AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಅಧಿಕೃತ ಸಭೆಯಲ್ಲಿ ಪಂಜಾಬ್ ಸಿಎಂ ಚರಣ್​​ಜಿತ್ ಸಿಂಗ್ ಚನ್ನಿ ಜತೆ ಅವರ ಮಗನೂ ಭಾಗಿ; ವಿವಾದ ಸೃಷ್ಟಿ

Charanjit Singh Channi ಚನ್ನಿ ಅವರು ಈ ಸಭೆಯಲ್ಲಿ ಭಾಗಿಯಾಗಿದ್ದು ಅವರ ಮಗ ರಿದಂಜಿತ್ ಸಿಂಗ್ ಕೂಡ ಅಲ್ಲಿದ್ದರು. ಈ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ರಾಜ್ಯ ಪೊಲೀಸ್ ಮುಖ್ಯಸ್ಥರ ಹಿಂದೆ ರಿದಂಜಿತ್ ಸಿಂಗ್ ಕುಳಿತುಕೊಂಡಿರುವುದು ಕಾಣಿಸುತ್ತದೆ.

ಸರ್ಕಾರದ ಅಧಿಕೃತ ಸಭೆಯಲ್ಲಿ ಪಂಜಾಬ್ ಸಿಎಂ ಚರಣ್​​ಜಿತ್ ಸಿಂಗ್ ಚನ್ನಿ ಜತೆ ಅವರ ಮಗನೂ ಭಾಗಿ; ವಿವಾದ ಸೃಷ್ಟಿ
ಚನ್ನಿ ಜತೆ ಸರ್ಕಾರದ ಅಧಿಕೃತ ಸಭೆಯಲ್ಲಿ ಭಾಗಿಯಾಗಿರುವ ರಿದಂಜಿತ್ ಸಿಂಗ್ ಚನ್ನಿ
TV9 Web
| Edited By: |

Updated on: Oct 03, 2021 | 1:06 PM

Share

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್​​ಜಿತ್ ಸಿಂಗ್ ಚನ್ನಿ ಅವರ ಮಗ ಅಧಿಕೃತ ಸಭೆಯಲ್ಲಿ ಹಾಜರಾಗಿದ್ದು ಪಂಜಾಬಿನಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತೊಂದು ವಿವಾದಕ್ಕೆ ಸಿಲುಕಿದೆ. ಸಭೆಯ ಅಧ್ಯಕ್ಷತೆಯನ್ನು ಡಿಜಿಪಿ ಇಕ್ಬಾಲ್ ಪ್ರೀತ್ ಸಿಂಗ್ ಸಹೋತಾ ವಹಿಸಿದ್ದರು, ಅದರಲ್ಲಿ ಮುಖ್ಯಮಂತ್ರಿ ಕೂಡಾ ಹಾಜರಿದ್ದರು.  ಲೈವ್ ಹಿಂದೂಸ್ತಾನ್ ವರದಿ ಪ್ರಕಾರ, ಡಿಜಿಪಿ ಸಹೋತಾ ಅವರು ಇತ್ತೀಚೆಗೆ ಉನ್ನತ ಹುದ್ದೆಗೆ ಏರಿದ್ದು, ಗುರುವಾರ ಗಡಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಸಭೆನಡೆಸುತ್ತಿದ್ದರು. ಚನ್ನಿ ಅವರು ಈ ಸಭೆಯಲ್ಲಿ ಭಾಗಿಯಾಗಿದ್ದು ಅವರ ಮಗ ರಿದಂಜಿತ್ ಸಿಂಗ್ ಕೂಡ ಅಲ್ಲಿದ್ದರು. ಈ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ರಾಜ್ಯ ಪೊಲೀಸ್ ಮುಖ್ಯಸ್ಥರ ಹಿಂದೆ ರಿದಂಜಿತ್ ಸಿಂಗ್ ಕುಳಿತುಕೊಂಡಿರುವುದು ಕಾಣಿಸುತ್ತದೆ. ಈ ಬಗ್ಗೆ ಪತ್ರಕರ್ತ ಅಮನ್ ಸಿಂಗ್ ಛಿನಾ “ಸಿಎಂ ಚನ್ನಿಯ ಮಗ ಕಾನೂನು ಮತ್ತು ಸುವ್ಯವಸ್ಥೆ ಸಭೆಯಲ್ಲಿ ಕುಳಿತು ಡಿಜಿಪಿ ಮತ್ತು ಇತರ ಅಧಿಕಾರಿಗಳು ಮತ್ತು ಸಚಿವರನ್ನು ಭೇಟಿಯಾಗುವುದನ್ನು ಬಿಜೆಪಿ ವಿರೋಧಿಸಿದೆ. ಅವನು ಹಿಂದೆ ಕುಳಿತಿರುವುದನ್ನು ಕಾಣಬಹುದು. , ಈ ಚಿತ್ರಗಳನ್ನು ಪಂಜಾಬ್ ಸರ್ಕಾರದ ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ ಬಿಡುಗಡೆ ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸಿಎಂ ಮೇಲೆ ಟೀಕಾ ಪ್ರಹಾರ ಮಾಡಿದ ಪ್ರತಿಪಕ್ಷ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪಂಜಾಬ್ ಘಟಕದ ಅಧ್ಯಕ್ಷ ಅಶ್ವಿನಿ ಶರ್ಮಾ, ಮೂರು ಅವಧಿಯ ಶಾಸಕರಾಗಿ ಚನ್ನಿ ನಿಯಮಗಳು ಮತ್ತು ನಿಬಂಧನೆಗಳ ಬಗ್ಗೆ ತಿಳಿದಿರಬೇಕು ಎಂದು ಹೇಳಿದರು. ಹಿರಿಯ ಅಧಿಕಾರಿಗಳಿಗೆ ನಿಯಮಗಳ ಬಗ್ಗೆ ತಿಳಿದಿದ್ದರೂ ಸಹ ಇದನ್ನು ಅನುಮತಿಸಿದ್ದು ದುರದೃಷ್ಟಕರ ಎಂದು ಶರ್ಮಾ ಹೇಳಿರುವುದಾಗಿ ಲೈವ್ ಹಿಂದೂಸ್ತಾನ್ ವರದಿ ಮಾಡಿದೆ. ಕ್ರೀಡಾ ಖಾತೆ ಹೊಂದಿರುವ ಕ್ಯಾಬಿನೆಟ್ ಸಚಿವ ಪರ್ಗತ್ ಸಿಂಗ್ ಕೂಡಾ ಸಭೆಯಲ್ಲಿ ಭಾಗವಹಿಸಿದ್ದರು.

ಮುಖ್ಯಮಂತ್ರಿಯ ಕುಟುಂಬದ ಸದಸ್ಯರು ಅಥವಾ ಯಾವುದೇ ಸಚಿವರ ಉಪಸ್ಥಿತಿಯು ರಾಜ್ಯ ಸರ್ಕಾರದ ವ್ಯವಹಾರದ ನಿಯಮಗಳನ್ನು ಉಲ್ಲಂಘಿಸುತ್ತದೆ ಎಂದು ನಿವೃತ್ತ ಅಧಿಕಾರಿ ಮತ್ತು ಕಾನೂನು ತಜ್ಞರನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ..ಅವರ ಪ್ರಕಾರ, ಇಂತಹ ಸನ್ನಿವೇಶವು ಅಧಿಕೃತ ರಹಸ್ಯ ಕಾಯ್ದೆಯನ್ನು ಸಹ ಉಲ್ಲಂಘಿಸುತ್ತದೆ. ಸಿಎಂ ಮತ್ತು ಮಂತ್ರಿಗಳು ಸರ್ಕಾರಿ ವಿಷಯಗಳನ್ನು ಗೌಪ್ಯವಾಗಿ ಇಡುವುದಾಗಿ ಪ್ರಮಾಣ ವಚನ ವೇಳೆ ಪ್ರತಿಜ್ಞೆ ಕೈಗೊಳ್ಳುತ್ತಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: RCB Playing XI: ಪಂಜಾಬ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದಲ್ಲಿ ಒಂದು ಬದಲಾವಣೆ ಖಚಿತ

ಇದನ್ನೂ ಓದಿ: ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?