
ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು (RRB) ಸಿಹಿ ಸುದ್ದಿಯೊಂದನ್ನು ನೀಡಿದೆ. ಜುಲೈನಲ್ಲಿ ಘೋಷಿಸಲಾದ CEN ಸಂಖ್ಯೆ 04/2026 ಅಧಿಸೂಚನೆಗೆ ಸಂಬಂಧಿಸಿದಂತೆ ಖಾಲಿ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲಾಗಿದೆ.
ಈ ಹಿಂದೆ ಪ್ರಕಟಿಸಲಾಗಿದ್ದ ಅಧಿಸೂಚನೆಯಲ್ಲಿ ಒಟ್ಟು 3,993 ಹುದ್ದೆಗಳನ್ನು ಘೋಷಿಸಲಾಗಿತ್ತು. ಆದರೆ ಈಗ ಪ್ರಕಟಿಸಲಾದ ಇತ್ತೀಚಿನ ತಿದ್ದುಪಡಿಯಂತೆ ಹೆಚ್ಚುವರಿಯಾಗಿ 36 ಹೊಸ ಹುದ್ದೆಗಳನ್ನು ಸೇರ್ಪಡೆಗೊಳಿಸಲಾಗಿದೆ. ಇದರಿಂದಾಗಿ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ ಈಗ 4,029 ಕ್ಕೆ ಏರಿಕೆಯಾಗಿದೆ.
ಸೇರ್ಪಡೆಯಾದ 36 ಹೆಚ್ಚುವರಿ ಹುದ್ದೆಗಳಲ್ಲಿ 35 ಹುದ್ದೆಗಳು ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ (CMA) ವಿಭಾಗಕ್ಕೆ ಸೇರಿವೆ. ಉಳಿದಂತೆ, RRB ಸಿಕಂದರಾಬಾದ್ ವಲಯದ ಜೂನಿಯರ್ ಎಂಜಿನಿಯರ್/ಎಲೆಕ್ಟ್ರಿಕಲ್/TRS ವಿಭಾಗದಲ್ಲಿ 1 ಹೆಚ್ಚುವರಿ ಹುದ್ದೆಯನ್ನು ಸೇರಿಸಲಾಗಿದೆ.
ಹೊಸದಾಗಿ ಸೇರ್ಪಡೆಯಾಗಿರುವ ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ (CMA) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭೌತಶಾಸ್ತ್ರ (Physics) ಮತ್ತು ರಸಾಯನಶಾಸ್ತ್ರ (Chemistry) ವಿಷಯಗಳೊಂದಿಗೆ ಕನಿಷ್ಠ ಶೇ.45 ಅಂಕಗಳನ್ನು ಪಡೆದು B.Sc ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ
ಹೆಚ್ಚುವರಿ ಹುದ್ದೆಗಳ ಸೇರ್ಪಡೆಯಿಂದಾಗಿ ಸಂಬಂಧಿತ ಶೈಕ್ಷಣಿಕ ಅರ್ಹತೆ ಹೊಂದಿರುವ ಹೆಚ್ಚಿನ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಗೆ ಸೇರಲು ಉತ್ತಮ ಅವಕಾಶ ಸಿಕ್ಕಂತಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಶೈಕ್ಷಣಿಕ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ದಿನಾಂಕಗಳ ಸಂಪೂರ್ಣ ವಿವರಗಳಿಗಾಗಿ RRB ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾದ ಅಧಿಸೂಚನೆಯನ್ನು ಪರಿಶೀಲಿಸಲು ಕೋರಲಾಗಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ