AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುವ ರೈಲಿನಿಂದ ಬೀಳುತ್ತಿದ್ದ ಮಹಿಳೆಯನ್ನು ಕಾಪಾಡಿದ ಆರ್​ಪಿಎಫ್ ಸೈನಿಕ; ವಿಡಿಯೋ ಇಲ್ಲಿದೆ

ಬಿಹಾರದ ಮೋತಿಹಾರಿಯಲ್ಲಿ ಚಲಿಸುವ ರೈಲಿನಿಂದ ಬೀಳುತ್ತಿದ್ದ ಮಹಿಳೆಯನ್ನು ಆರ್‌ಪಿಎಫ್ ಜವಾನರೊಬ್ಬರು ತಮ್ಮ ಧೈರ್ಯ ಮತ್ತು ಸಮಯಪ್ರಜ್ಞೆಯಿಂದ ಕಾಪಾಡಿದ್ದಾರೆ. ಮಹಿಳೆಯೊಬ್ಬರು ರೈಲು ಹತ್ತಲು ಪ್ರಯತ್ನಿಸುತ್ತಿದ್ದರು. ಆದರೆ ಕಿಕ್ಕಿರಿದ ಚಲಿಸುವ ರೈಲಿನಿಂದ ಜಾರಿ ಬಿದ್ದರು. ಆಯತಪ್ಪಿ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರದಲ್ಲಿ ಜಾರಿಬೀಳುವುದನ್ನು ಆರ್‌ಪಿಎಫ್ ಜವಾನ ನೋಡಿ ತಕ್ಷಣ ಆಕೆಯನ್ನು ಕಾಪಾಡಿದ್ದಾರೆ.

ಚಲಿಸುವ ರೈಲಿನಿಂದ ಬೀಳುತ್ತಿದ್ದ ಮಹಿಳೆಯನ್ನು ಕಾಪಾಡಿದ ಆರ್​ಪಿಎಫ್ ಸೈನಿಕ; ವಿಡಿಯೋ ಇಲ್ಲಿದೆ
Rpf Jawan
ಸುಷ್ಮಾ ಚಕ್ರೆ
|

Updated on: Jun 17, 2025 | 9:48 PM

Share

ಮೋತಿಹಾರಿ, ಜೂನ್ 17: ಬಿಹಾರದ (Bihar) ಮೋತಿಹಾರಿಯಲ್ಲಿ ಒಂದು ದೊಡ್ಡ ಅಪಘಾತ ತಪ್ಪಿದೆ. ಆ ರೈಲ್ವೆ ನಿಲ್ದಾಣದಲ್ಲಿದ್ದ ಆರ್​ಪಿಎಫ್ ಜವಾನ ತಮ್ಮ ಸಮಯಪ್ರಜ್ಞೆಯಿಂದ ಮಹಿಳೆಯ ಪ್ರಾಣ ಕಾಪಾಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಜವಾನರ ಧೈರ್ಯದಿಂದಾಗಿ ಮಹಿಳಾ ಪ್ರಯಾಣಿಕರೊಬ್ಬರ ಜೀವ ಉಳಿದಿದೆ. ಈ ಘಟನೆ ಸೋಮವಾರ ಸುಮಾರು ಸಂಜೆ 6.30ಕ್ಕೆ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ಮಹಿಳೆಯೊಬ್ಬರು ರೈಲು ಹತ್ತಲು ಪ್ರಯತ್ನಿಸುತ್ತಿದ್ದರು. ಆದರೆ ಕಿಕ್ಕಿರಿದ ಚಲಿಸುವ ರೈಲಿನಿಂದ ಅವರಿಗೆ ಒಳಗೆ ಹೋಗಲು ಸಾಧ್ಯವಾಗಲಿಲ್ಲ. ಅಷ್ಟರಲ್ಲಿ ಕೈ ಜಾರಿ ಅವರು ರೈಲಿನ ಗೇಟ್‌ನ ಹಿಡಿತವನ್ನು ಕಳೆದುಕೊಂಡು ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರದಲ್ಲಿ ಜಾರಿಬೀಳುವುದನ್ನು ಆರ್‌ಪಿಎಫ್ ಜವಾನ ನೋಡಿದರು. ತಕ್ಷಣ ಅವರು ತನ್ನ ಪ್ರಾಣವನ್ನೇ ಪಣಕ್ಕಿಟ್ಟು, ತನ್ನ ಕೈಯಲ್ಲಿದ್ದ ಪ್ಯಾಕೆಟ್ ಅನ್ನು ಎಸೆದು, ಮಹಿಳೆಯನ್ನು ರೈಲಿನ ಚಕ್ರದಡಿ ಸಿಲುಕದಂತೆ ಕಾಪಾಡಿದರು. ಬಳಿಕ ಆಕೆಯನ್ನು ಪ್ಲಾಟ್‌ಫಾರ್ಮ್‌ಗೆ ಕರೆತಂದರು.

ಇದನ್ನೂ ಓದಿ: ತಂದೆ ಅರ್ಧ ಸೇದಿ ಎಸೆದ ಬೀಡಿ ನುಂಗಿ ಕಂದಮ್ಮ ಸಾವು, ಪತಿಯ ವಿರುದ್ಧ ಪತ್ನಿ ದೂರು

ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಅಂತರ್ಜಾಲದಲ್ಲಿ ಹರಿದಾಡುತ್ತಿವೆ. “ಕೆಲವೇ ಸೆಕೆಂಡುಗಳಲ್ಲಿ ಜೀವ ಉಳಿಸಲಾಗಿದೆ! ಚಾಕಿಯಾ ನಿಲ್ದಾಣದಲ್ಲಿ ಬಾಪುಧಾಮ್ ಮೋತಿಹರಿ–ಪತ್ಲಿಪುತ್ರ MEMU ಇಂಟರ್‌ಸಿಟಿ ಹತ್ತುವಾಗ ಮಹಿಳೆಯೊಬ್ಬರು ಜಾರಿಬಿದ್ದರು. ಆಗ ಆರ್‌ಪಿಎಫ್‌ನ ಜೈ ಪ್ರಕಾಶ್ ಯಾದವ್ ಧಾವಿಸಿ ಸಕಾಲದಲ್ಲಿ ಅವರನ್ನು ರಕ್ಷಿಸಿದರು. ಅವರ ಸಮಯಪ್ರಜ್ಞೆಯಿಂದಾಗಿ ಆ ಮಹಿಳೆ ಸುರಕ್ಷಿತವಾಗಿದ್ದಾರೆ” ಎಂದು ಆರ್‌ಪಿಎಫ್ ಇಂಡಿಯಾ ಮೈಕ್ರೋ-ಬ್ಲಾಗಿಂಗ್ ವೆಬ್‌ಸೈಟ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಕರ್ತವ್ಯದಲ್ಲಿದ್ದ ಆರ್‌ಪಿಎಫ್ ಜವಾನನನ್ನು ಜೈಪ್ರಕಾಶ್ ಯಾದವ್ ಎಂದು ಗುರುತಿಸಲಾಗಿದೆ. ವರದಿಯ ಪ್ರಕಾರ, ಅವರು ಮಹಿಳೆಯನ್ನು ರಕ್ಷಿಸಿದ್ದಲ್ಲದೆ, ರೈಲು ಹತ್ತಲು ಸಹಾಯ ಮಾಡಿದರು. ಅವರ ವರ್ತನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ