AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

370ನೇ ವಿಧಿ​ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್​ ಪ್ರದರ್ಶನ, ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಹೊಡೆದಾಟ

ಸಂವಿಧಾನದ 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಯಿತು. ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ ಬ್ಯಾನರ್ ಪ್ರದರ್ಶಿಸಿದ್ದರು. ಇದಕ್ಕೆ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾನರ್​ ಕಿತ್ತುಕೊಳ್ಳಲು ಮುಂದಾದ ಬಿಜೆಪಿ ಶಾಸಕರು, ಪಿಡಿಪಿ, ಎನ್​ಸಿ ಶಾಸಕರ ನಡುವೆ ಹೊಡೆದಾಟ ನಡೆಯಿತು.

ನಯನಾ ರಾಜೀವ್
|

Updated on:Nov 07, 2024 | 11:11 AM

Share

ಸಂವಿಧಾನದ 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಯಿತು. ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ ಬ್ಯಾನರ್ ಪ್ರದರ್ಶಿಸಿದ್ದರು. ಇದಕ್ಕೆ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾನರ್​ ಕಿತ್ತುಕೊಳ್ಳಲು ಮುಂದಾದ ಬಿಜೆಪಿ ಶಾಸಕರು, ಪಿಡಿಪಿ, ಎನ್​ಸಿ ಶಾಸಕರ ನಡುವೆ ಹೊಡೆದಾಟವೇ ನಡೆಯಿತು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ಮರು ಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಗೊತ್ತುವಳಿಯನ್ನು ಭಾರಿ ಗದ್ದಲದ ನಡುವೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಅಂಗೀಕರಿಸಿದೆ.

ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆ ಗೊತ್ತುವಳಿ ಮಂಡಿಸಿದ ಉಪಮುಖ್ಯಮಂತ್ರಿ ಸುರಿಂದರ್ ಚೌದರಿ ಅವರು, ವಿಶೇಷ ಸ್ಥಾನಮಾನದ ಮಹತ್ವ ಮತ್ತು ರಾಜ್ಯದ ಜನರ ಹೆಗ್ಗುರುತು, ಸಂಸ್ಕೃತಿ ಹಾಗೂ ಹಕ್ಕುಗಳನ್ನು ರಕ್ಷಿಸುವ ಸಾಂವಿಧಾನಿಕ ಗ್ಯಾರಂಟಿಯನ್ನು ಈ ವಿಧಾನಸಭೆ ದೃಢೀಕರಿಸುತ್ತದೆ. ಇಂತಹ ವಿಶೇಷ ಸ್ಥಾನಮಾನವನ್ನು ಏಕಪಕ್ಷೀಯವಾಗಿ ರದ್ದುಗೊಳಿಸಿದ ಕ್ರಮದ ಕುರಿತು ಕಳವಳ ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದರು.

ವಿಪಕ್ಷ ಬಿಜೆಪಿ ಸದಸ್ಯರು ಗೊತ್ತುವಳಿ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಲಾಪದ ಪಟ್ಟಿಯಲ್ಲಿ ಇರದ ವಿಷಯುವನ್ನು ಮಂಡಿಸಲಾಗಿದೆ. ನಾವು ಇದನ್ನು ವಿರೋಧಿಸುತ್ತೇವೆ ಎಂದು ತಿಳಿಸಿದ್ದಾರೆ. ಸಂಸತ್ ಕೈಗೊಂಡ ನಿರ್ಧಾರವನ್ನು ಬದಲಾಯಿಸಲಾಗದು ಎಂದು ಗೊತ್ತಿದ್ದರೂ ಪ್ರಚಾರಕ್ಕಾಗಿ ಸುಮ್ಮನೆ ಗದ್ದಲ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಈ ವೇಳೆ ಗದ್ದಲ ಉಂಟಾಗಿದೆ.

ಮತ್ತಷ್ಟು ಓದಿ: ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ಮರು ಸ್ಥಾಪನೆ ನಿರ್ಣಯ ಅಂಗೀಕರಿಸಿದ ಒಮರ್ ಸರ್ಕಾರ

ಇದಾದ ನಂತರ ವಿರೋಧ ಪಕ್ಷದ ನಾಯಕ ಸುನೀಲ್ ಶರ್ಮಾ ಬ್ಯಾನರ್ ತೋರಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಗದ್ದಲದ ನಂತರ ಮಾರ್ಷಲ್‌ಗಳು ಮಧ್ಯಪ್ರವೇಶಿಸಿ ಶಾಸಕರನ್ನು ಪ್ರತ್ಯೇಕಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:10 am, Thu, 7 November 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ