AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೋಗೆ ರಾಷ್ಟ್ರಧ್ವಜ ಹಾಕಿಕೊಂಡ ಆರ್​ಎಸ್​ಎಸ್​

ಮೋಹನ್ ಭಾಗವತ್ ಮತ್ತು ಇತರ ಆರ್‌ಎಸ್‌ಎಸ್ ನಾಯಕರು ರಾಷ್ಟ್ರ ಧ್ವಜಾರೋಹಣ ಮಾಡುತ್ತಿರುವ ವಿಡಿಯೋಗಳನ್ನು ಆರ್‌ಎಸ್‌ಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೋಗೆ ರಾಷ್ಟ್ರಧ್ವಜ ಹಾಕಿಕೊಂಡ ಆರ್​ಎಸ್​ಎಸ್​
ಆರ್​ಎಸ್​ಎಸ್​ ಸೋಷಿಯಲ್ ಮೀಡಿಯಾ ಪೇಜ್​ನಲ್ಲಿ ರಾಷ್ಟ್ರ ಧ್ವಜ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 13, 2022 | 11:09 AM

Share

ನವದೆಹಲಿ: ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಕರೆಗೆ ಸ್ಪಂದಿಸಿದ ಆರ್‌ಎಸ್‌ಎಸ್ (RSS) ಶುಕ್ರವಾರ ತನ್ನ ಸಾಮಾಜಿಕ ಮಾಧ್ಯಮ ಪ್ರೊಫೈಲ್ ಫೋಟೋಗೆ ರಾಷ್ಟ್ರಧ್ವಜವನ್ನು ಹಾಕಿಕೊಂಡಿದೆ. 52 ವರ್ಷಗಳಿಂದ ಭಾರತದ ರಾಷ್ಟ್ರಧ್ವಜವನ್ನು ವಿರೋಧಿಸಿದ್ದ ಆರ್​ಎಸ್​ಎಸ್​ ಪ್ರಧಾನಿ ಮೋದಿಯವರ ಕರೆಗೆ ಬದ್ಧವಾಗಿಲ್ಲ ಎಂದು ಕಾಂಗ್ರೆಸ್ ಆರ್‌ಎಸ್‌ಎಸ್ ಮೇಲೆ ವಾಗ್ದಾಳಿ ನಡೆಸಿತ್ತು. ಅದಾದ ನಂತರ ಆರ್‌ಎಸ್‌ಎಸ್ ತನ್ನ ಸಾಮಾಜಿಕ ಮಾಧ್ಯಮ ಫೋಟೋಗಳನ್ನು ಬದಲಾಯಿಸಿದೆ. ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇಂದು ‘ಹರ್ ಘರ್ ತಿರಂಗ’ (Har Ghar Tiranga) ಘೋಷಣೆಗಳನ್ನು ಕೂಗುತ್ತಿರುವವರು 52 ವರ್ಷಗಳಿಂದ ತ್ರಿವರ್ಣ ಧ್ವಜವನ್ನು ಹಾರಿಸಲು ನಿರಾಕರಿಸಿದ ‘ದೇಶ ವಿರೋಧಿ’ ಸಂಘಟನೆಯಿಂದ ಬಂದವರು ಎಂದು ಹೇಳಿದ್ದರು.

ಕಾಂಗ್ರೆಸ್‌ನ ದಾಳಿಯನ್ನು ಟೀಕಿಸಿದ ಆರ್‌ಎಸ್‌ಎಸ್, ರಾಹುಲ್ ಗಾಂಧಿ ಈಗಾಗಲೇ ಹರ್ ಘರ್ ತಿರಂಗ ಮತ್ತು ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮಗಳಿಗೆ ಬೆಂಬಲ ನೀಡಿದ್ದಾರೆ, ಸಾಮಾಜಿಕ ಮಾಧ್ಯಮದ ಫೋಟೋಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಿದೆ. ಶುಕ್ರವಾರ ಸಾಮಾಜಿಕ ಮಾಧ್ಯಮದ ಫೋಟೋಗಳನ್ನು ಬದಲಾಯಿಸಲಾಗಿದ್ದು, ಕಾರ್ಯಕರ್ತರು ಹರ್ ಘರ್ ತಿರಂಗಾ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ ಎಂದು ಆರ್​ಎಸ್​ಎಸ್​ ಸಂಘಟನೆಯ ಪ್ರಚಾರ ವಿಭಾಗವು ಹೇಳಿದೆ. ಮೋಹನ್ ಭಾಗವತ್ ಮತ್ತು ಇತರ ಆರ್‌ಎಸ್‌ಎಸ್ ನಾಯಕರು ರಾಷ್ಟ್ರ ಧ್ವಜಾರೋಹಣ ಮಾಡುತ್ತಿರುವ ವಿಡಿಯೋಗಳನ್ನು ಆರ್‌ಎಸ್‌ಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ: Azadi Ka Amrit Mahotsav: 10 ದಿನಗಳಲ್ಲಿ 1 ಕೋಟಿಗೂ ಅಧಿಕ ರಾಷ್ಟ್ರಧ್ವಜವನ್ನು ಮಾರಾಟ ಮಾಡಿದ ಅಂಚೆ ಇಲಾಖೆ

ಪ್ರಧಾನಿ ಮೋದಿಯವರ ಮನವಿಯ ನಂತರ ಎಲ್ಲಾ ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಮಾಧ್ಯಮದ ಫೋಟೋಗಳನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದ್ದಾರೆ. ಕಾಂಗ್ರೆಸ್ ನಾಯಕರು ವಿಭಿನ್ನ ಫೋಟೋಗಳನ್ನು ಹಾಕಿಕೊಂಡಿದ್ದಾರೆ. ಪಂಡಿತ್ ಜವಾಹರಲಾಲ್ ನೆಹರು ಅವರು ರಾಷ್ಟ್ರಧ್ವಜವನ್ನು ಬೀಸುತ್ತಿರುವ ಫೋಟೋವನ್ನು ಕಾಂಗ್ರೆಸ್ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದೆ. ಇದಕ್ಕೆ ಬಿಜೆಪಿ ಟೀಕೆ ಮಾಡಿದ್ದು, ರಾಹುಲ್ ಗಾಂಧಿಯವ ಪಕ್ಷದ ಸದಸ್ಯರು ತಮ್ಮ ಫೋಟೋಗಳನ್ನು ತ್ರಿವರ್ಣ ಧ್ವಜದೊಂದಿಗೆ ಹಾಕಿಕೊಳ್ಳಲು ಕೂಡ ನಾಯಕರ ಅನುಮತಿ ಪಡೆಯಬೇಕು ಎಂದು ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ