AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRB Vacancy Increased: ರೈಲ್ವೆ ನೇಮಕಾತಿ; 4,000ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ, ಖಾಲಿ ಹುದ್ದೆಗಳ ಸಂಖ್ಯೆ ಹೆಚ್ಚಳ!

ರೈಲ್ವೆ ನೇಮಕಾತಿ ಮಂಡಳಿ (RRB) CEN 04/2026 ಅಧಿಸೂಚನೆಯಡಿ ಹುದ್ದೆಗಳನ್ನು ಹೆಚ್ಚಿಸಿದೆ. ಈಗ ಒಟ್ಟು 4029 ಖಾಲಿ ಹುದ್ದೆಗಳಿದ್ದು, CMA (ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್) ಹಾಗೂ ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಹೆಚ್ಚಿನ ಅವಕಾಶ ದೊರೆತಿದೆ. CMA ಹುದ್ದೆಗೆ B.Sc (ಭೌತಶಾಸ್ತ್ರ, ರಸಾಯನಶಾಸ್ತ್ರ) ಅರ್ಹತೆ ಅಗತ್ಯ. ಆಸಕ್ತ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ. ಸಂಪೂರ್ಣ ವಿವರಗಳಿಗಾಗಿ ಅಧಿಕೃತ ವೆಬ್‌ಸೈಟ್ ಪರಿಶೀಲಿಸಿ.

RRB Vacancy Increased: ರೈಲ್ವೆ ನೇಮಕಾತಿ; 4,000ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ, ಖಾಲಿ ಹುದ್ದೆಗಳ ಸಂಖ್ಯೆ ಹೆಚ್ಚಳ!
ರೈಲ್ವೆ ಇಲಾಖೆಯಲ್ಲಿ ಉದ್ಯೋಗ Image Credit source: Getty Images
ಅಕ್ಷತಾ ವರ್ಕಾಡಿ
|

Updated on: Aug 20, 2026 | 2:59 PM

Share

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು (RRB) ಸಿಹಿ ಸುದ್ದಿಯೊಂದನ್ನು ನೀಡಿದೆ. ಜುಲೈನಲ್ಲಿ ಘೋಷಿಸಲಾದ CEN ಸಂಖ್ಯೆ 04/2026 ಅಧಿಸೂಚನೆಗೆ ಸಂಬಂಧಿಸಿದಂತೆ ಖಾಲಿ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲಾಗಿದೆ.

ಒಟ್ಟು ಖಾಲಿ ಹುದ್ದೆಗಳ ವಿವರ:

ಈ ಹಿಂದೆ ಪ್ರಕಟಿಸಲಾಗಿದ್ದ ಅಧಿಸೂಚನೆಯಲ್ಲಿ ಒಟ್ಟು 3,993 ಹುದ್ದೆಗಳನ್ನು ಘೋಷಿಸಲಾಗಿತ್ತು. ಆದರೆ ಈಗ ಪ್ರಕಟಿಸಲಾದ ಇತ್ತೀಚಿನ ತಿದ್ದುಪಡಿಯಂತೆ ಹೆಚ್ಚುವರಿಯಾಗಿ 36 ಹೊಸ ಹುದ್ದೆಗಳನ್ನು ಸೇರ್ಪಡೆಗೊಳಿಸಲಾಗಿದೆ. ಇದರಿಂದಾಗಿ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ ಈಗ 4,029 ಕ್ಕೆ ಏರಿಕೆಯಾಗಿದೆ.

ಹೊಸದಾಗಿ ಸೇರ್ಪಡೆಯಾದ ಹುದ್ದೆಗಳು:

ಸೇರ್ಪಡೆಯಾದ 36 ಹೆಚ್ಚುವರಿ ಹುದ್ದೆಗಳಲ್ಲಿ 35 ಹುದ್ದೆಗಳು ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ (CMA) ವಿಭಾಗಕ್ಕೆ ಸೇರಿವೆ. ಉಳಿದಂತೆ, RRB ಸಿಕಂದರಾಬಾದ್ ವಲಯದ ಜೂನಿಯರ್ ಎಂಜಿನಿಯರ್/ಎಲೆಕ್ಟ್ರಿಕಲ್/TRS ವಿಭಾಗದಲ್ಲಿ 1 ಹೆಚ್ಚುವರಿ ಹುದ್ದೆಯನ್ನು ಸೇರಿಸಲಾಗಿದೆ.

CMA ಹುದ್ದೆಗೆ ಶೈಕ್ಷಣಿಕ ಅರ್ಹತೆ:

ಹೊಸದಾಗಿ ಸೇರ್ಪಡೆಯಾಗಿರುವ ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ (CMA) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭೌತಶಾಸ್ತ್ರ (Physics) ಮತ್ತು ರಸಾಯನಶಾಸ್ತ್ರ (Chemistry) ವಿಷಯಗಳೊಂದಿಗೆ ಕನಿಷ್ಠ ಶೇ.45 ಅಂಕಗಳನ್ನು ಪಡೆದು B.Sc ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ವಯೋಮಿತಿ ಮತ್ತು ವೇತನ ಶ್ರೇಣಿ:

  • ಆರಂಭಿಕ ವೇತನ: CMA ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆರಂಭಿಕ ಮೂಲ ವೇತನವಾಗಿ ಮಾಸಿಕ ರೂ. 35,400 ಸಿಗಲಿದೆ.
  • ವಯೋಮಿತಿ: ಜನವರಿ 2027 ರ ಹೊತ್ತಿಗೆ ಅಭ್ಯರ್ಥಿಗಳ ವಯಸ್ಸು 18 ರಿಂದ 33 ವರ್ಷಗಳ ನಡುವೆ ಇರಬೇಕು. ಸರ್ಕಾರದ ನಿಯಮಾವಳಿಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರುತ್ತದೆ.

ಅಭ್ಯರ್ಥಿಗಳಿಗೆ ಸೂಚನೆ:

ಹೆಚ್ಚುವರಿ ಹುದ್ದೆಗಳ ಸೇರ್ಪಡೆಯಿಂದಾಗಿ ಸಂಬಂಧಿತ ಶೈಕ್ಷಣಿಕ ಅರ್ಹತೆ ಹೊಂದಿರುವ ಹೆಚ್ಚಿನ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಗೆ ಸೇರಲು ಉತ್ತಮ ಅವಕಾಶ ಸಿಕ್ಕಂತಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಶೈಕ್ಷಣಿಕ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ದಿನಾಂಕಗಳ ಸಂಪೂರ್ಣ ವಿವರಗಳಿಗಾಗಿ RRB ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾದ ಅಧಿಸೂಚನೆಯನ್ನು ಪರಿಶೀಲಿಸಲು ಕೋರಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ