Railway Recruitment 2026: ರೈಲ್ವೆ ಗ್ರೂಪ್ ಡಿ ನೇಮಕಾತಿ; 30,000ರಕ್ಕೂ ಹೆಚ್ಚು ಹುದ್ದೆಗಳು, 10ನೇ ತರಗತಿ ಪಾಸಾಗಿದ್ರೆ ಸಾಕು!

ರೈಲ್ವೆ ಗ್ರೂಪ್ ಡಿ 2026 ನೇಮಕಾತಿಗೆ ಸಿದ್ಧತೆಗಳು ಪ್ರಾರಂಭವಾಗಿವೆ. 30,000 ಕ್ಕೂ ಹೆಚ್ಚು ಲೆವೆಲ್-1 ಹುದ್ದೆಗಳ ಮೌಲ್ಯಮಾಪನ ಪ್ರಕ್ರಿಯೆಗೆ ರೈಲ್ವೆ ಮಂಡಳಿ ಆದೇಶಿಸಿದೆ. ಸೆಪ್ಟೆಂಬರ್-ಅಕ್ಟೋಬರ್​ನಲ್ಲಿ ಅಧಿಕೃತ ಅಧಿಸೂಚನೆ ನಿರೀಕ್ಷಿಸಲಾಗಿದ್ದು, 10ನೇ ತರಗತಿ ಅಥವಾ ITI ಪಾಸಾದವರಿಗೆ ಇದು ಸುವರ್ಣಾವಕಾಶವಾಗಿದೆ. ಆಕಾಂಕ್ಷಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸುವಂತೆ ಸೂಚಿಸಲಾಗಿದೆ.

Railway Recruitment 2026: ರೈಲ್ವೆ ಗ್ರೂಪ್ ಡಿ ನೇಮಕಾತಿ; 30,000ರಕ್ಕೂ ಹೆಚ್ಚು ಹುದ್ದೆಗಳು, 10ನೇ ತರಗತಿ ಪಾಸಾಗಿದ್ರೆ ಸಾಕು!
ರೈಲ್ವೆ ಗ್ರೂಪ್ ಡಿ ನೇಮಕಾತಿ
Image Credit source: Getty Images

Updated on: Aug 14, 2026 | 1:29 PM

ರೈಲ್ವೆ ಮಂಡಳಿಯು 2026 ನೇ ಸಾಲಿನ ಗ್ರೂಪ್ ಡಿ (ಲೆವೆಲ್-1) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ದೇಶಾದ್ಯಂತ ಎಲ್ಲಾ ರೈಲ್ವೆ ವಲಯಗಳು ಮತ್ತು ಉತ್ಪಾದನಾ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳ ಮೌಲ್ಯಮಾಪನ ನಡೆಸಲು ನಿರ್ದೇಶನ ನೀಡಲಾಗಿದೆ. ಈ ಮೌಲ್ಯಮಾಪನದಿಂದ 30,000 ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ನಿರೀಕ್ಷೆಯಿದೆ.

ಆಗಸ್ಟ್ 20 ರೊಳಗೆ ಪ್ರತಿ ವಲಯವು ತಮ್ಮ ಖಾಲಿ ಹುದ್ದೆಗಳ ವಿವರಗಳನ್ನು ಸಲ್ಲಿಸಬೇಕಿದ್ದು, ಸೆಪ್ಟೆಂಬರ್-ಅಕ್ಟೋಬರ್ 2026 ರಲ್ಲಿ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆಯಿದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಡಿಸೆಂಬರ್​​​ಗಿಂತ ಮೊದಲು ಪ್ರಾರಂಭವಾಗಲಿದೆ. ಈ ನೇಮಕಾತಿಯು 10ನೇ ತರಗತಿ ಅಥವಾ ITI ಪಾಸಾದ ಅಭ್ಯರ್ಥಿಗಳಿಗೆ ಲಭ್ಯವಿರುತ್ತದೆ.

ಇದನ್ನೂ ಓದಿ: ಬೆಂಗಳೂರು ದಕ್ಷಿಣ ಜಿಲ್ಲೆ;102 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ (PET) ಗಾಗಿ ಈಗಿನಿಂದಲೇ ಸಿದ್ಧತೆಗಳನ್ನು ಪ್ರಾರಂಭಿಸುವಂತೆ ಸೂಚಿಸಲಾಗಿದೆ. ವಿಶೇಷವಾಗಿ ಗಣಿತ, ರೀಸನಿಂಗ್, ಸಾಮಾನ್ಯ ವಿಜ್ಞಾನ ಮತ್ತು ಪ್ರಚಲಿತ ಘಟನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಹಿಂದಿನ ಪರೀಕ್ಷೆಗಳ ಅನುಭವದ ಪ್ರಕಾರ, ಹೆಚ್ಚಿನ ಅಂಕಗಳನ್ನು ಗಳಿಸಲು ಪ್ರಚಲಿತ ಘಟನೆಗಳು ಪ್ರಮುಖ ಪಾತ್ರವಹಿಸುತ್ತವೆ. ಇದು ಆಕಾಂಕ್ಷಿಗಳಿಗೆ ಉತ್ತಮ ಅವಕಾಶವಾಗಿದ್ದು, ಮುಂಚಿತವಾಗಿಯೇ ಸಿದ್ಧತೆ ನಡೆಸುವ ಮೂಲಕ ಯಶಸ್ಸು ಗಳಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us