Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡತನ, ನಿರುದ್ಯೋಗ ದೇಶದ ಎದುರಿರುವ ದೈತ್ಯ ಸವಾಲು: ಆರ್​ಎಸ್​ಎಸ್​ ನಾಯಕ ದತ್ತಾತ್ರೇಯ ಹೊಸಬಾಳೆ

ಆರ್​ಎಸ್​ಎಸ್​ ಸರಸಂಘಚಾಲಕರ ವಿಜಯದಶಮಿ ಭಾಷಣಕ್ಕೆ ಕೇವಲ ಮೂರು ದಿನ ಮೊದಲು ಸರಕಾರ್ಯವಾಹ ಹುದ್ದೆಯಲ್ಲಿರುವ ದತ್ತಾತ್ರೇಯ ಹೊಸಬಾಳೆ ಅವರು ಬಡತನದ ಕುರಿತು ಪ್ರಸ್ತಾಪಿಸಿರುವುದು ಮಹತ್ವ ಪಡೆದಿದೆ.

ಬಡತನ, ನಿರುದ್ಯೋಗ ದೇಶದ ಎದುರಿರುವ ದೈತ್ಯ ಸವಾಲು: ಆರ್​ಎಸ್​ಎಸ್​ ನಾಯಕ ದತ್ತಾತ್ರೇಯ ಹೊಸಬಾಳೆ
ದತ್ತಾತ್ರೇಯ ಹೊಸಬಾಳೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 03, 2022 | 11:25 AM

ದೆಹಲಿ: ಭಾರತದ ಸುಮಾರು 20 ಕೋಟಿ ಜನರು ಬಡತನದಲ್ಲಿದ್ದಾರೆ. ಇದಕ್ಕೆ ಹಲವು ದಶಕಗಳಿಂದ ಅಸ್ತಿತ್ವದಲ್ಲಿದ್ದ ಆರ್ಥಿಕ ನೀತಿಗಳೇ ಕಾರಣ. ಕಳೆದ ಕೆಲ ವರ್ಷಗಳಲ್ಲಿ ಪರಿಸ್ಥಿತಿ ಬದಲಿಸಲು ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ ಎಂದು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಿ ಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (Rashtriya Swayamsevak Sangh – RSS) ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ (RSS General Secretary Dattatreya Hosabale) ಹೇಳಿದ್ದಾರೆ. ಪ್ರತಿವರ್ಷ ವಿಜಯದಶಮಿಯಂದು ಆರ್​ಎಸ್​ಎಸ್​ನ ಸರಸಂಘಚಾಲಕರು ದೇಶವನ್ನು ಉದ್ದೇಶಿಸಿ ಭಾಷಣ ಮಾಡುವುದು ವಾಡಿಕೆ. ಅದಕ್ಕೆ ಕೇವಲ ಮೂರು ದಿನ ಮೊದಲ ಸರಕಾರ್ಯವಾಹ ಹುದ್ದೆಯಲ್ಲಿರುವ ದತ್ತಾತ್ರೇಯ ಹೊಸಬಾಳೆ ಅವರು ಬಡತನದ ಕುರಿತು ಪ್ರಸ್ತಾಪಿಸಿರುವುದು ಮಹತ್ವ ಪಡೆದಿದೆ.

ಆರ್​ಎಸ್​ಎಸ್​ನ ಪರಿವಾರ ಸಂಘಟನೆ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿದ್ದ ‘ಸ್ವಾವಲಂಬಿ ಭಾರತ್ ಅಭಿಯಾನ’ದಲ್ಲಿ ಮಾತನಾಡಿದ ಅವರು, ಹಲವು ವಿಚಾರಗಳಲ್ಲಿ ದೇಶವು ಪ್ರಗತಿ ಸಾಧಿಸಿದೆಯಾದರೂ ಎಷ್ಟೋ ಕ್ಷೇತ್ರಗಳಲ್ಲಿ ಸವಾಲು ಹಾಗೆಯೇ ಉಳಿದಿದೆ ಎಂದು ಅಭಿಪ್ರಾಯಪಟ್ಟರು. ‘ಬಡತನ ಎನ್ನುವುದು ನಮ್ಮೆದುರು ಇರುವ ದೈತ್ಯ ಸವಾಲಾಗಿದೆ. ಬಡತನದ ರಾಕ್ಷಸನನ್ನು ಮಣಿಸುವುದು ನಮ್ಮ ಆದ್ಯತೆಯಾಗಬೇಕು. ದೇಶದ 20 ಕೋಟಿಗಿಂತಲೂ ಹೆಚ್ಚಿನ ಜನರು ಬಡತನ ರೇಖೆಗಿಂತಲೂ ಕೆಳಗೆ ಬದುಕುತ್ತಿದ್ದಾರೆ ಎನ್ನುವುದು ನೋವಿನ ಸಂಗತಿ. ಮತ್ತೊಂದು ಅಂಕಿಅಂಶದ ಪ್ರಕಾರ ದೇಶದ 23 ಕೋಟಿಗೂ ಹೆಚ್ಚು ಜನರು ದಿನಕ್ಕೆ ₹ 275ಕ್ಕೂ ಕಡಿಮೆ ಆದಾಯದಲ್ಲಿ ದಿನದೂಡುತ್ತಿದ್ದಾರೆ ಎಂದು ಹೇಳಿದರು. ಭಾರತದಲ್ಲಿ 4 ಕೋಟಿ ಉದ್ಯೋಗಸ್ಥರಿದ್ದಾರೆ. ಆದರೂ ನಮ್ಮಲ್ಲಿ ನಿರುದ್ಯೋಗಿಗಳ ಪ್ರಮಾಣ ಶೇ 7.6ರಷ್ಟು ಇದೆ ಎಂದು ವಿವರಿಸಿದರು.

ಬಡತನಕ್ಕೆ ಕಾರಣವಾಗುವ ಅಂಶಗಳ ಕುರಿತು ಹೊಸಬಾಳೆ ಪ್ರಸ್ತಾಪಿಸಿದರು. ನಿರುದ್ಯೋಗ, ಸಮರ್ಪಕ ವಿದ್ಯಾಭ್ಯಾಸ ಇಲ್ಲದಿರುವುದು, ಅಪೌಷ್ಟಿಕತೆ ಮತ್ತು ಶುದ್ಧ ಕುಡಿಯುವ ನೀರಿನ ಅಲಭ್ಯತೆ ಮತ್ತು ಪರಿಸರ ಸಂಬಂಧಿ ಸಮಸ್ಯೆಗಳು ಬಡತನದ ತೀವ್ರತೆಯನ್ನು ಹೆಚ್ಚಿಸುತ್ತಿವೆ ಎಂದು ಹೇಳಿದರು. ತಮ್ಮ ಹೇಳಿಕೆಗೆ ಆಧಾರವಾಗಿ ವಿಶ್ವಸಂಸ್ಥೆಯ ದತ್ತಾಂಶಗಳನ್ನು ಹೊಸಬಾಳೆ ನೀಡಿದರು. ‘ಸಾಮಾಜಿಕ ಅಶಾಂತಿ, ಹವಾಮಾನ ವೈಪರಿತ್ಯವೂ ಬಡತನಕ್ಕೆ ಕಾರಣ. ಕೆಲವೊಮ್ಮೆ ಸರ್ಕಾರಗಳ ಕಾರ್ಯನಿರ್ವಹಣೆಯಲ್ಲಿ ಆಗುವ ಲೋಪಗಳು ಬಡತನದ ತೀವ್ರತೆಯನ್ನು ಹೆಚ್ಚಿಸುತ್ತವೆ’ ಎಂದು ಅವರು ತಿಳಿಸಿದರು.

ಉದ್ಯಮಶೀಲತೆಯ ಅಗತ್ಯ ಕುರಿತು ಪ್ರಸ್ತಾಪಿಸಿದ ಅವರು, ‘ಉದ್ಯೋಗ ಕೇಳಿಕೊಂಡು ಓಡಾಡುವವರು ಸ್ವತಃ ಉದ್ಯೋಗದಾರರಾಗಬೇಕು. ಉದ್ಯಮಶೀಲತೆ ಬೆಳೆದಾಗ ಮಾತ್ರ ಇದು ಸಾಧ್ಯವಾಗುತ್ತದೆ. ಉದ್ಯಮಿಗಳನ್ನು ಪ್ರೋತ್ಸಾಹಿಸುವ ವಾತಾವರಣವನ್ನು ನಾವು ರೂಪಿಸಬೇಕಿದೆ. ಎಲ್ಲ ಕೆಲಸಗಳು ಸಮಾನ ಎಂದು ಸಮಾಜವೂ ಅರ್ಥ ಮಾಡಿಕೊಳ್ಳಬೇಕು. ಎಲ್ಲ ಕೆಲಸಗಳಿಗೂ ಸಮಾನ ಗೌರವ ಸಿಗಬೇಕು. ತೋಟದ ಕೆಲಸ ಮಾಡುವವರಿಗೆ ಗೌರವ ಸಿಗುವುದಿಲ್ಲ ಎಂದಾದರೆ ಆ ಕೆಲಸ ಮಾಡಲು ಯಾರೂ ಮುಂದೆ ಬರುವುದಿಲ್ಲ. ನಮ್ಮ ಮನಸ್ಥಿತಿ ಬದಲಾಗಬೇಕಿದೆ’ ಎಂದು ಹೇಳಿದರು.

Published On - 11:22 am, Mon, 3 October 22

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ