Uttar Pradesh: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು

| Updated By: ವಿವೇಕ ಬಿರಾದಾರ

Updated on: Jul 19, 2023 | 8:34 AM

ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್ ಜಿಲ್ಲೆಯಲ್ಲಿ ನಡೆದಿದೆ.

Uttar Pradesh: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು
ಕುಸಿದ ಮೇಲ್ಛಾವಣಿ
Follow us on

ಲಖನೌ: ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಶಿಥಿಲಗೊಂಡ ಕಟ್ಟಡಗಳು ಧರೆಗೆ ಉರುಳುತ್ತಿವೆ. ಇದೀಗ ಉತ್ತರ ಪ್ರದೇಶದ (Uttar Pradesh) ಬುಲಂದ್​ಶಹರ್ ಜಿಲ್ಲೆಯ ನರಸೇನಾ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಾಯಿ ಗ್ರಾಮದಲ್ಲಿ ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ನಿರಂತರ ಮಳೆಯಿಂದ ಶಿಥಿಲಗೊಂಡಿದ್ದ ಮನೆ ಮೇಲ್ಛಾವಣಿ ಕುಸಿದು (Roof Collapse) ದುರಂತ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ನರಸೇನಾ ಪೊಲೀಸರು ಅವಶೇಷಗಳಡಿ ಸಿಲುಕಿದ್ದ ಶವಗಳನ್ನು ಹೊರತೆಗೆದಿದ್ದಾರೆ.

ಕೋಲ್ಡ್ ಸ್ಟೋರೇಜ್ ಚೇಂಬರ್‌ ಕುಸಿತ: 8 ಜನ ಸಾವು

ಇದೇ ವರ್ಷ ಮಾರ್ಚ್​​ ತಿಂಗಳಲ್ಲಿ ಉತ್ತರ ಪ್ರದೇಶದ  ಚಂಡೌಸಿ ಪಟ್ಟಣದಲ್ಲಿ ಇಂದಿರಾ ನಗರ ರಸ್ತೆಯಲ್ಲಿರುವ ಕೋಲ್ಡ್ ಸ್ಟೋರೇಜ್ ಚೇಂಬರ್‌ ಕುಸಿತವಾಗಿ ಎಂಟು ಜನರು ಸಾವನ್ನಪ್ಪಿದ್ದರು. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಮತ್ತು ಪ್ರಕರಣದ ತನಿಖೆ ನಡೆಸಲು  ಸಮಿತಿ ರಚಿಸಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಹಿಂದೂ ಧರ್ಮಕ್ಕೆ ಮತಾಂತರವಾಗಲು ಬಯಸಿದ ಮುಸ್ಲಿಂ ಯುವಕ;ಇದು ಬರೀ ನೆಪ ಎಂದು ಆರೋಪಿಸಿದ ಪತ್ನಿ

ಈ ಬಗ್ಗೆ ಸರ್ಕಾರಿ ಅಧಿಕಾರಿ ಮಾತನಾಡಿ ಮುಖ್ಯಮಂತ್ರಿಗಳು ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ. ತೀವ್ರವಾಗಿ ಗಾಯಗೊಂಡವರಿಗೆ 50,000 ರೂ. ಮತ್ತು ಗಾಯಗೊಂಡ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 am, Wed, 19 July 23