ಕೇರಳದ ಪಾಲಕ್ಕಾಡ್‌ನಲ್ಲಿ 3 ದಿನಗಳ ಆರ್‌ಎಸ್‌ಎಸ್ ಅಖಿಲ ಭಾರತೀಯ ಸಮನ್ವಯ ಬೈಠಕ್ ಆರಂಭ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) 3 ದಿನಗಳ ಅಖಿಲ ಭಾರತೀಯ ಸಮನ್ವಯ ಬೈಠಕ್ ಇಂದು (ಶನಿವಾರ) ಕೇರಳದ ಪಾಲಕ್ಕಾಡ್‌ನಲ್ಲಿ ಪ್ರಾರಂಭವಾಯಿತು. ಆರ್​ಎಸ್​ಎಸ್​ ಸಿದ್ಧಾಂತದಿಂದ ಪ್ರೇರಿತರಾಗಿ ಸಮಾಜ ಪರಿವರ್ತನೆಗಾಗಿ ಶ್ರಮಿಸುತ್ತಿರುವ ವಿವಿಧ ಸಂಘಟನೆಗಳ 32 ರಾಷ್ಟ್ರೀಯ ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕೇರಳದ ಪಾಲಕ್ಕಾಡ್‌ನಲ್ಲಿ 3 ದಿನಗಳ ಆರ್‌ಎಸ್‌ಎಸ್ ಅಖಿಲ ಭಾರತೀಯ ಸಮನ್ವಯ ಬೈಠಕ್ ಆರಂಭ
ಆರ್‌ಎಸ್‌ಎಸ್ ಅಖಿಲ ಭಾರತೀಯ ಸಮನ್ವಯ ಬೈಠಕ್

Updated on: Aug 31, 2024 | 3:54 PM

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಅಖಿಲ ಭಾರತೀಯ ಸಮನ್ವಯ ಬೈಠಕ್ ಆರಂಭವಾಗಿದೆ. ಈ ಸಭೆ ಸೆಪ್ಟೆಂಬರ್ 2ರವರೆಗೆ ನಡೆಯಲಿದೆ. ಈ ಅಖಿಲ ಭಾರತೀಯ ಬೈಠಕ್‌ನಲ್ಲಿ ಸರಸಂಘಚಾಲಕ್ ಡಾ. ಮೋಹನ್ ಭಾಗವತ್, ಸರಕಾರ್ಯವಾಹ್ ದತ್ತಾತ್ರೇಯ ಹೊಸಬಾಳೆ, ಉಪಸರಕಾರ್ಯವಾಹ್​ಗಳಾದ ಕೃಷ್ಣಗೋಪಾಲ್, ಸಿ.ಆರ್​. ಮುಕುಂದ, ಅರುಣ್ ಕುಮಾರ್, ಅಲೋಕ್ ಕುಮಾರ್, ರಾಮದತ್ ಚಕ್ರಧರ್ ಮತ್ತು ಅತುಲ್ ಲಿಮಯೆ ಭಾಗವಹಿಸುತ್ತಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಕೂಡ ಈ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಸಭೆಯ ಆರಂಭದಲ್ಲಿ ವಯನಾಡ್ ಭೂಕುಸಿತದ ವಿವರಗಳು ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು ನೀಡಿದ ಸಹಾಯದ ಮಾಹಿತಿಯನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ನೀಡಲಾಯಿತು. ಈ ಸಭೆಯಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ತಮ್ಮ ಕೆಲಸದ ಮಾಹಿತಿ ಮತ್ತು ಅನುಭವಗಳನ್ನು ಸಲ್ಲಿಸಿ ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.


ಇದನ್ನೂ ಓದಿ: Vande Bharat: 3 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಇದಲ್ಲದೆ, ಸಭೆಯಲ್ಲಿ ಪ್ರಸ್ತುತ ಸನ್ನಿವೇಶ, ಇತ್ತೀಚಿನ ಪ್ರಮುಖ ಘಟನೆಗಳು ಸಾಮಾಜಿಕ ಬದಲಾವಣೆಯ ಇತರ ಆಯಾಮಗಳು ಮತ್ತು ರಾಷ್ಟ್ರೀಯ ಆಸಕ್ತಿಯ ವಿವಿಧ ವಿಷಯಗಳ ಸಂದರ್ಭದಲ್ಲಿ ಯೋಜನೆಗಳನ್ನು ಚರ್ಚಿಸಲಾಗುವುದು. ಎಲ್ಲಾ ಸಂಘಟನೆಗಳು ವಿವಿಧ ವಿಷಯಗಳಲ್ಲಿ ಸಹಕಾರ ಮತ್ತು ಸಮನ್ವಯವನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಚರ್ಚಿಸುತ್ತವೆ ಎಂದು ಆರ್‌ಎಸ್‌ಎಸ್ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ