ರೋಜ್ಗಾರ್ ಮೇಳದ ಅಂಗವಾಗಿ ವಿವಿಧ ನೇಮಕಾತಿಗಳ ಮೂಲಕ ಆಯ್ಕೆಯಾದ ಸುಮಾರು 70,000 ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಹೊಸದಾಗಿ ನೇಮಕಗೊಂಡ ಯುವಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಕೇಂದ್ರ ಸರ್ಕಾರದ ಉದ್ಯೋಗ ಮೇಳದ ಉಪಕ್ರಮದ ಅಡಿಯಲ್ಲಿ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು. ಈ ಸಂದರ್ಭದಲ್ಲಿ ದೇಶದ 43 ಸ್ಥಳಗಳಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುವುದು.
ಹಣಕಾಸು ಸೇವೆಗಳ ಇಲಾಖೆ, ಅಂಚೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಕಂದಾಯ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಅಣುಶಕ್ತಿ ಇಲಾಖೆ, ರೈಲ್ವೆ ಸಚಿವಾಲಯ, ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ, ಅಣುಶಕ್ತಿ, ಗೃಹ ಸಚಿವಾಲಯ ಸೇರಿದಂತೆ ಹಲವು ಹೊಸಬರನ್ನು ನೇಮಕ ಮಾಡಲಾಗಿದೆ.
ಮತ್ತಷ್ಟು ಓದಿ: Rozgar Mela: 71,000 ಯುವಕರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ, ಇಂದು ಪ್ರಧಾನಿ ಮೋದಿಯಿಂದ ನೇಮಕಾತಿ ಪತ್ರ ವಿತರಣೆ
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಉದ್ಯೋಗ ಮೇಳವು ಯುವಜನರಿಗೆ ಅವರ ಸಬಲೀಕರಣ ಮತ್ತು ದೇಶದ ಅಭಿವೃದ್ಧಿಯಲ್ಲಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುವ ನಿರೀಕ್ಷೆಯಿದೆ. ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳು iGOT ಕರ್ಮಯೋಗಿ ಪೋರ್ಟಲ್‌ನಲ್ಲಿ ತರಬೇತಿ ಪಡೆಯಲು ಅವಕಾಶವನ್ನು ಪಡೆಯುತ್ತಿದ್ದಾರೆ.
400 ಕ್ಕೂ ಹೆಚ್ಚು ಇ-ಲರ್ನಿಂಗ್ ಕೋರ್ಸ್‌ಗಳು ಲಭ್ಯವಿದೆ. ಒದಗಿಸುವ ನಿರೀಕ್ಷೆ ಇದೆ. ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳು iGOT ಕರ್ಮಯೋಗಿ ಪೋರ್ಟಲ್‌ನಲ್ಲಿ ತರಬೇತಿ ಪಡೆಯಲು ಅವಕಾಶವನ್ನು ಪಡೆಯುತ್ತಿದ್ದಾರೆ. ಈಗ ಹಲವಾರು ಹಂತಗಳಲ್ಲಿ ಲಕ್ಷಗಟ್ಟಲೆ ಯುವಕರಿಗೆ ಸರ್ಕಾರಿ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ