ಗಾಂಧಿ ಶಾಂತಿ ಪ್ರಶಸ್ತಿ ಗೌರವ ವಿವಾದ: 1 ಕೋಟಿ ರೂಪಾಯಿ ನಗದು ಬಹುಮಾನ ನಿರಾಕರಿಸಿದ ಗೀತಾ ಪ್ರೆಸ್

ಆದಾಗ್ಯೂ, ಪ್ರಕಾಶಕರು ಪ್ರಶಸ್ತಿ ಪ್ರಮಾಣ ಪತ್ರವನ್ನು ಮಾತ್ರ ಸ್ವೀಕರಿಸುವುದಾಗಿ ಹೇಳಿದ್ದಾರೆ. ಸರ್ಕಾರವು ನಗದು ಬಹುಮಾನದ ಮೊತ್ತವನ್ನು ಬೇರೆಡೆ ಖರ್ಚು ಮಾಡಬೇಕೆಂದು ಪ್ರೆಸ್ ಹೇಳಿದೆ. ಪ್ರಶಸ್ತಿಯು ಫಲಕ ಮತ್ತು ಸೊಗಸಾದ ಸಾಂಪ್ರದಾಯಿಕ ಕರಕುಶಲ/ಕೈಮಗ್ಗದ ವಸ್ತುವನ್ನು ಸಹ ಒಳಗೊಂಡಿದೆ.

ಗಾಂಧಿ ಶಾಂತಿ ಪ್ರಶಸ್ತಿ ಗೌರವ ವಿವಾದ: 1 ಕೋಟಿ ರೂಪಾಯಿ ನಗದು ಬಹುಮಾನ ನಿರಾಕರಿಸಿದ ಗೀತಾ ಪ್ರೆಸ್
ಗೀತಾ ಪ್ರೆಸ್
Follow us
ರಶ್ಮಿ ಕಲ್ಲಕಟ್ಟ
|

Updated on:Jun 19, 2023 | 4:59 PM

2021 ರ ಗಾಂಧಿ ಶಾಂತಿ ಪ್ರಶಸ್ತಿ (Gandhi Peace Prize )ಜತೆ ನೀಡುವ 1 ಕೋಟಿ ರೂಪಾಯಿ ನಗದು ಬಹುಮಾನವನ್ನು ಸ್ವೀಕರಿಸಲು ವಿಶ್ವದ ಅತಿದೊಡ್ಡ ಪ್ರಕಾಶಕರಲ್ಲಿ ಒಂದಾಗಿರುವ ಗೋರಖ್‌ಪುರದ ಗೀತಾ ಪ್ರೆಸ್ (Gita Press Gorakhpur)ನಿರಾಕರಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ತೀರ್ಪುಗಾರರ ಸಮಿತಿಯು ಭಾನುವಾರ ಗೀತಾ ಪ್ರೆಸ್ ಅನ್ನು ಪ್ರಶಸ್ತಿಗೆ ಆಯ್ಕೆ ಮಾಡಿತ್ತು. 2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಪಡೆದಿರುವ ಗೀತಾ ಪ್ರೆಸ್, ಗೋರಖ್‌ಪುರವನ್ನು ನಾನು ಅಭಿನಂದಿಸುತ್ತೇನೆ. ಅದು ಕಳೆದ 100 ವರ್ಷಗಳಲ್ಲಿ ಜನರಲ್ಲಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿವರ್ತನೆಗಳನ್ನು ಹೆಚ್ಚಿಸಲು ಶ್ಲಾಘನೀಯ ಕೆಲಸ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, ಪ್ರಕಾಶಕರು ಪ್ರಶಸ್ತಿ ಪ್ರಮಾಣ ಪತ್ರವನ್ನು ಮಾತ್ರ ಸ್ವೀಕರಿಸುವುದಾಗಿ ಹೇಳಿದ್ದಾರೆ. ಸರ್ಕಾರವು ನಗದು ಬಹುಮಾನದ ಮೊತ್ತವನ್ನು ಬೇರೆಡೆ ಖರ್ಚು ಮಾಡಬೇಕೆಂದು ಪ್ರೆಸ್ ಹೇಳಿದೆ. ಪ್ರಶಸ್ತಿಯು ಫಲಕ ಮತ್ತು ಸೊಗಸಾದ ಸಾಂಪ್ರದಾಯಿಕ ಕರಕುಶಲ/ಕೈಮಗ್ಗದ ವಸ್ತುವನ್ನು ಸಹ ಒಳಗೊಂಡಿದೆ.

ಗೀತಾ ಪ್ರೆಸ್ ಅನ್ನು ಗೌರವಿಸುವ ನಿರ್ಧಾರವನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದ್ದು ಇದು “ಅಪಹಾಸ್ಯ. “ಸಾವರ್ಕರ್ ಮತ್ತು ಗೋಡ್ಸೆಗೆ ಪ್ರಶಸ್ತಿ ನೀಡಿದಂತೆ” ಎಂದು ಕರೆದಿದೆ.

ಈ ವರ್ಷ ತನ್ನ ಶತಮಾನೋತ್ಸವವನ್ನು ಆಚರಿಸುತ್ತಿರುವ ಗೋರಖ್‌ಪುರದ ಗೀತಾ ಪ್ರೆಸ್‌ಗೆ 2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ.

ಗೀತಾ ಪ್ರೆಸ್‌ ಕುರಿತು ಹಿರಿಯ ಪತ್ರಕರ್ತ ಅಕ್ಷಯ್‌ ಮುಕುಲ್‌ ಬರೆದಿರುವ ಗೀತಾ ಪ್ರೆಸ್‌ ಅಂಡ್‌ ದ ಮೇಕಿಂಗ್‌ ಆಫ್‌ ಹಿಂದುತ್ವ ಎನ್ನುವ ಕೃತಿಯ ಮುಖಪುಟವನ್ನು ಟ್ವೀಟ್ ಮಾಡಿದ ಜೈರಾಮ್ ರಮೇಶ್, ಗಾಂಧಿ ಅವರ ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ವಿಚಾರಗಳಲ್ಲಿ ‌ಗೀತಾ ಪ್ರೆಸ್‌ ಹೊಂದಿದ್ದ ಸಂಬಂಧಗಳನ್ನು ಈ ಕೃತಿ ಬಯಲಿಗೆಳೆಯುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: PMJJBY Insurance Premium: ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಸುರಕ್ಷಾ ಬಿಮಾ ಯೋಜನೆ ವಿಮಾ ಕಂತುಗಳನ್ನು ಹೆಚ್ಚಿಸಿದ ಸರ್ಕಾರ

ಗಾಂಧಿ ಶಾಂತಿ ಪ್ರಶಸ್ತಿಯು ಮಹಾತ್ಮ ಗಾಂಧಿಯವರ 125 ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರು ಪ್ರತಿಪಾದಿಸಿದ ಆದರ್ಶಗಳಿಗೆ ಗೌರವವಾಗಿ 1995 ರಲ್ಲಿ ಸ್ಥಾಪಿಸಲಾದ ವಾರ್ಷಿಕ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯು ರಾಷ್ಟ್ರೀಯತೆ, ಜನಾಂಗ, ಭಾಷೆ, ಜಾತಿ, ಮತ ಅಥವಾ ಲಿಂಗವನ್ನು ಪರಿಗಣಿಸದೆ ಎಲ್ಲಾ ವ್ಯಕ್ತಿಗಳಿಗೆ ಮುಕ್ತವಾಗಿದೆ. ಈ ಹಿಂದೆ ಸುಲ್ತಾನ್ ಕಬೂಸ್ ಬಿನ್ ಸೈದ್ ಅಲ್ ಸೈದ್, ಒಮಾನ್ (2019) ಮತ್ತು ಬಾಂಗ್ಲಾದೇಶದ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ (2020) ಅವರಿಗೂ ಈ ಪ್ರಶಸ್ತಿ ನೀಡಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Mon, 19 June 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ