AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಎಸ್‌ಎಸ್ ಭಾರತ ಸಂಸ್ಕೃತಿಯ ಆಲದ ಮರ; ನಾಗ್ಪುರದಲ್ಲಿ ಪ್ರಧಾನಿ ಮೋದಿ ಬಣ್ಣನೆ

ಮಹಾರಾಷ್ಟ್ರದ ನಾಗ್ಪುರಕ್ಕೆ ಇಂದು ಭೇಟಿ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ನಾಗ್ಪುರದ ಡಾ. ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಮತ್ತು ಎರಡನೇ ಸರಸಂಘಚಾಲಕ್ (ಮುಖ್ಯಸ್ಥ) ಎಂ.ಎಸ್. ಗೋಲ್ವಾಲ್ಕರ್ ಅವರಿಗೆ ಸಮರ್ಪಿತವಾದ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು. ಇದು ಭಾರತೀಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಕ್ಷಣವಾಗಿದೆ. ಆರ್​ಎಸ್​ಎಸ್​ ಪ್​ರಧಾನ ಕಚೇರಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ನರೇಂದ್ರ ಮೋದಿಯಾಗಿದ್ದಾರೆ.

ಆರ್‌ಎಸ್‌ಎಸ್ ಭಾರತ ಸಂಸ್ಕೃತಿಯ ಆಲದ ಮರ; ನಾಗ್ಪುರದಲ್ಲಿ ಪ್ರಧಾನಿ ಮೋದಿ ಬಣ್ಣನೆ
PM Modi in RSS Office
ಸುಷ್ಮಾ ಚಕ್ರೆ
|

Updated on:Mar 30, 2025 | 4:42 PM

Share

ನಾಗ್ಪುರ, ಮಾರ್ಚ್ 30: ಮಹಾರಾಷ್ಟ್ರದ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಧಾನ ಕಚೇರಿಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ (PM Narendra Modi) ಪಾತ್ರರಾದರು. ರೇಶಿಮ್ ಬಾಗ್‌ನಲ್ಲಿರುವ ಸಂಘದ ಪ್ರಧಾನ ಕಚೇರಿಯಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಸ್ಮಾರಕಕ್ಕೆ ಮೋದಿ ಭೇಟಿ ನೀಡಿದರು. ಅವರೊಂದಿಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆರ್‌ಎಸ್‌ಎಸ್ ಪ್ರಧಾನ ಕಚೇರಿಯಲ್ಲಿ ಉಪಸ್ಥಿತರಿದ್ದರು. ಇದಾದ ನಂತರ ಮೋದಿ ಅವರು ಮಾಧವ ನೇತ್ರಾಲಯ ಪ್ರೀಮಿಯಂ ಸೆಂಟರ್‌ನ ವಿಸ್ತರಣಾ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು. ಕಣ್ಣಿನ ಆಸ್ಪತ್ರೆ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ಆರ್‌ಎಸ್‌ಎಸ್ ಅನ್ನು ಭಾರತದ ಅಮರ ಸಂಸ್ಕೃತಿ ಮತ್ತು ಆಧುನೀಕರಣದ ಆಲದ ಮರ. ಅದರ ಆದರ್ಶಗಳು ಮತ್ತು ತತ್ವಗಳು ರಾಷ್ಟ್ರೀಯ ಪ್ರಜ್ಞೆಯನ್ನು ರಕ್ಷಿಸುವುದಾಗಿತ್ತು’ ಎಂದು ಬಣ್ಣಿಸಿದರು.

ಭಾರತದ ಅಮರ ಸಂಸ್ಕೃತಿಯ ಸಂಕೇತವಾದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಆರ್​ಎಸ್​ಎಸ್​ ಅನ್ನು ಆಧುನಿಕ ‘ಅಕ್ಷಯ ವಟ ವೃಕ್ಷ’ (5100 ವರ್ಷಗಳಷ್ಟು ಹಳೆಯದಾದ ಆಲದ ಮರ) ಎಂದು ಮೋದಿ ಬಣ್ಣಿಸಿದರು. ದೇಶದ ವಿವಿಧ ಕ್ಷೇತ್ರಗಳು ಮತ್ತು ಪ್ರದೇಶಗಳಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರ ನಿಸ್ವಾರ್ಥ ಸೇವೆಯನ್ನು ಅವರು ಶ್ಲಾಘಿಸಿದರು.

ಇದನ್ನೂ ಓದಿ
Image
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
Image
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
Image
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
Image
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ರಾಷ್ಟ್ರ ನಿರ್ಮಾಣ, ಸಾಮಾಜಿಕ ಸೇವೆ ಮತ್ತು ಸಾಂಸ್ಕೃತಿಕ ಸಂರಕ್ಷಣೆಯಲ್ಲಿ ಆರ್‌ಎಸ್‌ಎಸ್ ಪಾತ್ರವನ್ನು ಎತ್ತಿ ತೋರಿಸಿದರು. ‘100 ವರ್ಷಗಳ ಹಿಂದೆ ಬೀಜ ಬಿತ್ತಲಾದ ವಿಚಾರಗಳು ಇಂದು ಪ್ರಪಂಚದ ಮುಂದೆ ‘ಆಲದ ಮರ’ದಂತೆ ಇವೆ. ಲಕ್ಷಾಂತರ ಮತ್ತು ಕೋಟಿ ಸ್ವಯಂಸೇವಕರು ಅದರ ಶಾಖೆಗಳು. ಇದು ಸರಳ ಆಲದ ಮರವಲ್ಲ, ಆರ್​ಎಸ್‌ಎಸ್ ಭಾರತದ ಅಮರ ಸಂಸ್ಕೃತಿಯ ಆಧುನಿಕ ‘ಅಕ್ಷಯ ವತ್ ವೃಕ್ಷ’ವಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Video: ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ

ಗುಡಿ ಪಾಡ್ವ ಸಂದರ್ಭದಲ್ಲಿ ಅವರು ಜನರಿಗೆ ಶುಭಾಶಯಗಳನ್ನು ಕೋರಿದರು. “ಹಲವು ಶುಭ ಹಬ್ಬಗಳು ಪ್ರಾರಂಭವಾಗುತ್ತಿವೆ. ಗುಡಿ ಪಾಡ್ವ, ಯುಗಾದಿ ಮತ್ತು ನವರೇಹ್ ಹಬ್ಬಗಳನ್ನು ಭಾರತದ ವಿವಿಧ ಭಾಗಗಳಲ್ಲಿ ಆಚರಿಸಲಾಗುತ್ತಿದೆ. ಈ ವರ್ಷ ಆರ್‌ಎಸ್‌ಎಸ್‌ನ ಶತಮಾನೋತ್ಸವ ವರ್ಷ. ಸ್ಮೃತಿ ಮಂದಿರದಲ್ಲಿ ಗೌರವ ಸಲ್ಲಿಸುವ ಅವಕಾಶ ನನಗೆ ಸಿಕ್ಕಿತು. ನಾವು ಇತ್ತೀಚೆಗೆ ಭಾರತೀಯ ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸಿದ್ದೇವೆ. ಮುಂದಿನ ತಿಂಗಳು ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಇದೆ” ಎಂದು ಅವರು ಹೇಳಿದರು.

ಬಡವರಲ್ಲಿ ಬಡವರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವುದು ಸರ್ಕಾರದ ನೀತಿಯಾಗಿದೆ ಎಂದು ಮೋದಿ ಒತ್ತಿ ಹೇಳಿದರು. ಸಮಾಜದ ಹಿಂದುಳಿದ ವರ್ಗಗಳಿಗೆ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿರುವ ವಿವಿಧ ಉಪಕ್ರಮಗಳನ್ನು ಎತ್ತಿ ತೋರಿಸುತ್ತಾ, ಕೈಗೆಟುಕುವ ಆರೋಗ್ಯ ಸೇವೆಗೆ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಇದನ್ನೂ ಓದಿ: ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ

‘ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ಕೋಟ್ಯಂತರ ಜನರು ಉಚಿತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದ ಎಲ್ಲಾ ನಾಗರಿಕರು ಉತ್ತಮ ಆರೋಗ್ಯ ಸೌಲಭ್ಯಗಳನ್ನು ಪಡೆಯುವುದು ನಮ್ಮ ಆದ್ಯತೆಯಾಗಿದೆ. ಇಂದು, ಆಯುಷ್ಮಾನ್ ಭಾರತ್ ಕಾರಣದಿಂದಾಗಿ ಕೋಟ್ಯಂತರ ಜನರು ಉಚಿತ ಚಿಕಿತ್ಸೆಯ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಸಾವಿರಾರು ಜನೌಷಧಿ ಕೇಂದ್ರಗಳು ದೇಶದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಅಗ್ಗದ ಔಷಧಿಗಳನ್ನು ಒದಗಿಸುತ್ತಿವೆ. ಇದು ದೇಶವಾಸಿಗಳ ಸಾವಿರಾರು ಕೋಟಿ ರೂಪಾಯಿಗಳನ್ನು ಉಳಿಸುತ್ತಿದೆ. ಕಳೆದ 10 ವರ್ಷಗಳಲ್ಲಿ ಲಕ್ಷಾಂತರ ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ಹಳ್ಳಿಗಳಲ್ಲಿ ನಿರ್ಮಿಸಲಾಗಿದೆ. ಅಲ್ಲಿ ಜನರು ಪ್ರಾಥಮಿಕ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪ್ರಧಾನಿ ಮೋದಿ ಹೇಳಿದರು.

ಮಾಧವ ನೇತ್ರಾಲಯ ಕಟ್ಟಡಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ:

ನಾಗ್ಪುರದಲ್ಲಿ 2014ರಲ್ಲಿ ಸ್ಥಾಪನೆಯಾದ ಮಾಧವ ನೇತ್ರಾಲಯ ಕಣ್ಣಿನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರವು ನಾಗ್ಪುರದಲ್ಲಿರುವ ಪ್ರಮುಖ ಸೂಪರ್-ಸ್ಪೆಷಾಲಿಟಿ ನೇತ್ರ ಆರೈಕೆ ಸೌಲಭ್ಯವಾಗಿದೆ. ದಿವಂಗತ ಆರ್‌ಎಸ್‌ಎಸ್ ಮುಖ್ಯಸ್ಥ ಮಾಧವರಾವ್ ಸದಾಶಿವರಾವ್ ಗೋಲ್ವಾಲ್ಕರ್ ಅಲಿಯಾಸ್ ಗುರೂಜಿ ಅವರ ಸ್ಮರಣಾರ್ಥ ಇದನ್ನು ಸ್ಥಾಪಿಸಲಾಗಿದೆ. ಈ ಯೋಜನೆಯು 250 ಹಾಸಿಗೆಗಳ ಆಸ್ಪತ್ರೆ, 14 ಹೊರರೋಗಿ ವಿಭಾಗಗಳು (OPDಗಳು) ಮತ್ತು 14 ಮಾಡ್ಯುಲರ್ ಆಪರೇಷನ್ ಥಿಯೇಟರ್‌ಗಳನ್ನು ಒಳಗೊಂಡಿದ್ದು, ಜನರಿಗೆ ಕೈಗೆಟುಕುವ ಮತ್ತು ವಿಶ್ವ ದರ್ಜೆಯ ಕಣ್ಣಿನ ಆರೈಕೆ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:13 pm, Sun, 30 March 25

ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ಅಭಿವೃದ್ಧಿ ವಿಷಯದಲ್ಲಿ ಸಿದ್ದರಾಮಯ್ಯ ಯಾವತ್ತೂ ಚರ್ಚೆ ಮಾಡಲ್ಲ: ಅಶೋಕ
ಅಭಿವೃದ್ಧಿ ವಿಷಯದಲ್ಲಿ ಸಿದ್ದರಾಮಯ್ಯ ಯಾವತ್ತೂ ಚರ್ಚೆ ಮಾಡಲ್ಲ: ಅಶೋಕ