Rozgar Mela: 71,000 ಯುವಕರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ, ಇಂದು ಪ್ರಧಾನಿ ಮೋದಿಯಿಂದ ನೇಮಕಾತಿ ಪತ್ರ ವಿತರಣೆ

Rozgar Mela: ಉದ್ಯೋಗ ಮೇಳದಡಿ (Rozgar Mela) ನೇಮಕಗೊಂಡ 71 ಸಾವಿರ ಯುವಕರಿಗೆ ಇಂದು ಅಂದರೆ ಮೇ 16 ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೇಮಕಾತಿ ಪತ್ರ ವಿತರಿಸಲಿದ್ದಾರೆ.

Rozgar Mela: 71,000 ಯುವಕರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ, ಇಂದು ಪ್ರಧಾನಿ ಮೋದಿಯಿಂದ ನೇಮಕಾತಿ ಪತ್ರ ವಿತರಣೆ
ನರೇಂದ್ರ ಮೋದಿImage Credit source: Hindustan Times
Follow us
ನಯನಾ ರಾಜೀವ್
|

Updated on:May 16, 2023 | 8:05 AM

ಉದ್ಯೋಗ ಮೇಳದಡಿ (Rozgar Mela) ನೇಮಕಗೊಂಡ 71 ಸಾವಿರ ಯುವಕರಿಗೆ ಇಂದು ಅಂದರೆ ಮೇ 16 ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೇಮಕಾತಿ ಪತ್ರ ವಿತರಿಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ನೇಮಕಾತಿ ಪತ್ರ ವಿತರಣೆಗೆ ಚಾಲನೆ ನೀಡಲಿದ್ದಾರೆ.  ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ ಗಾರ್ ಮೇಳವು ಒಂದು ಹೆಜ್ಜೆಯಾಗಿದೆ.

ಕಳೆದ ವರ್ಷ ಅಕ್ಟೋಬರ್ 22 ರಂದು 10 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ರೋಜ್​ಗಾರ್ ಮೇಳದ ಮೊದಲ ಹಂತಕ್ಕೆ ಪ್ರಧಾನಿ ಚಾಲನೆ ನೀಡಿದ್ದರು. ಹೊಸದಾಗಿ ಆಯ್ಕೆಯಾದವರು ರೈಲು ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಸೀನಿಯರ್ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಇನ್ಸ್ ಪೆಕ್ಟರ್, ಸಬ್-ಇನ್ಸ್ಪೆಕ್ಟರ್, ಕಾನ್ಸ್ ಟೇಬಲ್, ಸ್ಟೆನೋಗ್ರಾಫರ್, ಜೂನಿಯರ್ ಅಕೌಂಟೆಂಟ್, ಪೋಸ್ಟಲ್ ಅಸಿಸ್ಟೆಂಟ್, ಆದಾಯ ತೆರಿಗೆ ಇನ್ಸ್ಪೆಕ್ಟರ್, ಟ್ಯಾಕ್ಸ್ ಅಸಿಸ್ಟೆಂಟ್, ಸೀನಿಯರ್ ಡ್ರಾಫ್ಟ್ಮನ್, ಜೆಇ/ಸೂಪರ್ವೈಸರ್, ಅಸಿಸ್ಟೆಂಟ್ ದೇಶವು ಪ್ರೊಫೆಸರ್, ಟೀಚರ್, ಲೈಬ್ರರಿಯನ್, ನರ್ಸ್, ಪ್ರೊಬೇಷನರಿ ಆಫೀಸರ್, ಪಿಎ, ಎಂಟಿಎಸ್ ನಂತಹ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡುತ್ತಾರೆ.

ಮತ್ತಷ್ಟು ಓದಿ: Rozgar Mela 2023: 71 ಸಾವಿರ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ, 2023ರ ಅಂತ್ಯದೊಳಗೆ 10 ಲಕ್ಷ ಮಂದಿಗೆ ನೌಕರಿ

ಹೊಸ ನೇಮಕಾತಿದಾರರು ‘ಕರ್ಮಯೋಗಿ ಪ್ರಮುಖ್’ ಮೂಲಕ ತರಬೇತಿ ಪಡೆಯಲು ಅವಕಾಶವನ್ನು ಪಡೆಯುತ್ತಾರೆ. ಇದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಎಲ್ಲಾ ಹೊಸ ನೇಮಕಾತಿಗಳಿಗೆ ಆನ್ ಲೈನ್ ಮಾದರಿಯ ಕೋರ್ಸ್ ಆಗಿದೆ.

ಈ ಉದ್ಯೋಗ ಮೇಳವನ್ನು ದೇಶದ 45 ಸ್ಥಳಗಳಲ್ಲಿ ಆಯೋಜಿಸಲಾಗುವುದು. ಈ ಸ್ಥಳಗಳಲ್ಲಿ ಅಧಿಕಾರಿಗಳ ಮೂಲಕ ನೇಮಕಾತಿ ಪತ್ರಗಳನ್ನು ನೀಡಲಾಗುವುದು. ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 71 ಸಾವಿರ ಯುವಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಈ ನೇಮಕಾತಿಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದಲೂ ಮಾಡಲಾಗುತ್ತಿದೆ.

ಗಮನಾರ್ಹ ಸಂಗತಿ ಎಂದರೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಹೆಜ್ಜೆ ಈ ಉದ್ಯೋಗ ಮೇಳ. ಉದ್ಯೋಗ ಮೇಳ ಮತ್ತಷ್ಟು ಉದ್ಯೋಗ ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂಬುದು ಕೇಂದ್ರ ಸರ್ಕಾರದ ಆಶಯ, ಇದು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:04 am, Tue, 16 May 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್