AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಮಸೀದಿಗಳಲ್ಲಿ ಶಿವಲಿಂಗ ಹುಡುಕಬೇಡಿ: ಆರ್​ಎಸ್​ಎಸ್​ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ ಮೋಹನ್ ಭಾಗವತ್

ಮಂದಿರ-ಮಸೀದಿ ಸಂಘರ್ಷದ ಬಗ್ಗೆ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಿ ಆರ್​ಎಸ್​ಎಸ್​ ತನ್ನ ನಿಲುವು ಸ್ಪಷ್ಟಪಡಿಸಿರುವುದು ಆಶಾದಾಯಕ ಬೆಳವಣಿಗೆ ಎಂದು ವಿಶ್ಲೇಷಿಸಲಾಗುತ್ತಿದೆ.

ಎಲ್ಲ ಮಸೀದಿಗಳಲ್ಲಿ ಶಿವಲಿಂಗ ಹುಡುಕಬೇಡಿ: ಆರ್​ಎಸ್​ಎಸ್​ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ ಮೋಹನ್ ಭಾಗವತ್
ಮೋಹನ್ ಭಾಗವತ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 03, 2022 | 7:30 AM

ದೆಹಲಿ: ಉತ್ತರ ಪ್ರದೇಶದ ವಾರಣಾಸಿ ಜ್ಞಾನವಾಪಿ ಮಸೀದಿಯ (Gyanvapi Mosque) ವಿವಾದವನ್ನು ಪರಸ್ಪರ ಮಾತುಕತೆ ಮತ್ತು ಸಹಮತದ ಒಪ್ಪಂದಗಳ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (Rashtriya Swayamsevak Sangh- RSS) ಸರಸಂಘಚಾಲಕ (ಮುಖ್ಯಸ್ಥರು) ಮೋಹನ್ ಭಾಗವತ್ ಸಲಹೆ ಮಾಡಿದರು. ಜ್ಞಾನವಾಪಿ ಮಸೀದಿಯಲ್ಲಿ ಕೋರ್ಟ್ ಆದೇಶದ ಮೇರೆಗೆ ನಡೆದ ವಿಡಿಯೊ ಸಮೀಕ್ಷೆಯಲ್ಲಿ ಶಿವಲಿಂಗದಂಥ ಆಕೃತಿ ಪತ್ತೆಯಾಗಿದೆ ಎಂಬ ವರದಿಗಳು ಬಹಿರಂಗವಾದ ನಂತರ ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ವೈಮನಸ್ಸು ಮೂಡುವ ಬೆಳವಣಿಗೆಗಳು ನಡೆದಿತ್ತು. ಪ್ರಸ್ತುತ ಈ ಪ್ರಕರಣವು ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಇದೀಗ ಆರ್​ಎಸ್​ಎಸ್​ ಮುಖ್ಯಸ್ಥರು ನೀಡಿರುವ ಹೇಳಿಕೆಯು ಹಲವು ಕಾರಣಗಳಿಂದ ಮಹತ್ವ ಪಡೆದಿದೆ.

‘ಕೆಲವು ಪ್ರದೇಶಗಳ ಬಗ್ಗೆ ನಮಗೆ ಭಕ್ತಿ ಇರುತ್ತದೆ. ಅದರ ಬಗ್ಗೆ ನಾವು ಮಾತನಾಡುತ್ತಿರುತ್ತೇವೆ. ಆದರೆ ಪ್ರತಿದಿನ ಹೊಸಹೊಸ ಸ್ಥಳಗಳ ಬಗ್ಗೆ ಪ್ರಸ್ತಾಪಿಸುವುದು ಸರಿಯಾಗಲಾರದು. ನಾವು ಪ್ರತಿದಿನ ಹೊಸಹೊಸ ವಿವಾದಗಳನ್ನು ಹುಟ್ಟುಹಾಕಬಾರದು. ಜ್ಞಾನವಾಪಿ ಮಸೀದಿ ಬಗ್ಗೆ ನಮಗೆ ಶ್ರದ್ಧೆಯಿದೆ. ಆ ವಿಚಾರದಲ್ಲಿ ನಾವು ಏನು ಮಾಡುತ್ತಿದ್ದೇವೆಯೋ ಅದು ಆ ಶ್ರದ್ಧೆಗೆ ಅನುಗುಣವಾಗಿದೆ. ಹಾಗೆಂದು ಎಲ್ಲ ಮಸೀದಿಗಳಲ್ಲಿ ಶಿವಲಿಂಗ ಹುಡುಕುವುದು ಸರಿಯೇ’ ಎಂದು ಪ್ರಶ್ನಿಸಿದರು.

ಜ್ಞಾನವಾಪಿ ಮಸೀದಿ ವಿವಾದವನ್ನು ಮತ್ತೊಂದು ಅಯೋಧ್ಯೆ ವಿವಾದವಾಗಿಸಬೇಕು ಎನ್ನುವ ಪ್ರಯತ್ನಗಳಿಗೆ ಭಾಗವತ್ ಅವರ ಈ ಹೇಳಿಕೆ ತಣ್ಣೀರು ಎರಚಿದೆ. ಬೀದಿಬೀದಿಗಳಲ್ಲಿ ಪ್ರತಿಭಟನೆಗಳನ್ನು ನಡೆಸುವ ಮೂಲಕ ಇದನ್ನೊಂದು ದೇಶವ್ಯಾಪಿ ಜನಾಂದೋಲನವಾಗಿಸಬೇಕು ಎಂದು ಹಿಂದುತ್ವ ಪರ ಹೋರಾಟಗಾರರು ಯತ್ನಿಸುತ್ತಿದ್ದರು. ಇಂಥ ಪ್ರಯತ್ನಗಳನ್ನು ಆರ್​ಎಸ್​ಎಸ್​ ಸಮರ್ಥಿಸುವುದಿಲ್ಲ ಎಂದು ಮೋಹನ್ ಭಾಗವತ್ ಇದೀಗ ಸ್ಪಷ್ಟಪಡಿಸಿದ್ದಾರೆ.

‘ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಚರ್ಚೆಗಳು ನಡೆಯುತ್ತಲೇ ಇವೆ. ನಾವು ಇತಿಹಾಸ ಬದಲಿಸಲು ಆಗುವುದಿಲ್ಲ. ಇಂದಿನ ಹಿಂದೂ ಅಥವಾ ಇಂದಿನ ಮುಸ್ಲಿಂ ಇದಕ್ಕೆ ಹೊಣೆಯಲ್ಲ. ಇಸ್ಲಾಂ ಧರ್ಮವು ಹೊರಗಿನಿಂದ ದಾಳಿಕೋರರೊಂದಿಗೆ ಬಂತು. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದವರ ಆತ್ಮಸ್ಥೈರ್ಯ ಕುಗ್ಗಿಸಲೆಂದು ಇಲ್ಲಿನ ದೇವಸ್ಥಾನಗಳನ್ನು ಅವರು ಕೆಡವುತ್ತಿದ್ದರು’ ಎಂದು ನಾಗಪುರದಲ್ಲಿ ಅವರು ವಿವರಿಸಿದರು.

ಹಿಂದೂಗಳು ಎಂದಿಗೂ ಮುಸ್ಲಿಮರಿಗೆ ಕೆಡುಕು ಬಯಸುವುದಿಲ್ಲ. ಇಂದಿನ ಮುಸ್ಲಿಮರ ಪೂರ್ವಜರು ಹಿಂದೂಗಳೇ ಆಗಿದ್ದರು. ತಮಗೆ ವಿಶೇಷವಾದ ಶ್ರದ್ಧೆಯಿರುವ ಸ್ಥಳಗಳ ಬಗ್ಗೆ ಮಾತ್ರ ಹಿಂದೂಗಳು ಧ್ವನಿ ಎತ್ತುತ್ತಿದ್ದಾರೆ. ತಮ್ಮ ಆತ್ಮಸ್ಥೈರ್ಯ ಕುಗ್ಗಿಸಲೆಂದು ಹಿಂದಿನ ಆಡಳಿತಗಾರರು ಮಾಡಿದ್ದ ತಪ್ಪು ಸರಿಪಡಿಸಬೇಕು ಎಂದು ಹಿಂದೂಗಳು ಒತ್ತಾಯಿಸುತ್ತಿದ್ದಾರೆ. ಇಂಥ ವಿವಾದಗಳನ್ನು ಪರಸ್ಪರ ವಿಶ್ವಾಸದಿಂದ ಶಾಶ್ವತವಾಗಿ ಪರಿಹರಿಸಬೇಕು. ನ್ಯಾಯಾಲಯದ ಬಗ್ಗೆ ಗೌರವ ಇರಿಸಿಕೊಳ್ಳಬೇಕು. ಎಂದಿಗೂ ತೀರ್ಪುಗಳನ್ನು ಅವಮಾನಿಸಬಾರದು ಎಂದು ಸಲಹೆ ಮಾಡಿದರು.

ಕಾಶಿಯ ಜ್ಞಾನವಾಪಿ ಮಸೀದಿ ವಿವಾದವು ದೇಶದ ಗಮನ ಸೆಳೆದಿದೆ. ವಿಡಿಯೊ ಸಮೀಕ್ಷೆಯ ನಂತರ ಮಥುರಾದ ಈದ್ಗಾ ಶಾಹಿ, ಆಗ್ರಾದ ತಾಜ್​ ಮಹಲ್, ದೆಹಲಿಯ ಕುತುಬ್ ಮಿನಾರ್, ಕರ್ನಾಟಕದ ಶ್ರೀರಂಗಪಟ್ಟಣ ಹಾಗೂ ಮಂಗಳೂರಿನ ಮಳಲಿ ಮಸೀದಿ ವಿವಾದಗಳು ಗರಿಗೆದರಿದ್ದವು. ಇದೀಗ ಮಂದಿರ-ಮಸೀದಿ ಸಂಘರ್ಷದ ಬಗ್ಗೆ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಿ ಆರ್​ಎಸ್​ಎಸ್​ ತನ್ನ ನಿಲುವು ಸ್ಪಷ್ಟಪಡಿಸಿರುವುದು ಆಶಾದಾಯಕ ಬೆಳವಣಿಗೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:29 am, Fri, 3 June 22

ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್