Manipur Violence: ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ
ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರವಿರಬಹುದು, ಅದನ್ನು ತಳ್ಳಿಹಾಕುವಂತಿಲ್ಲ ಎಂದು ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಹೇಳಿದ್ದಾರೆ.
ದೆಹಲಿ, ಜು29: ಮಣಿಪುರ ಹಿಂಸಾಚಾರ (Manipur Violence) ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಮಹತ್ವ ಬೆಳವಣಿಗಳು ನಡೆಯುತ್ತಿದೆ. ಇನ್ನೂ ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತಿರುವ ಹೊತ್ತಿನಲ್ಲಿ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರು ಈ ಬಗ್ಗೆ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರವಿರಬಹುದು, ಅದನ್ನು ತಳ್ಳಿಹಾಕುವಂತಿಲ್ಲ ಎಂದು ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಹೇಳಿದ್ದಾರೆ. ಈ ಹಿಂದೆ ಇಂತಹ ಅನೇಕ ಘಟನೆಗಳಿಗೆ ಚೀನಾ ಅನೇಕ ಬಂಡಾಯ ಗುಂಪುಗಳಿಗೆ ನೆರವುವನ್ನು ನೀಡಿತ್ತು ಎಂದು ಹೇಳಿದ್ದಾರೆ.
ಜನರಲ್ ನರವಾಣೆ ಅವರು ಗಡಿ ರಾಜ್ಯಗಳಲ್ಲಿನ ಅಸ್ಥಿರತೆಯು ದೇಶದ ಒಟ್ಟಾರೆ ರಾಷ್ಟ್ರೀಯ ಭದ್ರತೆಗೆ ತೊಂದರೆ ಉಂಟು ಮಾಡಬಹುದು ಎಂದು ಹೇಳಿದ್ದಾರೆ . ಅವರು ಇಂಡಿಯಾ ಇಂಟರ್‌ನ್ಯಾಶನಲ್ ಸೆಂಟರ್‌ನಲ್ಲಿ ನಡೆದ ‘ರಾಷ್ಟ್ರೀಯ ಭದ್ರತಾ ದೃಷ್ಟಿಕೋನ’ ಎಂಬ ವಿಷಯದ ಕುರಿತು ಪತ್ರಕರ್ತರೊಂದಿಗೆ ಸಂವಾದ ನಡೆಸುತ್ತಿರುವಾಗ, ಮಣಿಪುರ ಹಿಂಸಾಚಾರದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಇನ್ನೂ ನಮ್ಮ ದೇಶದ ಕಾನೂನು ವ್ಯವಸ್ಥೆ ಮತ್ತು ಪ್ರಧಾನ ಮಂತ್ರಿ ಅವರು ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಚರ್ಚೆಯನ್ನು ನಡೆಸಿದ್ದಾರೆ. ಆದರೆ ಈ ಗಲಭೆಗೆ ಸಂಬಂಧಿಸಿದಂತೆ ವಿದೇಶಿ ಏಜೆನ್ಸಿಗಳ ಪಾತ್ರವಿದೆ, ಅದರಲ್ಲೂ ಚೀನಾದ ನೆರವು ಖಂಡಿತ ಇದೆ. ಇಂತಹ ಕೃತ್ಯಗಳನ್ನು ಮಾಡಲು ದಂಗೆಕೋರರಿಗೆ ಚೀನಾ ನೆರವು ನೀಡುತ್ತದೆ ಎಂದು ಹೇಳಿದ್ದಾರೆ.
ಚೀನಾ ಇಂತಹ ದಂಗೆಗಳನ್ನು ನಡೆಸಲು ಹಲವು ವರ್ಷಗಳಿಂದ ನೆರವು ನೀಡುತ್ತಿದೆ. ಇಂದಿಗೂ ಇದು ಮುಂದುವರಿಯುತ್ತಿದೆ ಎಂದು ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಹೇಳಿದ್ದಾರೆ. ಇನ್ನೂ ಪತ್ರಕರ್ತರು ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಎಂಎಂ ನರವಾಣೆ ಮಾದಕವಸ್ತುಗಳ ಕಳ್ಳಸಾಗಣೆ ಅನೇಕ ವರ್ಷಗಳಿಂದ ನಡೆಯುತ್ತಿದೆ. ಇನ್ನೂ ಈ ಸಾಗಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ ಮಣಿಪುರ, ಹಿಂಸಾಚಾರಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ
ಇನ್ನೂ ಭಾರತ ಗೋಲ್ಡನ್ ಟ್ರಯಾಂಗಲ್‌ನಿಂದ ( ಥೈಲ್ಯಾಂಡ್ , ಮ್ಯಾನ್ಮಾರ್ ಮತ್ತು ಲಾವೋಸ್ ಗಡಿಗಳು ಸಂಧಿಸುವ ಪ್ರದೇಶ) ಸ್ವಲ್ಪ ದೂರದಲ್ಲಿದೆ. ಈ ಪ್ರದೇಶದಲ್ಲಿ ಚೀನಾ ಪ್ರಭಾವ ಹೆಚ್ಚು, ಈ ಕಾರಣದಿಂದ ಈ ಗಡಿಗಳ ಮೂಲಕ ಚೀನಾದ ಮಾದಕವಸ್ತುಗಳು ಭಾರತ ಒಳಗೆ ಬರುತ್ತಿದೆ. ಈ ಹಿಂಸಾಚಾರದಲ್ಲಿ ದೊಡ್ಡ ದೊಡ್ಡ ವ್ಯಕ್ತಿ, ನಾಯಕರು ಪಾತ್ರಗಳು ಇರಬಹುದು ಎಂದು ಹೇಳಿದ್ದಾರೆ. ಮಣಿಪುರ ಹಿಂಸಾಚಾರಕ್ಕೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಸದ್ಯದಲ್ಲೇ ಈ ಎಲ್ಲ ಘಟನೆಗಳಿಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಇನ್ನೂ ಅಗ್ನಿಪಥ್ ನೇಮಕಾತಿ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರು, ಇದು ಒಳ್ಳೆಯ ಯೋಜನೆಯೋ ಅಲ್ಲವೋ ಎಂಬುದನ್ನು ಕಾಲವೇ ಹೇಳಲಿದೆ. ಅಗ್ನಿಪಥ್ನ್ನು ಯೋಜಿತವಾಗಿ ಪ್ರಾರಂಭಿಸಲಾಗಿದೆ. ನಮಗೆ ಯುವ ಸೈನ್ಯದ ಅಗತ್ಯವಿದೆ ಆ ಕಾರಣದಿಂದ ಇದನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:39 pm, Sat, 29 July 23