AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohan Bhagwat: ಪ್ರಧಾನಿ ಮೋದಿ ಸರ್ಕಾರದ ಮೇಲೆ ಆರ್​ಎಸ್ಎಸ್ ನಿಯಂತ್ರಣ ಹೊಂದಿಲ್ಲ: ಮೋಹನ್ ಭಾಗವತ್ ಸ್ಪಷ್ಟನೆ

ದೇಶದ ಎಲ್ಲರ ಡಿಎನ್​ಎ 40,000 ವರ್ಷಗಳಿಂದ ಒಂದೇ ಆಗಿದೆ ಎಂದು ಆರ್​ಎಸ್​​ಎಸ್​​ ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ. ಇದೇ ವೇಳೆ ಅವರು ಸರ್ಕಾರದ ಮೇಲೆ ಸಂಘದ ಹಸ್ತಕ್ಷೇಪ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Mohan Bhagwat: ಪ್ರಧಾನಿ ಮೋದಿ ಸರ್ಕಾರದ ಮೇಲೆ ಆರ್​ಎಸ್ಎಸ್ ನಿಯಂತ್ರಣ ಹೊಂದಿಲ್ಲ: ಮೋಹನ್ ಭಾಗವತ್ ಸ್ಪಷ್ಟನೆ
ಆರ್​ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on:Dec 19, 2021 | 4:07 PM

ಧರ್ಮಶಾಲಾ: ಕೇಂದ್ರದಲ್ಲಿ ನರೇಂದ್ರ ಮೋದಿ (Narendra Modi) ನೇತೃತ್ವದ ಭಾರತೀಯ ಜನತಾ ಪಕ್ಷದ (BJP) ಸರ್ಕಾರದ ಮೇಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ನಿಯಂತ್ರಣ ಹೊಂದಿಲ್ಲ ಎಂದು ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಸ್ಪಷ್ಟಪಡಿಸಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಮಾಜಿ ಸೈನಿಕರ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಸಂಘದ ಪ್ರಮುಖ ವ್ಯಕ್ತಿಗಳು ಸರ್ಕಾರದಲ್ಲಿ ಕೆಲಸ ಮಾಡುತ್ತಿದ್ದರೂ ಕೂಡ ಅವರು ಸಂಘದ ಭಾಗವಾಗಿಯೇ ಉಳಿಯುತ್ತಾರೆ ಎಂದು ಅವರು ಹೇಳಿದ್ದಾರೆ. ಸರ್ಕಾರದಲ್ಲಿ ವಿಭಿನ್ನ ಕಾರ್ಯನಿರ್ವಾಹಕರಿದ್ದಾರೆ. ಅವರು ವಿಭಿನ್ನ ನೀತಿಗಳನ್ನು, ಕಾರ್ಯ ವಿಧಾನಗಳನ್ನು ಹೊಂದಿದ್ದಾರೆ. ಅವರ ಚಿಂತನೆ ಮತ್ತು ಯೋಚನೆಯು ಸಂಘದ್ದಾಗಿದ್ದು ಅದು ಪರಿಣಾಮಕಾರಿಯಾಗಿದೆ. ಮುಖ್ಯ ಜನರು ಸರ್ಕಾರದಲ್ಲಿ ಕೆಲಸ ಮಾಡುತ್ತಿದ್ದು, ಅವರು ಅದನ್ನು ಮುಂದುವರೆಸಲಿದ್ದಾರೆ. ಇಂತಹ ಸಂಬಂಧ ಮತ್ತು ಮಾಧ್ಯಮವನ್ನು ನಾವು ‘ರಿಮೋಟ್ ಕಂಟ್ರೋಲ್’ ಎನ್ನಲಾಗದು. ಮತ್ತು ಅಂತಹ ಯಾವುದೇ ನಿಯಂತ್ರಣವನ್ನು ಸರ್ಕಾರದ ಮೇಲೆ ಸಂಘವು ಹೊಂದಿಲ್ಲ ಎಂದು ಮೋಹನ್ ಭಾಗವತ್ ತಿಳಿಸಿದ್ದನ್ನು ಎಎನ್​ಐ ವರದಿ ಮಾಡಿದೆ.  ಶನಿವಾರ ಸಂಜೆ ಧರ್ಮಶಾಲಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು ಒಂದು ಸಾವಿರ ಮಾಜಿ ಸೈನಿಕರು ಭಾಗವಹಿಸಿದ್ದರು. 

ಈ ಹಿಂದೆ ಸಂಘಕ್ಕೆ ಎದುರಾದ ಅಡೆತಡೆಗಳನ್ನು ಪ್ರಸ್ತಾಪಿಸಿ ಭಾಗವತ್, ‘‘ಸರ್ಕಾರಗಳು ನಮ್ಮ ವಿರುದ್ಧ ಇದ್ದವು ಮತ್ತು ನಮ್ಮ ಕುರಿತು ಯಾವಾಗಲೂ ವಿರೋಧವಿದೆ. ಆದರೆ ಸಂಘವು 96 ವರ್ಷಗಳಿಂದ ಎಲ್ಲಾ ಅಡೆತಡೆಗಳನ್ನು ದಾಟಿ ನಡೆಯುತ್ತಿದೆ. ಸಮಾಜದಲ್ಲಿ ಕೆಲಸ ಮಾಡುವ ಅವಶ್ಯಕತೆಯಿರುವಲ್ಲೆಲ್ಲಾ ಸ್ವಯಂಸೇವಕರು ಯಾವಾಗಲೂ ಲಭ್ಯವಿರುತ್ತಾರೆ. ಜತೆಗೆ ಅವರು ಸಮಾಜದ ಜನರನ್ನು ಜೊತೆಯಲ್ಲಿ ಕರೆದೊಯ್ಯುತ್ತಾರೆ. ಆದರೆ ಅವರು ಸ್ವಯಂಸೇವಕರು ಸ್ವತಂತ್ರರಾಗಿದ್ದಾರೆ ಎಂದು ಭಾಗವತ್ ಹೇಳಿದ್ದಾರೆ. ಯಾವುದೇ ಪ್ರಚಾರ, ಆರ್ಥಿಕ ಶಕ್ತಿ ಅಥವಾ ಸರ್ಕಾರದ ನೆರವಿಲ್ಲದೆ ಸಂಘವು ನಿರಂತರವಾಗಿ ಸಮಾಜಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಭಾಗವತ್ ಇದೇ ವೇಳೆ ಹೇಳಿದ್ದಾರೆ.

40,000 ವರ್ಷಗಳಿಂದ ಭಾರತೀಯರ ಡಿಎನ್​ಎ ಒಂದೇ ಆಗಿದೆ: ಭಾಗವತ್ ಪ್ರತಿಪಾದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್, ಎಲ್ಲಾ ಭಾರತೀಯರ ಡಿಎನ್ಎ ಒಂದೇ ಎಂದು ಪ್ರತಿಪಾದಿಸಿದ್ದಾರೆ. 40,000 ವರ್ಷಗಳ ಹಿಂದಿನ ಭಾರತೀಯರ ಡಿಎನ್‌ಎ ಇಂದಿನ ಜನರಂತೆಯೇ ಇದೆ. ಮತ್ತು ನಮ್ಮೆಲ್ಲರ ಪೂರ್ವಜರು ಒಂದೇ ಆಗಿದ್ದಾರೆ. ಅಂತಹ ಪೂರ್ವಜರಿಂದ ನಮ್ಮ ದೇಶವು ಪ್ರವರ್ಧಮಾನಕ್ಕೆ ಬಂದಿತು ಮತ್ತು ಸಂಸ್ಕೃತಿ ಮುಂದುವರೆಯಿತು ಎಂದು ಅವರು ಹೇಳಿದ್ದಾರೆ.

ಮೋಹನ್ ಭಾಗವತ್ ಮಾತನಾಡಿರುವ ವಿಡಿಯೋ ಇಲ್ಲಿದೆ:

ಇದನ್ನೂ ಓದಿ:

ಗಂಗಾನದಿಯಲ್ಲಿ ಏಕಾಂಗಿಯಾಗಿ ಪವಿತ್ರ ಸ್ನಾನ ಮಾಡುವವರು ಹಿಂದುತ್ವವಾದಿ; ರಾಹುಲ್ ಗಾಂಧಿ ಹೊಸ ವ್ಯಾಖ್ಯಾನ

ಕೇರಳದಲ್ಲಿ ರಾಜಕೀಯ ನಾಯಕರ ಹತ್ಯೆ ಖಂಡಿಸಿದ ಸಿಎಂ ಪಿಣರಾಯಿ ವಿಜಯನ್​; 2 ಪಕ್ಷಗಳ ನಾಯಕರ ನಡುವೆ ಆರೋಪ-ಪ್ರತ್ಯಾರೋಪ

Published On - 4:05 pm, Sun, 19 December 21

ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್