ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳು ಸೇರಿದಂತೆ ಇತರೆ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮಾತನಾಡಿ, ಬಾಂಗ್ಲಾದೇಶದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಅಧಿಕಾರ ಬದಲಾವಣೆಯ ಆಂದೋಲನದ ಸಂದರ್ಭದಲ್ಲಿ ಹಿಂದೂಗಳು, ಬೌದ್ಧರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ಘಟನೆಗಳ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದಿದ್ದಾರೆ.
ಇಂತಹ ಘಟನೆಗಳನ್ನು ತಡೆಯಲು ಬಾಂಗ್ಲಾದೇಶದ ಹಂಗಾಮಿ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತರ ಪ್ರಾಣ, ಆಸ್ತಿ ಮತ್ತು ಗೌರವವನ್ನು ರಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ದತ್ತಾತ್ರೇಯ ಹೊಸಬಾಳೆ ಒತ್ತಾಯಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ವಿದ್ಯಾರ್ಥಿ ಚಳವಳಿಯ ನಂತರ, ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಬೇಕಾಯಿತು. ಅವರು ಪ್ರಸ್ತುತ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಬಾಂಗ್ಲಾದೇಶದ ಹಿಂಸಾಚಾರದಲ್ಲಿ ಹಲವಾರು ಹಿಂದೂ ದೇವಾಲಯಗಳು, ಮನೆಗಳು ಮತ್ತು ವ್ಯಾಪಾರಗಳನ್ನು ಧ್ವಂಸಗೊಳಿಸಲಾಗಿದೆ. ಹಿಂಸಾಚಾರದ ನಡುವೆ ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ಅವರು ಶೇಖ್ ಹಸೀನಾ ಅವರ ಬದಲಿಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ: Bangladesh Crisis: ಹೊತ್ತಿ ಉರಿಯುತ್ತಿದೆ ನೆರೆಯ ದೇಶ; ಬಾಂಗ್ಲಾದೇಶ ಬಿಕ್ಕಟ್ಟಿಗೆ ನಿಜವಾದ ಕಾರಣವೇನು?
ಕಳೆದ ಕೆಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಅಧಿಕಾರ ಬದಲಾವಣೆಯ ಆಂದೋಲನದ ಸಂದರ್ಭದಲ್ಲಿ ಹಿಂದೂ, ಬೌದ್ಧ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ಘಟನೆಗಳ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ತೀವ್ರ ಕಳವಳ ವ್ಯಕ್ತಪಡಿಸುತ್ತದೆ ಎಂದು ದತ್ತಾತ್ರೇಯ ಹೊಸಬಾಳೆ ಅವರು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Statement on Bangladesh incidents by Sarkaryavah of Rashtriya Swayamsevak Sangh :
The Rashtriya Swayamsevak Sangh (RSS) expresses serious concern over the incidents of violence against Hindus, Buddhists and other minority communities in Bangladesh during the movement for regime…
— RSS (@RSSorg) August 9, 2024
ಬಾಂಗ್ಲಾದೇಶದಲ್ಲಿ ಹಿಂದೂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯದ ಜನರನ್ನು ಗುರಿಯಾಗಿಸಿ ಹತ್ಯೆ ಮಾಡುವುದು, ಲೂಟಿ, ಬೆಂಕಿ ಹಚ್ಚುವುದು, ಮಹಿಳೆಯರ ಮೇಲಿನ ಘೋರ ಅಪರಾಧಗಳು ಮತ್ತು ದೇವಾಲಯಗಳಂತಹ ಪೂಜಾ ಸ್ಥಳಗಳ ಮೇಲಿನ ದಾಳಿಯಂತಹ ಕ್ರೌರ್ಯ ಸಹಿಸಲಾಗದು. ಇದನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘವು ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: Bangladesh Crisis: ಬಾಂಗ್ಲಾದೇಶದ ಗಡಿಯ ಪರಿಸ್ಥಿತಿ ಗಮನಿಸಲು ಭಾರತ ಸರ್ಕಾರದಿಂದ ಸಮಿತಿ ರಚನೆ; ಅಮಿತ್ ಶಾ ಘೋಷಣೆ
ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಅಂತಹ ಘಟನೆಗಳನ್ನು ತಕ್ಷಣವೇ ಮತ್ತು ಕಟ್ಟುನಿಟ್ಟಾಗಿ ನಿಲ್ಲಿಸಲು ಮತ್ತು ಸಂತ್ರಸ್ತರ ಪ್ರಾಣ, ಆಸ್ತಿ ಮತ್ತು ಘನತೆಯನ್ನು ರಕ್ಷಿಸಲು ಸರಿಯಾದ ವ್ಯವಸ್ಥೆಗಳನ್ನು ಮಾಡುವ ನಿರೀಕ್ಷೆಯಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಗಂಭೀರ ಸಮಯದಲ್ಲಿ, ಬಾಂಗ್ಲಾದೇಶದಲ್ಲಿ ಚಿತ್ರಹಿಂಸೆಗೆ ಬಲಿಯಾದ ಹಿಂದೂ, ಬೌದ್ಧ ಇತ್ಯಾದಿ ಸಮುದಾಯಗಳೊಂದಿಗೆ ವಿಶ್ವ ಸಮುದಾಯ ಮತ್ತು ಭಾರತದ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ನಿಲ್ಲುವಂತೆ ಆರ್‌ಎಸ್‌ಎಸ್ ಮನವಿ ಮಾಡಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ