ಬಿಜೆಪಿಗೆ ದುರಹಂಕಾರ ಎಂದು ಟೀಕಿಸಿದ ನಂತರ ಯು-ಟರ್ನ್ ಹೊಡೆದ ಆರ್​ಎಸ್​ಎಸ್​ ನಾಯಕ

ತಮ್ಮ ದುರಹಂಕಾರದಿಂದಾಗಿ ರಾಮನ ಭಕ್ತರು ಲೋಕಸಭಾ ಚುನಾವಣೆಯಲ್ಲಿ 241 ಸ್ಥಾನವನ್ನು ಮಾತ್ರ ಪಡೆಯುವಂತಾಯಿತು. ರಾಮನಲ್ಲಿ ನಂಬಿಕೆಯಿಲ್ಲದವರನ್ನು ರಾಮ 234 ಸ್ಥಾನಗಳಲ್ಲಿ ನಿಲ್ಲಿಸಿದ್ದಾನೆ ಎನ್ನುವ ಹೇಳಿಕೆ ನೀಡಿದ್ದ ಆರ್​ಎಸ್​ಎಸ್​ ನಾಯಕ ಇಂದ್ರೇಶ್ ಕುಮಾರ್ ಇದೀಗ ಯು-ಟರ್ನ್ ಹೊಡೆದಿದ್ದಾರೆ.

ಬಿಜೆಪಿಗೆ ದುರಹಂಕಾರ ಎಂದು ಟೀಕಿಸಿದ ನಂತರ ಯು-ಟರ್ನ್ ಹೊಡೆದ ಆರ್​ಎಸ್​ಎಸ್​ ನಾಯಕ
ಇಂದ್ರೇಶ್ ಕುಮಾರ್
Follow us
ಸುಷ್ಮಾ ಚಕ್ರೆ
|

Updated on: Jun 15, 2024 | 12:13 PM

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election Results 2024) ಈ ಬಾರಿ ಬಿಜೆಪಿ 2014 ಮತ್ತು 2019ರ ಚುನಾವಣೆಗಿಂತಲೂ ಹೀನಾಯ ಪ್ರದರ್ಶನ ನೀಡಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಆರ್​ಎಸ್​ಎಸ್​ ನಾಯಕ ಇಂದ್ರೇಶ್ ಕುಮಾರ್ (Indresh Kumar), ತನ್ನ ಭಕ್ತರಾದರೂ ದುರಹಂಕಾರ ಹೊಂದಿದ್ದವರಿಗೆ ರಾಮನು 241 ಸ್ಥಾನ ಬರುವಂತೆ ಮಾಡಿದನು. ರಾಮನ (Lord Ram) ಮೇಲೆ ನಂಬಿಕೆ ಇಲ್ಲದವರಿಗೆ 234 ಸ್ಥಾನಗಳನ್ನು ಮಾತ್ರ ನೀಡಿದನು. ಇದು ದೇವರ ನ್ಯಾಯ ಎಂದು ಹೇಳಿಕೆ ನೀಡಿದ್ದರು. ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಬಿಜೆಪಿಯನ್ನು ಟೀಕಿಸಿದ ಮರುದಿನವೇ ಇಂದ್ರೇಶ್ ಕುಮಾರ್ ಕೂಡ ಬಿಜೆಪಿ ವಿರುದ್ಧ ಹೇಳಿಕೆ ನೀಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.

ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ತಮ್ಮ ಹೇಳಿಕೆಯಿಂದ ಹಿಂದೆ ಸರಿದಿರುವ ಆರ್‌ಎಸ್‌ಎಸ್ ಮುಖಂಡ ಇಂದ್ರೇಶ್ ಕುಮಾರ್, ರಾಮನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೋಗಿ, ಮಂದಿರ ನಿರ್ಮಾಣಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಸರ್ಕಾರ ರಚಿಸಿದ್ದಾರೆ ಎಂದು ಹೇಳುವ ಮೂಲಕ ತೇಪೆ ಹಚ್ಚುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: G7 Summit: ಇಟಲಿಯ ಶೃಂಗಸಭೆಯಲ್ಲಿ ಭಾರತದ ದೃಷ್ಟಿಕೋನ ಪ್ರಸ್ತುತಪಡಿಸಿದ ಮೋದಿ; ಇಲ್ಲಿದೆ ಹೈಲೈಟ್ಸ್

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ಇಂದ್ರೇಶ್ ಕುಮಾರ್ ಇದೀಗ ಡ್ಯಾಮೇಜ್ ಕಂಟ್ರೋಲ್ ಮಾಡುವ ಹೇಳಿಕೆ ನೀಡಿದ್ದು, ಭಗವಾನ್ ರಾಮನ ಸಂಕಲ್ಪವನ್ನು ತೆಗೆದುಕೊಂಡವರು ಈಗ ಅಧಿಕಾರದಲ್ಲಿದ್ದಾರೆ ಎಂದಿದ್ದಾರೆ. ಗುರುವಾರ ಜೈಪುರ ಸಮೀಪದ ಕನೋಟಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇಂದ್ರೇಶ್ ಕುಮಾರ್, ಲೋಕಸಭೆ ಚುನಾವಣೆಯಲ್ಲಿ ಸ್ವಂತವಾಗಿ ಸಂಪೂರ್ಣ ಬಹುಮತವನ್ನು ಗೆಲ್ಲಲು ಸಾಧ್ಯವಾಗದ ಆಡಳಿತ ಪಕ್ಷದ ವೈಫಲ್ಯಕ್ಕೆ ಅದರ ಅಹಂಕಾರವೇ ಕಾರಣ ಎಂದಿದ್ದರು.

“ರಾಮನ ಭಕ್ತಿ ಮಾಡಿದವರು ಕ್ರಮೇಣ ದುರಹಂಕಾರಿಯಾದರು. ಆ ಪಕ್ಷವನ್ನು ಅತಿದೊಡ್ಡ ಪಕ್ಷವೆಂದು ಘೋಷಿಸಲಾಯಿತು. ಆದರೆ ದುರಹಂಕಾರದ ಕಾರಣದಿಂದ ರಾಮನು 241ಕ್ಕೆ ನಿಲ್ಲಿಸಿದನು” ಎಂದು ಅವರು ಹೇಳಿದ್ದರು. ಇದು ಬಿಜೆಪಿಗೆ ತೀವ್ರ ಮುಜುಗರ ಉಂಟುಮಾಡಿತ್ತು.

ಇದನ್ನೂ ಓದಿ: ನಾಚಿಕೆಯ ಸಂಗತಿ; ಪಿಎಂ ಮೋದಿಯ ಪಾದ ಮುಟ್ಟಿದ್ದಕ್ಕೆ ನಿತೀಶ್ ಕುಮಾರ್ ವಿರುದ್ಧ ಪ್ರಶಾಂತ್ ಕಿಶೋರ್ ವಾಗ್ದಾಳಿ

ಈ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತೊಂದು ಹೇಳಿಕೆ ನೀಡುವ ಮೂಲಕ ತೇಪೆ ಹಚ್ಚಿರುವ ಇಂದ್ರೇಶ್ ಕುಮಾರ್ ಬಿಜೆಪಿಯನ್ನು ಹೊಗಳಿದ್ದಾರೆ. ರಾಮನನ್ನು ವಿರೋಧಿಸಿದವರೆಲ್ಲರೂ ಅಧಿಕಾರದಿಂದ ಹೊರಗುಳಿದಿದ್ದಾರೆ. ಆದರೆ ರಾಮನ ಸಂಕಲ್ಪವನ್ನು ತೆಗೆದುಕೊಂಡವರು ಈಗ ಅಧಿಕಾರದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ