ದ್ರೌಪದಿ ಮುರ್ಮುಗೆ ರಾಷ್ಟ್ರಪತ್ನಿ ಎಂದ ಅಧೀರ್ ರಂಜನ್ ಚೌಧರಿ; ಕಾಂಗ್ರೆಸ್ ಕ್ಷಮೆ ಕೇಳಬೇಕೆಂದು ಬಿಜೆಪಿಯಿಂದ ಪ್ರತಿಭಟನೆ
ಕಾಂಗ್ರೆಸ್ ನಾಯಕ ಅಧೀರ್ ಚೌಧರಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರಪತ್ನಿ' ಎಂದು ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾರತದ ಮಹಿಳೆಯರು ಮತ್ತು ಬುಡಕಟ್ಟು ಜನಾಂಗದವರನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ರಾಷ್ಟ್ರಪತ್ನಿ ಎಂದು ಕರೆದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅಧೀರ್ ರಂಜನ್ ಚೌಧರಿ ಹೇಳಿಕೆಗೆ ಲೋಕಸಭೆ , ರಾಜ್ಯಸಭೆಯಲ್ಲಿ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಅಧೀರ್ ರಂಜನ್ ಚೌಧರಿ ಹೇಳಿಕೆಗೆ ಸೋನಿಯಾ ಗಾಂಧಿ (Sonia Gandhi) ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ನಿರ್ಮಲಾ ಸೀತಾರಾಮನ್ ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರಪತಿಗೆ ಅವಮಾನ ಮಾಡಬಾರದು, ಸದನದ ಹೊರಗೆ ರಾಷ್ಟ್ರಪತಿ ಬಗ್ಗೆ ಹಗುರವಾಗಿ ಮಾತನಾಡಲಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಆಡಳಿತ, ಪ್ರತಿಪಕ್ಷಗಳೆರಡರಿಂದಲೂ ಪರಸ್ಪರರ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ರಾಜ್ಯಸಭಾ ಕಲಾಪವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಗಿದೆ.
ಕಾಂಗ್ರೆಸ್ ನಾಯಕ ಅಧೀರ್ ಚೌಧರಿ ಅವರು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಎಂದು ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಭಾರತದ ಮಹಿಳೆಯರು ಮತ್ತು ಬುಡಕಟ್ಟು ಜನಾಂಗದವರನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಮತ್ತು ಭಾರತದ ಬೀದಿಗಳಲ್ಲಿ ಕಾಂಗ್ರೆಸ್ ಕ್ಷಮೆ ಯಾಚಿಸಬೇಕು ಎಂದು ಸ್ಮೃತಿ ಇರಾನಿ ಒತ್ತಾಯಿಸಿದ್ದಾರೆ. ಮಹಿಳೆಯಾಗಿರುವ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ಸಿಗರು ಸಾಂವಿಧಾನಿಕ ಹುದ್ದೆಗಳಲ್ಲಿ ಮಹಿಳೆಯರನ್ನು ಅವಮಾನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಅಧೀರ್ ಚೌಧರಿ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.
ಭಾರತದ ರಾಷ್ಟ್ರಪತಿಯನ್ನು ರಾಷ್ಟ್ರಪತ್ನಿ ಎಂದು ಸಂಬೋಧಿಸುವುದು ಅವರ ಸಾಂವಿಧಾನಿಕ ಹುದ್ದೆಯನ್ನು ಮಾತ್ರವಲ್ಲದೆ ಅವರು ಪ್ರತಿನಿಧಿಸುವ ಬುಡಕಟ್ಟು ಪರಂಪರೆಯನ್ನು ಸಹ ಅವಮಾನಿಸುತ್ತದೆ ಎಂದು ಕಾಂಗ್ರೆಸ್ಸಿಗರಿಗೆ ತಿಳಿದಿದೆ. ಆದರೂ ಅಧೀರ್ ಚೌಧರಿಯವರನ್ನು ಕೀಳಾಗಿ ಕಾಣುವ ಮೂಲಕ ಅವರ ಸಾಮರ್ಥ್ಯವನ್ನು ಅವಮಾನಿಸಲಾಗಿದೆ ಎಂದು ಬಿಜೆಪಿ ಟೀಕಿಸಿದೆ.
Delhi | BJP MPs including Finance Minister Nirmala Sitharaman protest against Congress MP Adhir Ranjan Chowdhury on his ‘Rashtrapatni’ remark against President Droupadi Murmu, demand apology from Congress party pic.twitter.com/dXHL7OCtwy
— ANI (@ANI) July 28, 2022
ದ್ರೌಪದಿ ಮುರ್ಮು ರಾಷ್ಟ್ರಪತಿ ಸ್ಥಾನಕ್ಕೆ ನಾಮನಿರ್ದೇಶನಗೊಂಡಾಗಿನಿಂದ ಅವರನ್ನು ಕಾಂಗ್ರೆಸ್ ಗುರಿಯಾಗಿಸಿಕೊಂಡಿದೆ. ರಾಷ್ಟ್ರಪತಿಯಾಗಿ ಆಯ್ಕೆಯಾದ ನಂತರವೂ ಅವರ ವಿರುದ್ಧ ದಾಳಿಗಳು ನಿಲ್ಲುವಂತೆ ಕಾಣುತ್ತಿಲ್ಲ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದ ಇಡಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯ ಸಂದರ್ಭದಲ್ಲಿ ಅಧೀರ್ ಚೌಧರಿ ಈ ದ್ರೌಪದಿ ಮರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕರೆದಿದ್ದಾರೆ.
#WATCH | “He has already apologised,” says Congress interim president Sonia Gandhi on party’s Adhir Chowdhury’s ‘Rashtrapatni’ remark against President Droupadi Murmu pic.twitter.com/YHeBkIPe9a
— ANI (@ANI) July 28, 2022
ಬಿಜೆಪಿಯ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅಧೀರ್ ಚೌಧರಿ, ನನ್ನ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನಾನು ತಪ್ಪಾಗಿ ‘ರಾಷ್ಟ್ರಪತ್ನಿ’ ಎಂದು ಹೇಳಿದ್ದೇನೆ. ಅದಕ್ಕಾಗಿ ಅವರು ನನ್ನನ್ನು ಗಲ್ಲಿಗೇರಿಸಲು ಬಯಸಿದರೆ ಗಲ್ಲಿಗೇರಿಸಬಹುದು ಎಂದಿದ್ದಾರೆ.
Published On - 11:59 am, Thu, 28 July 22