Rozgar Mela: 10 ಲಕ್ಷ ಮಂದಿಗೆ ಉದ್ಯೋಗ, ಬೃಹತ್ ಮೇಳಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

| Updated By: ಗಣಪತಿ ಶರ್ಮ

Updated on: Oct 20, 2022 | 4:19 PM

10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

Rozgar Mela: 10 ಲಕ್ಷ ಮಂದಿಗೆ ಉದ್ಯೋಗ, ಬೃಹತ್ ಮೇಳಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us on

ನವದೆಹಲಿ: 10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ (Rozgar Mela) ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ 75,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗುತ್ತದೆ ಎಂದು ಪ್ರಧಾನಿ ಕಾರ್ಯಾಲಯ (PMO) ಗುರುವಾರ ತಿಳಿಸಿದೆ.

ಯುವಕರಿಗೆ ಉದ್ಯೋಗ ನೀಡುವುದರ ಜತೆಗೆ ನಾಗರಿಕರ ಕಲ್ಯಾಣವನ್ನು ಖಾತರಿಪಡಿಸುವ ಪ್ರಧಾನ ಮಂತ್ರಿಗಳ ಆಶಯದ ನಿಟ್ಟಿನಲ್ಲಿ ಇದು ಪೂರಕ ಕಾರ್ಯಕ್ರಮವಾಗಿದೆ. ಮೋದಿ ಅವರ ನಿರ್ದೇಶನದ ಮೇರೆಗೆ ಎಲ್ಲ ಇಲಾಖೆಗಳ ಸಚಿವರು ಖಾಲಿ ಇರುವ ಹುದ್ದೆಗೆಳ ನೇಮಕಾತಿಗಾಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಪಿಎಂಒ ಹೇಳಿದೆ.

ಇದನ್ನೂ ಓದಿ: Mission LiFE : ಕೆವಾಡಿಯಾದಲ್ಲಿ ಮಿಷನ್ ಲೈಫ್‌ಗೆ ಚಾಲನೆ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

ಇದನ್ನೂ ಓದಿ
Wipro: ಕೇವಲ 10 ನಿಮಿಷಗಳಲ್ಲಿ ವಿಪ್ರೋದ 20 ಮಂದಿ ಉನ್ನತ ಸಿಬ್ಬಂದಿ ವಜಾ: ರಿಷದ್ ಪ್ರೇಮ್ ಜಿ
Rupee Value: ಮತ್ತೆ ಪಾತಾಳಕ್ಕೆ ಕುಸಿದ ರೂಪಾಯಿ, ಡಾಲರ್ ವಿರುದ್ಧ 83.06ಕ್ಕೆ ಇಳಿಕೆ
JioFiber: ಜಿಯೋಫೈಬರ್ ಡಬಲ್ ಫೆಸ್ಟಿವಲ್ ಬೋನಾಂಜಾ ಆಫರ್ ಬಂದಿದೆ! ವಿವರ ಇಲ್ಲಿದೆ
Nestle India Q3 Results: ನೆಸ್ಲೆ ಇಂಡಿಯಾ ನಿವ್ವಳ ಲಾಭದಲ್ಲಿ 8% ಏರಿಕೆ, ಮಾರಾಟದಲ್ಲಿ 5 ವರ್ಷಗಳ ಗರಿಷ್ಠ ಸಾಧನೆ

ದೇಶದಾದ್ಯಂತ 38 ಸಚಿವಾಲಯಗಳ ಅಥವಾ ಇಲಾಖೆಗಳಿಗಾಗಿ ದೇಶದಾದ್ಯಂತ ನೇಮಕಾತಿ ನಡೆಸಲಾಗುತ್ತಿದೆ. ಸರ್ಕಾರದ ಗ್ರೂಪ್ ಎ ಶ್ರೇಣಿಯಿಂದ ಹುದ್ದೆಗಳಿಂದ ತೊಡಗಿ ಗ್ರೂಪ್ ಸಿ ಶ್ರೇಣಿಯ ಹುದ್ದೆಗಳ ವರೆಗೆ ನೇಮಕಾತಿ ನಡೆಯಲಿದೆ. ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್-ಇನ್‌ಸ್ಪೆಕ್ಟರ್‌ಗಳು, ಕಾನ್‌ಸ್ಟೆಬಲ್‌ಗಳು, ಎಲ್‌ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಕೂಡ ನೇಮಕವಾಗುತ್ತಿರುವ ಹುದ್ದೆಗಳಲ್ಲಿ ಒಳಗೊಂಡಿವೆ ಎಂದು ಪಿಎಂಒ ಪ್ರಕಟಣೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ, ಹೆಚ್​ಡಿ ದೇವೇಗೌಡರಿಗೆ ಆಹ್ವಾನ

ಈ ನೇಮಕಾತಿಗಳಲ್ಲಿ ಕೆಲವನ್ನು ಸಚಿವಾಲಯಗಳು ಮತ್ತು ಇಲಾಖೆಗಳು ಸ್ವತಃ ಮಾಡಿಕೊಳ್ಳಲಿವೆ. ಉಳಿದವನ್ನು ಯುಪಿಎಸ್​ಸಿ, ಎಸ್​ಎಸ್​ಸಿ ಮತ್ತು ರೈಲ್ವೆ ನೇಮಕಾತಿ ಮಂಡಳಿಯಂತಹ ನೇಮಕಾತಿ ಏಜೆನ್ಸಿಗಳ ಮೂಲಕ ಮಾಡಿಕೊಳ್ಳಲಾಗುತ್ತಿದೆ ಎಂದು ಅದು ತಿಳಿಸಿದೆ.

ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ನಿರುದ್ಯೋಗಕ್ಕೆ ಸಂಬಂಧಿಸಿ ಸತತವಾಗಿ ಟೀಕೆಗಳನ್ನು ಮಾಡುತ್ತಲೇ ಇವೆ. ಕೇಂದ್ರದಲ್ಲಿ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಬಡವರಿಗೆ ಜೀವನ ಕಷ್ಟಕರವಾಗಿ ಪರಿಣಮಿಸಿದೆ. ಉದ್ಯೋಗ ಸೃಷ್ಟಿ ನಿಟ್ಟಿನಲ್ಲಿ ಬಿಜೆಪಿ ಸರ್ಕಾರ ಏನೂ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್, ಎಎಪಿ ಸೇರಿದಂತೆ ಪ್ರತಿಪಕ್ಷಗಳು ಹಲವು ಬಾರಿ ವಾಗ್ದಾಳಿ ನಡೆಸಿವೆ. ಈ ಎಲ್ಲ ರಾಜಕೀಯ ವಿದ್ಯಮಾನಗಳ ನಡುವೆಯೇ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ