರತ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಹರ್ಯಾಣದ ರೋಹ್ಟಕ್ನಲ್ಲಿ ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ವೈದ್ಯರೊಬ್ಬರು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ತಕ್ಷಣವೇ ಕ್ರಮ ಕೈಗೊಂಡಿದ್ದು ಆರೋಪಿಯನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ. ಪ್ರತಿಯೊಂದು ಅಂಶವನ್ನು ಗಮನದಲ್ಲಿಟ್ಟುಕೊಂಡು ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ.
ಪಿಜಿಐಎಂಎಸ್ ಬಿಡಿಎಸ್ ವಿದ್ಯಾರ್ಥಿ ನಿನ್ನೆ ರಾತ್ರಿ ಹಲ್ಲೆ ನಡೆದಿರುವ ಬಗ್ಗೆ ದೂರು ನೀಡಿದ್ದಾರೆ. ತಕ್ಷಣ ಪೊಲೀಸ್ ತಂಡ ಆಸ್ಪತ್ರೆಗೆ ತಲುಪಿದ್ದಾರೆ. ಕೌನ್ಸೆಲಿಂಗ್ ಜತೆಗೆ ವಿದ್ಯಾರ್ಥಿಯ ಕುಟುಂಬ ಮತ್ತು ವಕೀಲರ ಸಮ್ಮುಖದಲ್ಲಿ ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಯಿತು.
ಮತ್ತಷ್ಟು ಓದಿ: ತಮಿಳುನಾಡು: ಎನ್ಸಿಸಿ ಶಿಬಿರದಲ್ಲಿ 12 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, 9 ಮಂದಿ ಬಂಧನ
ಸಂತ್ರಸ್ತೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಿಕೊಳ್ಳಲಾಗಿದೆ. ಆಗಸ್ಟ್ 16ರಂದು ಆರೋಪಿ ವಿದ್ಯಾರ್ಥಿನಿಯನ್ನು ಅಪಹರಿಸಿ ಚಂಡೀಗಢಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿನಿ ಹಾಗೂ ಆರೋಪಿ ಇಬ್ಬರೂ ಪಿಜಿಐಎಂಎಸ್ಗೆ ಸೇರಿದವರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಸಂತ್ರಸ್ತ ವಿದ್ಯಾರ್ಥಿನಿ ಬಿಡಿಎಸ್ ಓದುತ್ತಿದ್ದಾರೆ. ಇಬ್ಬರೂ ಸುಮಾರು 5-6 ತಿಂಗಳಿನಿಂದ ಪರಿಚಿತರು. ಲೈಂಗಿಕ ಕಿರುಕುಳ ಅಥವಾ ಅತ್ಯಾಚಾರ ನಡೆದಿರುವ ಬಗ್ಗೆ ವರದಿಯಾಗಿಲ್ಲ. ವಿಷಯದ ಗಂಭೀರತೆ ತಿಳಿದ ಪೊಲೀಸರು ದಾಳಿ ನಡೆಸಿ ಆರೋಪಯನ್ನು ಬಂಧಿಸಿದ್ದಾರೆ, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆಕೆಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ