AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rozgar Mela: ಪ್ರಧಾನಿ ಮೋದಿಯಿಂದ 51,000 ಮಂದಿಗೆ ನೇಮಕಾತಿ ಪತ್ರ ವಿತರಣೆ

ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ ಸಿಬ್ಬಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಿದರು.

Rozgar Mela: ಪ್ರಧಾನಿ ಮೋದಿಯಿಂದ 51,000 ಮಂದಿಗೆ ನೇಮಕಾತಿ ಪತ್ರ ವಿತರಣೆ
ನರೇಂದ್ರ ಮೋದಿ
ಗಣಪತಿ ಶರ್ಮಾ
|

Updated on: Nov 30, 2023 | 7:49 PM

Share

ನವದೆಹಲಿ, ನವೆಂಬರ್ 30: ರೋಜ್​ಗಾರ್ ಮೇಳ ಯೋಜನೆಯಡಿ (Rozgar Mela) ವಿವಿಧ ಇಲಾಖೆಗಳಿಗೆ, ಕಚೇರಿಗಳಿಗೆ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಮಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ನೇಮಕಾತಿ ಪತ್ರಗಳನ್ನು ವಿತರಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಣೆಗೆ ಚಾಲನೆ ನೀಡಿದ ಅವರು, ಹೊಸದಾಗಿ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಿದರು. ರೋಜ್​ಗಾರ್ ಮೇಳವು ಯುವಕರಿಗೆ ‘ವಿಕಸಿತ್ ಭಾರತ್​​’ನ ರೂವಾರಿಗಳಾಗಲು ದಾರಿ ಮಾಡಿಕೊಡುತ್ತದೆ ಎಂದು ಮೋದಿ ಹೇಳಿದರು.

ನೇಮಕಾತಿ ಪತ್ರಗಳನ್ನು ಪಡೆದವರಿಗೆ ಅಭಿನಂದನೆಗಳು ಮತ್ತು ಇದು ಅವರ ಕಠಿಣ ಪರಿಶ್ರಮ ಮತ್ತು ಪ್ರತಿಭೆಯ ಫಲಿತಾಂಶ ಎಂದು ಮೋದಿ ಒತ್ತಿ ಹೇಳಿದರು.

‘ಇಂದು, 50,000 ಕ್ಕೂ ಹೆಚ್ಚು ಜನರು ಸರ್ಕಾರಿ ಉದ್ಯೋಗಕ್ಕಾಗಿ ಆಫರ್ ಲೆಟರ್‌ಗಳನ್ನು ಪಡೆದಿದ್ದಾರೆ. ಈ ಆಫರ್ ಲೆಟರ್‌ಗಳು ನಿಮ್ಮ ಪ್ರಯತ್ನ ಮತ್ತು ಪ್ರತಿಭೆಯ ಫಲಿತಾಂಶವಾಗಿದೆ. ಈ ಸಂದರ್ಭದಲ್ಲಿ ನಾನು ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಅಭಿನಂದಿಸಲು ಬಯಸುತ್ತೇನೆ. ಭಾರತ ಸರ್ಕಾರದ ಉದ್ಯೋಗಿಗಳಾದ ನೀವು ಪ್ರತಿಯೊಬ್ಬರೂ ಹಲವಾರು ಜವಾಬ್ದಾರಿಗಳನ್ನು ಪೂರೈಸಬೇಕು. ನೀವು ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೂ, ನಿಮ್ಮ ಮೊದಲ ಆದ್ಯತೆಯು ದೇಶದ ಜನರ ಜೀವನ ಸುಲಭವಾಗಿಸುವುದಾಗಿರಬೇಕು’ ಎಂದು ಪ್ರಧಾನಿ ಹೇಳಿದರು.

ತಮ್ಮ ಭಾಷಣದಲ್ಲಿ, ದೇಶದ ಯುವಕರಿಗೆ ಉದ್ಯೋಗ ಒದಗಿಸಲು ಕೇಂದ್ರ ಸರ್ಕಾರ ಹೇಗೆ ನಿರಂತರವಾಗಿ ಶ್ರಮಿಸುತ್ತಿದೆ ಎಂಬುದರ ಕುರಿತು ಅವರು ಮತ್ತಷ್ಟು ಬೆಳಕು ಚೆಲ್ಲಿದರು.

ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ: ಪೋಲ್‌ ಸ್ಟ್ರಾಟ್ ಮತಗಟ್ಟೆ ಸಮೀಕ್ಷೆ ಏನು ಹೇಳುತ್ತಿದೆ?

ಮುಂಬೈನ ರಾಯಲ್ ಒಪೇರಾ ಹೌಸ್‌ನಲ್ಲಿ ನೇಮಕಾತಿ ಪತ್ರ ವಿತರಣಾ ಸಮಾರಂಭದಲ್ಲಿ ಉಪಸ್ಥಿತರಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಭಾರತದ ಬೆಳವಣಿಗೆಯ ಪಥವನ್ನು ಒತ್ತಿಹೇಳಿದರು, 2047 ರಲ್ಲಿ (100 ನೇ ಸ್ವಾತಂತ್ರ್ಯೋತ್ಸವದ ವೇಳೆ) ಭಾರತವು 35 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More