ವಿಧಾನಸಭೆ ಚುನಾವಣೆಗಾಗಿ ದೆಹಲಿಯಲ್ಲಿ ಆರ್​ಎಸ್​ಎಸ್​ನಿಂದ 50,000 ಸಭೆಗಳ ಆಯೋಜನೆ

ಮಹಾರಾಷ್ಟ್ರದ ಯಶಸ್ಸಿನ ನಂತರ ಆರೆಸ್ಸೆಸ್ ದೆಹಲಿ ಚುನಾವಣೆಗೆ ಕಾರ್ಯತಂತ್ರ ರೂಪಿಸುತ್ತಿದೆ. ಭ್ರಷ್ಟಾಚಾರ ಮತ್ತು ತಳಮಟ್ಟದ ಪ್ರಭಾವವನ್ನು ಕೇಂದ್ರೀಕರಿಸಿರುವ ಆರ್​ಎಸ್​ಎಸ್​ ದೆಹಲಿಯಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ 50 ಸಾವಿರ ಸಭೆಗಳನ್ನು ಆಯೋಜಿಸಿದೆ. ಈ ನಡುವೆ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಬಿಜೆಪಿಯ ತಪ್ಪುಗಳನ್ನು ನೀವು ಬೆಂಬಲಿಸುತ್ತೀರಾ? ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ.

ವಿಧಾನಸಭೆ ಚುನಾವಣೆಗಾಗಿ ದೆಹಲಿಯಲ್ಲಿ ಆರ್​ಎಸ್​ಎಸ್​ನಿಂದ 50,000 ಸಭೆಗಳ ಆಯೋಜನೆ
Rss
Follow us
ಸುಷ್ಮಾ ಚಕ್ರೆ
|

Updated on: Jan 01, 2025 | 8:19 PM

ನವದೆಹಲಿ: ಮಹಾರಾಷ್ಟ್ರದಲ್ಲಿ ಭಾರೀ ಅಂತರದ ಗೆಲುವು ಸಾಧಿಸಿದ ನಂತರ ಬಿಜೆಪಿಯ ಬೃಹತ್ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಆರ್‌ಎಸ್‌ಎಸ್ 2025ರ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಿದೆ. ಭಾರಿ ಕುತೂಹಲ ಮೂಡಿಸಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಆರ್​ಎಸ್​ಎಸ್​ ಸಜ್ಜಾಗುತ್ತಿದೆ. ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್ ರಾಜಕೀಯದಿಂದ ದೂರವಿದ್ದರೂ, ಬಿಜೆಪಿಗೆ ನಿರೂಪಣೆಯನ್ನು ರೂಪಿಸುವಲ್ಲಿ, ಶಕ್ತಿ ತುಂಬುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಕೇಡರ್, ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವೆ ಬಲವಾದ ಬಾಂಧವ್ಯವನ್ನು ಬೆಳೆಸುತ್ತಿದೆ.

ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ ಎರಡು ತಿಂಗಳುಗಳು ಉಳಿದಿರುವಾಗ, ಆರ್‌ಎಸ್‌ಎಸ್ ಕೇಡರ್ ಈಗಾಗಲೇ ತನ್ನ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಅದರ ಸದಸ್ಯರಿಗೆ ಕಾರ್ಯಗಳು ಮತ್ತು ಜವಾಬ್ದಾರಿಗಳನ್ನು ನಿಯೋಜಿಸುತ್ತಿದೆ. ಮಹಾರಾಷ್ಟ್ರ ಚುನಾವಣೆಯ ಬೆನ್ನಲ್ಲೇ ಆರ್‌ಎಸ್‌ಎಸ್-ಬಿಜೆಪಿ ಜೋಡಿ ದೆಹಲಿ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿದ್ದು, ಈಗಾಗಲೇ ಕಾರ್ಯತಂತ್ರ ರೂಪಿಸಿದೆ ಎಂದು ಸಂಘಪರಿವಾರದ ಉನ್ನತ ಮೂಲವೊಂದು ತಿಳಿಸಿದೆ.

ಇದನ್ನೂ ಓದಿ: ಆರ್‌ಎಸ್‌ಎಸ್ ಮುಖ್ಯಸ್ಥರಿಗೆ ಅರವಿಂದ್ ಕೇಜ್ರಿವಾಲ್ ಬರೆದ ಪತ್ರಕ್ಕೆ ಬಿಜೆಪಿ ಟೀಕೆ

ಆರ್​ಎಸ್​ಎಸ್​ ಸಿದ್ಧಪಡಿಸಿದ ಕಾರ್ಯತಂತ್ರದ ಪ್ರಕಾರ, ಎಎಪಿಯೊಳಗಿನ ಭ್ರಷ್ಟಾಚಾರ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ‘ಶೀಶ್ ಮಹಲ್’, ನೀರು ಮತ್ತು ನೈರ್ಮಲ್ಯ ಸಮಸ್ಯೆಗಳು, ಕೊಳಚೆ ಪ್ರದೇಶಗಳಿಗೆ ನೀರು ನುಗ್ಗುವಿಕೆ ಮತ್ತು ಅಕ್ರಮ ಬಾಂಗ್ಲಾದೇಶಿ ವಲಸಿಗರ ಉಪಸ್ಥಿತಿ ಮುಂತಾದ ವಿಷಯಗಳು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರಾಬಲ್ಯ ಸಾಧಿಸುವ ಸಾಧ್ಯತೆಯಿದೆ.

ದೆಹಲಿ ಬಿಜೆಪಿ ಘಟಕವು ಈಗಾಗಲೇ ಈ ದಿಕ್ಕಿನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದೆ ಮತ್ತು ಆರ್‌ಎಸ್‌ಎಸ್‌ನೊಂದಿಗೆ ಸಕ್ರಿಯವಾಗಿ ಸಮನ್ವಯ ನಡೆಸುತ್ತಿದೆ. ದೆಹಲಿ ಬಿಜೆಪಿ ಘಟಕ ಮತ್ತು ಆರ್‌ಎಸ್‌ಎಸ್ ನಡುವೆ ಹಲವು ಸಭೆಗಳು ನಡೆದಿದ್ದು, ಈ ಸಂದರ್ಭದಲ್ಲಿ ಇಬ್ಬರೂ ಕಾರ್ಯತಂತ್ರವನ್ನು ಸಿದ್ಧಪಡಿಸಿದ್ದಾರೆ ಮತ್ತು ಕಾರ್ಯಗಳನ್ನು ನಿಯೋಜಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ದೆಹಲಿ ಚುನಾವಣೆ: ಆಮ್​ ಆದ್ಮಿ ಪಕ್ಷ ಗೆದ್ದರೆ ದೇವಸ್ಥಾನಗಳ ಅರ್ಚಕರ ಗೌರವಧನ 18 ಸಾವಿರ ರೂ.ಗೆ ಏರಿಕೆ: ಕೇಜ್ರಿವಾಲ್

ಮಹಾರಾಷ್ಟ್ರ ಚುನಾವಣೆ ಸಂದರ್ಭದಲ್ಲಿ ಬಳಸಿದ ವಿಧಾನದಂತೆಯೇ ಬೂತ್ ಮಟ್ಟದಲ್ಲಿ ಆರಂಭಿಸಿ ಅಲ್ಲಿಂದ ನಿರೂಪಣೆಯನ್ನು ನಿರ್ಮಿಸುವ ಕಾರ್ಯತಂತ್ರವನ್ನು ಪುನರುಜ್ಜೀವನಗೊಳಿಸುವ ತಂತ್ರವನ್ನು ದೆಹಲಿಯಲ್ಲಿ ಅಳವಡಿಸಲಾಗುವುದು. ದೆಹಲಿಯಲ್ಲಿ 13,000ಕ್ಕೂ ಹೆಚ್ಚು ಬೂತ್‌ಗಳಿವೆ. ಆದ್ದರಿಂದ, ನಾವು ಪ್ರತಿ ಬೂತ್‌ಗೆ ಮೂರರಿಂದ ನಾಲ್ಕು ಡ್ರಾಯಿಂಗ್-ರೂಮ್ ಮಟ್ಟದ ಸಭೆಗಳನ್ನು ಆಯೋಜಿಸಲು ಯೋಜಿಸುತ್ತೇವೆ. ತಂತ್ರವು ತಳಮಟ್ಟದಿಂದ ಪ್ರಾರಂಭವಾಗುವುದು,” ಎಂದು ಆರ್​ಎಸ್​ಎಸ್​ ನಾಯಕರೊಬ್ಬರು ಹೇಳಿದ್ದಾರೆ.

ಈ ಸಂಖ್ಯೆಗಳನ್ನು ಗಮನಿಸಿದರೆ, ರಾಜಧಾನಿ ದೆಹಲಿಯಾದ್ಯಂತ 50,000ಕ್ಕೂ ಹೆಚ್ಚು ಸಣ್ಣ ಮಟ್ಟದ ಸಭೆಗಳು ನಡೆಯಲಿವೆ. ಇದು ಮಹಾರಾಷ್ಟ್ರ ಚುನಾವಣೆಯ ಸಮಯದಲ್ಲಿಯೂ ಕಂಡುಬಂದಿತ್ತು. ಹರಿಯಾಣ ಚುನಾವಣೆಯ ಸಂದರ್ಭದಲ್ಲಿಯೂ ಆರ್‌ಎಸ್‌ಎಸ್ ಸುಮಾರು 20,000 ಸಣ್ಣ ಸಭೆಗಳನ್ನು ಆಯೋಜಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ