Rozgar Mela: ಸರ್ಕಾರಿ ಉದ್ಯೋಗ ಸೌಲಭ್ಯವಲ್ಲ, ದೇಶ ಸೇವೆ ಮಾಡುವ ಅವಕಾಶ; ರೋಜ್‌ಗಾರ್ ಮೇಳಕ್ಕೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳಕ್ಕೆ ಇಂದು ಚಾಲನೆ ನೀಡಿದ್ದಾರೆ. 10 ಲಕ್ಷ ಸಿಬ್ಬಂದಿಯನ್ನು ನೇಮಕಾತಿ ಮಾಡುವ ಅಭಿಯಾನ ಇದಾಗಿದೆ.
ನವದೆಹಲಿ: ಆರ್ಥಿಕತೆಯಲ್ಲಿ ಕಳೆದ 7-8 ವರ್ಷಗಳಲ್ಲಿ ನಾವು 10ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಜಿಗಿದಿದ್ದೇವೆ. ಕಳೆದ 8 ವರ್ಷಗಳಲ್ಲಿ ಕೈಗೊಂಡ ಸುಧಾರಣೆಗಳಿಂದಾಗಿ ಈ ಸಾಧನೆ ಮಾಡಿದ್ದೇವೆ. ನಮ್ಮ ಕರ್ಮಯೋಗಿಗಳ ಶ್ರಮದಿಂದ ಸರ್ಕಾರಿ ಇಲಾಖೆಗಳ ದಕ್ಷತೆ ಹೆಚ್ಚಾಗಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬ ಸಂಕಲ್ಪವನ್ನು ಈಡೇರಿಸಲು ನಾವು ಸ್ವಾವಲಂಬಿ ಭಾರತದ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ. ಸರ್ಕಾರಿ ಕೆಲಸವೆಂಬುದು ಸೌಕರ್ಯ ಮಾತ್ರವಲ್ಲ, ಅದು ನಿಮಗೆ ದೇಶ ಸೇವೆ ಮಾಡಲು ಸಿಕ್ಕಿದ ಅವಕಾಶ ಎಂದುಕೊಳ್ಳಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳಕ್ಕೆ (Rozgar Mela) ಇಂದು ಚಾಲನೆ ನೀಡಿದ್ದಾರೆ. 10 ಲಕ್ಷ ಸಿಬ್ಬಂದಿಯನ್ನು ನೇಮಕಾತಿ ಮಾಡುವ ಅಭಿಯಾನ ಇದಾಗಿದೆ. ಈ ಸಮಾರಂಭದಲ್ಲಿ ಮೊದಲ ಹಂತದಲ್ಲಿ ಹೊಸದಾಗಿ ಸೇರ್ಪಡೆಗೊಂಡ 75 ಸಾವಿರ ಮಂದಿಗೆ ಇಂದು ನೇಮಕಾತಿ ಪತ್ರ ವಿತರಿಸಲಾಗಿದೆ. ಹಾಗೇ, ರೋಜ್‌ಗಾರ್ ಮೇಳದ ಪ್ರಯುಕ್ತ ವಿವಿಧ ಸರ್ಕಾರಿ ಉದ್ಯೋಗಗಳಿಗೆ ಆಯ್ಕೆಯಾದ ಕೆಲವು ಅಭ್ಯರ್ಥಿಗಳಿಗೆ ಕೇಂದ್ರ ಸಚಿವರು ದೇಶಾದ್ಯಂತ ವಿವಿಧ ಭಾಗಗಳಲ್ಲಿ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ್ದಾರೆ. ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಮತ್ತು ನಾಗರಿಕರ ಕಲ್ಯಾಣವನ್ನು ಖಾತ್ರಿಪಡಿಸುವ ಪ್ರಧಾನ ಮಂತ್ರಿಯವರ ನಿರಂತರ ಬದ್ಧತೆಯನ್ನು ಪೂರೈಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.
India is today 5th largest economy in the world. In last 8 yrs, we’ve jumped to the 5th position from 10th position. It’s true that many big economies of world are struggling with inflation, unemployment…side effects of biggest crisis in 100yrs can’t just go away in 100 days:PM pic.twitter.com/ZiSp2uoErA
— ANI (@ANI) October 22, 2022
ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಈಡೇರಿಸಲು ನಾವು ಸ್ವಾವಲಂಬಿ ಭಾರತದ ಹಾದಿಯಲ್ಲಿ ನಡೆಯುತ್ತಿದ್ದೇವೆ. ಭಾರತದ ಯುವ ಶಕ್ತಿಗೆ ಇಂದು ಮಹತ್ವದ ದಿನವಾಗಿದೆ. ಗ್ರಾಮಗಳಲ್ಲಿ ಹೆಚ್ಚಿನ ಸಂಖ್ಯೆಯ ಉದ್ಯೋಗ ಸೃಷ್ಟಿಗೆ ಇನ್ನೊಂದು ಉದಾಹರಣೆಯೆಂದರೆ ನಮ್ಮ ಖಾದಿ ಮತ್ತು ಗ್ರಾಮೋದ್ಯೋಗ. ದೇಶದಲ್ಲೇ ಪ್ರಥಮ ಬಾರಿಗೆ ಖಾದಿ ಮತ್ತು ಗ್ರಾಮೋದ್ಯೋಗ 1 ಲಕ್ಷ ಕೋಟಿ ರೂ. ದಾಟಿದೆ. ಈ ವರ್ಷಗಳಲ್ಲಿ ಖಾದಿ ಮತ್ತು ಗ್ರಾಮೋದ್ಯೋಗದಲ್ಲಿ 1 ಕೋಟಿಗೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ. ಇದರಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಮಹಿಳೆಯರ ಪಾಲು ಇದೆ ಎಂದು ಮೋದಿ ಹೇಳಿದ್ದಾರೆ.
ಇದನ್ನೂ ಓದಿ: Atmanirbhar Bharat Rojgar Yojana: ಆತ್ಮನಿರ್ಭರ್ ಭಾರತ್ ರೋಜ್‌ಗಾರ್ ಯೋಜನೆ ಮಾರ್ಚ್ 31ರ ತನಕ ವಿಸ್ತರಣೆ
ಆರ್ಥಿಕತೆಯಲ್ಲಿ ಕಳೆದ 7-8 ವರ್ಷಗಳಲ್ಲಿ ನಾವು 10ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಜಿಗಿದಿದ್ದೇವೆ. ಅಡೆತಡೆಗಳನ್ನು ಸೃಷ್ಟಿಸುತ್ತಿದ್ದ ದೇಶದ ಆರ್ಥಿಕತೆಯ ನ್ಯೂನತೆಗಳನ್ನು ಕಳೆದ ಎಂಟು ವರ್ಷಗಳಲ್ಲಿ ನಾವು ಹೋಗಲಾಡಿಸಿದ್ದರಿಂದ ಇದು ಸಾಧ್ಯವಾಗುತ್ತಿದೆ. ನಾವು ಯುವಜನರ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇವೆ. ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ ಅಡಿಯಲ್ಲಿ ದೇಶದ ಉದ್ಯಮಗಳ ಅಗತ್ಯತೆಗಳಿಗೆ ಅನುಗುಣವಾಗಿ ಯುವಜನರಿಗೆ ತರಬೇತಿ ನೀಡುವ ಬೃಹತ್ ಅಭಿಯಾನ ನಡೆಯುತ್ತಿದೆ. ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಈಡೇರಿಕೆಗಾಗಿ ನಾವು ಸ್ವಾವಲಂಬಿ ಭಾರತದ ಹಾದಿಯಲ್ಲಿ ನಡೆಯುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇದರಲ್ಲಿ ನಮ್ಮ ನವೋದ್ಯಮಿಗಳು, ಉದ್ಯಮಿಗಳು, ರೈತರು, ಸೇವೆ ಮತ್ತು ಉತ್ಪಾದನಾ ಸಹವರ್ತಿಗಳ ಪಾತ್ರವಿದೆ. ಇಂದು ಕೇಂದ್ರ ಸರ್ಕಾರ 75 ಸಾವಿರ ಯುವಕರಿಗೆ ನೇಮಕಾತಿ ಪತ್ರ ನೀಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.
Addressing the Rozgar Mela where appointment letters are being handed over to the newly inducted appointees. https://t.co/LFD3jHYNIn
— Narendra Modi (@narendramodi) October 22, 2022
ಕಳೆದ 8 ವರ್ಷಗಳಲ್ಲಿ ಈ ಹಿಂದೆಯೂ ಲಕ್ಷಾಂತರ ಯುವಕರಿಗೆ ನೇಮಕಾತಿ ಪತ್ರ ನೀಡಲಾಗಿದೆ. ಕಳೆದ 8 ವರ್ಷಗಳಲ್ಲಿ ದೇಶದಲ್ಲಿ ಉದ್ಯೋಗ ಮತ್ತು ಸ್ವಯಂ ಉದ್ಯೋಗ ಅಭಿಯಾನ ನಡೆಯುತ್ತಿದ್ದು, ಇಂದು ಅದಕ್ಕೆ ಮತ್ತೊಂದು ಕೊಂಡಿ ಸೇರ್ಪಡೆಯಾಗುತ್ತಿದೆ. ಇದು ಉದ್ಯೋಗ ಮೇಳದ ಕೊಂಡಿ. ಇಂದು ಕೇಂದ್ರ ಸರ್ಕಾರ 75 ಸಾವಿರ ಯುವಕರಿಗೆ ನೇಮಕಾತಿ ಪತ್ರ ನೀಡುತ್ತಿದೆ. ಸ್ವಾವಲಂಬಿ ಭಾರತದ ಮೆಟ್ಟಿಲುಗಳ ಮೇಲೆ ನಾವು ನಡೆಯುತ್ತಿದ್ದೇವೆ ಎಂದು ಮೋದಿ ಹೇಳಿದ್ದಾರೆ.
Despite this, India, with full force, new initiatives & some risks, has been trying to save itself from the global crisis. We’ve been able to save ourselves till now with your cooperation. We have, in last 8yrs, minimized the issues which created obstacles in our economy: PM Modi pic.twitter.com/ifgEPMST35
— ANI (@ANI) October 22, 2022
ಇಂದು ಸರ್ಕಾರಿ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಯಾಗಿದೆ. ದೇಶದಲ್ಲಿ ಕೆಲಸದ ಸಂಸ್ಕೃತಿಯೂ ಬದಲಾಗುತ್ತಿದೆ. ಸ್ಕಿಲ್ ಇಂಡಿಯಾ ಅಭಿಯಾನದಡಿಯಲ್ಲಿ ಒಂದು ಕೋಟಿಗೂ ಹೆಚ್ಚು ಯುವಕರನ್ನು ನುರಿತರನ್ನಾಗಿ ಮಾಡುವ ಬಗ್ಗೆ ಮಾಹಿತಿ ನೀಡಿದ ಮೋದಿ ಉದ್ಯೋಗ ಒದಗಿಸುವಲ್ಲಿ ಈ ಸ್ವಸಹಾಯ ಗುಂಪು, ಖಾದಿ, ಗ್ರಾಮೋದ್ಯೋಗದ ಪಾತ್ರದ ಬಗ್ಗೆ ಪ್ರಸ್ತಾಪಿಸಿದರು.
ಇದನ್ನೂ ಓದಿ: ದೇಶದ ಗಡಿಯಲ್ಲಿರುವ ಪ್ರತಿ ಗ್ರಾಮವೂ ಭಾರತದ ಮೊದಲ ಗ್ರಾಮ; ಉತ್ತರಾಖಂಡದ ಮಾಣದಲ್ಲಿ ಪ್ರಧಾನಿ ಮೋದಿ ಭಾಷಣ
ಕೇಂದ್ರ ರಕ್ಷಣಾ ಇಲಾಖೆ, ರೈಲ್ವೆ ಇಲಾಖೆ, ಅಂಚೆ, ಗೃಹ ಇಲಾಖೆ, ಕಾರ್ಮಿಕ ಇಲಾಖೆ, ಸಿಬಿಐ, ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಿಗಳಿಗೆ ನೇಮಕಾತಿ ಪತ್ರ ನೀಡಲಾಗುತ್ತದೆ. ಇಂದು ನೇಮಕಗೊಂಡವರು ಎ, ಬಿ ಮತ್ತು ಸಿ ಹಂತಗಳಲ್ಲಿ ಸರ್ಕಾರಕ್ಕೆ ಸೇರುತ್ತಾರೆ. ನೇಮಕಾತಿಗಳನ್ನು ಮಾಡಲಾಗುತ್ತಿರುವ ಹುದ್ದೆಗಳಲ್ಲಿ ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್ ಇನ್ಸ್‌ಪೆಕ್ಟರ್, ಕಾನ್ಸ್‌ಟೇಬಲ್, ಎಲ್‌ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಕೂಡ ಸೇರಿವೆ.
Today India is the 5th biggest economy. This feat has been achieved because of the reforms undertaken in the last 8 years. pic.twitter.com/3GYDrrgPf4
— PMO India (@PMOIndia) October 22, 2022
ಈ ನೇಮಕಾತಿಗಳನ್ನು ಸಚಿವಾಲಯಗಳು ಮತ್ತು ಇಲಾಖೆಗಳು ಸ್ವತಃ ಅಥವಾ ಯುಪಿಎಸ್ಸಿ, ಎಸ್ಎಸ್ಸಿ ಮತ್ತು ರೈಲ್ವೇ ನೇಮಕಾತಿ ಮಂಡಳಿ ಸೇರಿದಂತೆ ನೇಮಕಾತಿ ಏಜೆನ್ಸಿಗಳ ಮೂಲಕ ಮಿಷನ್ ಮೋಡ್‌ನಲ್ಲಿ ಮಾಡಲಾಗುತ್ತದೆ.
ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಜೈಪುರದಲ್ಲಿ ನೇಮಕಾತಿ ಪತ್ರ ಹಸ್ತಾಂತರಿಸಲಿದ್ದಾರೆ. ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭೋಪಾಲ್‌ನಲ್ಲಿ ಮತ್ತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಚಂಡೀಗಢದಲ್ಲಿ ಉದ್ಯೋಗಿಗಳಿಗೆ ನೇಮಕಾತಿ ಪತ್ರ ನೀಡಲಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್ ಇಂದೋರ್‌ನಲ್ಲಿ, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮುಂಬೈನಲ್ಲಿ, ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್ ಗುವಾಹಟಿಯಲ್ಲಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭುವನೇಶ್ವರದಲ್ಲಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಪಟಿಯಾಲ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಚೆನ್ನೈನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೇಮಕಾತಿ ಪತ್ರ ವಿತರಿಸಿದ್ದಾರೆ. ಹಾಗೇ, ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅವರು ಶಿಲ್ಲಾಂಗ್‌ನಲ್ಲಿ, ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ದೆಹಲಿಯಲ್ಲಿ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದ್ದಾರೆ.
ಇದನ್ನೂ ಓದಿ: PM Rozgar Mela: ಪಿಎಂ ಉದ್ಯೋಗ ಮೇಳ; ಏನಿದು ಯೋಜನೆ, ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ 91 ಯುವಕರು ರೈಲ್ವೇ ಮತ್ತು 46 ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪತ್ರಗಳನ್ನು ಪಡೆದರು. ಆದಾಯ ತೆರಿಗೆಯಲ್ಲಿ 37, ಸೆಂಟ್ರಲ್ ಬ್ಯಾಂಕ್‌ನಲ್ಲಿ 18, ಕೇಂದ್ರೀಯ ಜಿಎಸ್‌ಟಿ ಮತ್ತು ಕಸ್ಟಮ್ಸ್‌ನಲ್ಲಿ 15, ಗಡಿ ಭದ್ರತಾ ಪಡೆಯಲ್ಲಿ 10, ಸಿಐಎಸ್‌ಎಫ್‌ನಲ್ಲಿ 4, ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 3, ಸಶಸ್ತ್ರ ಸೀಮಾ ಬಾಲ್‌ನಲ್ಲಿ 20, ಇಂಡಿಯನ್ ಬ್ಯಾಂಕ್‌ನಲ್ಲಿ 15 ಮತ್ತು ಅಂಚೆ ಇಲಾಖೆಯ ನೇಮಕಾತಿ ಪತ್ರಗಳಲ್ಲಿ 18 ಸ್ವೀಕರಿಸಲಾಗಿದೆ. ಐಟಿಬಿಪಿಯಲ್ಲಿ 5 ಮತ್ತು ಕೆನರಾ ಬ್ಯಾಂಕ್‌ನಲ್ಲಿ ಮೂವರು ನೇಮಕಾತಿ ಪತ್ರವನ್ನೂ ಪಡೆದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:52 am, Sat, 22 October 22