AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಹಿಂದೂ ಮತ್ತು ಮುಸ್ಲಿಮರು ಎಂದೂ ಪ್ರತ್ಯೇಕವಾಗಿ ಬದುಕಿಲ್ಲ: ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಏಕತೆಯ ವ್ಯಾಖ್ಯಾನ

ಭಾರತದಲ್ಲಿ ಇಸ್ಲಾಂ ಅಪಾಯದಲ್ಲಿದೆ ಎಂಬ ಕೃತಕ ಕಂದಕಕ್ಕೆ ಯಾರೂ ಬೀಳಬೇಡಿ ಎಂದು ಎಚ್ಚರಿಕೆ ನೀಡಿದರು. ಅಲ್ಲದೇ, ಆರ್​ಎಸ್​ಎಸ್​ ದೇಶ ಕಟ್ಟುವಲ್ಲಿ ತನ್ನನ್ನು ಸದಾ ತೊಡಗಿಸಿಕೊಂಡಿರುತ್ತದೆ ಎಂದು ಸಹ ಅವರು ಉಚ್ಛರಿಸಿದರು.

ಭಾರತದಲ್ಲಿ ಹಿಂದೂ ಮತ್ತು ಮುಸ್ಲಿಮರು ಎಂದೂ ಪ್ರತ್ಯೇಕವಾಗಿ ಬದುಕಿಲ್ಲ: ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಏಕತೆಯ ವ್ಯಾಖ್ಯಾನ
ಮೋಹನ್ ಭಾಗವತ್
TV9 Web
| Edited By: |

Updated on:Jul 04, 2021 | 9:51 PM

Share

ಭಾರತದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮೀಯರ ಏಕತೆ ಎಂಬ ಪರಿಕಲ್ಪನೆ ನಮ್ಮನ್ನು ತಪ್ಪು ದಾರಿಗೆ ಕರೆದೊಯ್ಯುವಂತಿದೆ. ಏಕೆಂದರೆ ನಮ್ಮಲ್ಲಿ ಹಿಂದೂ ಮುಸ್ಲಿಮರು ಯಾವತ್ತೂ ಪ್ರತ್ಯೇಕವಾಗಿ ಬದುಕಿಲ್ಲ. ಹೀಗಾಗಿ ಮತ್ತೆ ಒಂದಾಗುವುದು ಎಂಬ ಕಲ್ಪನೆಯೇ ಸರಿಯಾದುದದಲ್ಲ ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ವ್ಯಾಖ್ಯಾನಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂಗಸಂಸ್ಥೆ ಮುಸ್ಲಿಂ ರಾಷ್ಟ್ರೀಯ ಮಂಚ್​ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು, ಭಾರತದಲ್ಲಿ ಹಿಂದೂಗಳ ಪ್ರಾಬಲ್ಯವಿದೆಯೇ ಅಥವಾ ಮುಸ್ಲಿಮರ ಪ್ರಾಬಲ್ಯವಿದೆಯೇ ಎಂಬ ಸಂಗತಿಯೇ ಬರುವುದಿಲ್ಲ. ಏಕೆಂದರೆ ಇಲ್ಲಿ ಭಾರತೀಯರ ಪ್ರಾಬಲ್ಯ ಮಾತ್ರ ಇರಬಲ್ಲದು ಎಂದು ಅವರು ಕಾರ್ಯಕ್ರಮದಲ್ಲಿ ವ್ಯಾಖ್ಯಾನಿಸಿದರು.

ನಮ್ಮ ಇತಿಹಾಸದ ಪ್ರಕಾರ ಸುಮಾರು 40 ಸಾವಿರ ವರ್ಷಗಳ ಹಿಂದಿನಿಂದ ನಾವೆಲ್ಲರೂ ಒಂದೇ ಮೂಲದಿಂದ ಬಂದವರು. ನಮ್ಮೆಲ್ಲರ ಡಿಎನ್​ಎ ಒಂದೇ ಆಗಿದ್ದು ನಾವೆಲ್ಲರೂ ಒಂದೇ ಪೂರ್ವಜರಿಂದ ಉಗಮವಾಗಿದ್ದೇವೆ. ರಾಜಕಿಯ ಜನರನ್ನು ಒಗ್ಗೂಡಿಸುತ್ತದೆ ಎಂಬುದನ್ನು ನಾನು ಒಪ್ಪಲಾರೆ. ಅದು ನಮ್ಮನ್ನು ವಿಚ್ಛಿದ್ರಗೊಳಿಸಬಹುದು ಎಂದು ಅಭಿಪ್ರಾಯಪಟ್ಟರು.

ಭಾರತದಲ್ಲಿ ಮುಸ್ಲಿಮರು ಅಪಾಯದಲ್ಲಿ ಇದ್ದಾರೆ ಎಂಬ ವಾದವನ್ನು ಒಪ್ಪಲು ಸಿದ್ಧವಿಲ್ಲ ಎಂದ ಅವರು, ದೇಶ ಯಾವುದೇ ಒಂದು ಸಮುದಾಯವನ್ನು ಬಿಟ್ಟು ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಅಭಿವೃದ್ಧಿ ಸಾಧಿಸಲು ಕುಳಿತು ಸಂವಾದ ನಡೆಸಬೇಕೇ ಹೊರತು, ಎಲ್ಲದಕ್ಕೂ ಅಪಸ್ವರ ಎತ್ತುವುದಲ್ಲ. ಭಾರತದಲ್ಲಿ ಇಸ್ಲಾಂ ಅಪಾಯದಲ್ಲಿದೆ ಎಂಬ ಕೃತಕ ಕಂದಕಕ್ಕೆ ಯಾರೂ ಬೀಳಬೇಡಿ ಎಂದು ಎಚ್ಚರಿಕೆ ನೀಡಿದರು. ಅಲ್ಲದೇ, ಆರ್​ಎಸ್​ಎಸ್​ ದೇಶ ಕಟ್ಟುವಲ್ಲಿ ತನ್ನನ್ನು ಸದಾ ತೊಡಗಿಸಿಕೊಂಡಿರುತ್ತದೆ ಎಂದು ಸಹ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಉಚ್ಛರಿಸಿದರು.

ಇದನ್ನೂ ಓದಿ: 

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್​ರ ಭವಿಷ್ಯ್​ ಕಾ ಭಾರತ್​ ಪುಸ್ತಕದ ಉರ್ದು ಆವೃತ್ತಿ ಇಂದು ಬಿಡುಗಡೆ; ಮುಸ್ಲಿಮರು ತಪ್ಪದೆ ಓದಿ ಎಂದ ಡಾ. ಅಕ್ವಿಲ್​

Pregnancy Care: ಕೊವಿಡ್​ ಸಮಯದಲ್ಲಿ ಗರ್ಭಿಣಿಯರಿಗಾಗಿ ಆರೋಗ್ಯ ಸಲಹೆಗಳು; ಆರೋಗ್ಯವನ್ನು ಕಾಳಜಿಯಿಂದ ನೋಡಿಕೊಳ್ಳಿ

(RSS chief Mohan Bhagwat says Hindu and Muslim have never lived separately in India dont believe mislead)

Published On - 9:46 pm, Sun, 4 July 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ