Tamil Nadu Urban Local Body Election Results ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಡಿಎಂಕೆ ಮುನ್ನಡೆ

ಎಂಕೆ ಸ್ಟಾಲಿನ್ ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಅವರು ತಮ್ಮ ಪಕ್ಷಕ್ಕೆ ಈ ಚುನಾವಣೆಯಲ್ಲಿ ನಾಲ್ಕನೇ ಸತತ ಗೆಲುವಿಗೆ ಪ್ರಯತ್ನಿಸುತ್ತಿದ್ದಾರೆ. ಸತತ ಮೂರು ಚುನಾವಣಾ ಸೋಲಿನ ನಂತರ ಎಐಎಡಿಎಂಕೆ ಪುನಶ್ಚೇತನಕ್ಕೆ ಪ್ರಯತ್ನಿಸುತ್ತಿದೆ.

Tamil Nadu Urban Local Body Election Results ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಡಿಎಂಕೆ ಮುನ್ನಡೆ
ಎಂಕೆ ಸ್ಟಾಲಿನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Feb 22, 2022 | 2:01 PM

ಚೆನ್ನೈ: ತಮಿಳುನಾಡಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ(Tamil Nadu Urban Civic Polls) ಆಡಳಿತಾರೂಢ ಡಿಎಂಕೆ (DMK) ಮುನ್ನಡೆ ಸಾಧಿಸುತ್ತಿದೆ. ಒಂದು ದಶಕದ ನಂತರ  ಈ ಚುನಾವಣೆ ನಡೆದಿದೆ. ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷವಾಗಿರುವ ಎಐಎಡಿಎಂಕೆಯಿಂದ (AIADMK) ಬಿಜೆಪಿ ಬೇರ್ಪಟ್ಟು ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ. ಫಲಿತಾಂಶಗಳನ್ನು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಒಂಬತ್ತು ತಿಂಗಳ ಕಾರ್ಯಕ್ಷಮತೆಯ ವರದಿ ಕಾರ್ಡ್‌ನಂತೆ ನೋಡಲಾಗುತ್ತದೆ. ರಾಜ್ಯದ ಒಟ್ಟು 1,374 ಕಾರ್ಪೊರೇಷನ್ ವಾರ್ಡ್‌ಗಳಲ್ಲಿ ಇದುವರೆಗೆ ಡಿಎಂಕೆ 57 ಮತ್ತು ಪ್ರಮುಖ ಪ್ರತಿಪಕ್ಷ ಎಐಎಡಿಎಂಕೆ 7 ಮತ್ತು ಇತರರು 8 ಸೀಟು ಗೆದ್ದಿದೆ . ಡಿಎಂಕೆ ಮಿತ್ರಪಕ್ಷಗಳಾದ ಕಾಂಗ್ರೆಸ್ 7 ಮತ್ತು ಸಿಪಿಐ(ಎಂ) 2 ರಲ್ಲಿ ಜಯಗಳಿಸಿದೆ ಎಂದು ತಮಿಳುನಾಡು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ನಟ ಕಮಲ್ ಹಾಸನ್ ಅವರ ಪಕ್ಷ ಎಂಎನ್‌ಎಂ ಎರಡು ಚುನಾವಣಾ ಸೋಲಿನ ನಂತರ ಖಾತೆಯನ್ನು ತೆರೆಯಲು ಆಶಿಸುತ್ತಿದೆ  ಈ ಚುನಾವಣೆಯಲ್ಲಿ 60.7 ರಷ್ಟು ಮತದಾನವಾಗಿತ್ತು.  ಪುರಸಭೆಗಳಲ್ಲಿ (ಒಟ್ಟು ವಾರ್ಡ್ ಸದಸ್ಯ ಸ್ಥಾನಗಳು 3,843), ಡಿಎಂಕೆ 248 ಮತ್ತು ಎಐಎಡಿಎಂಕೆ 79 ಮತ್ತು ಇತರರು 53 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಪಟ್ಟಣ ಪಂಚಾಯಿತಿಗಳಿಗೆ ಸಂಬಂಧಿಸಿದಂತೆ, ಎಐಎಡಿಎಂಕೆ 354 ವಾರ್ಡ್‌ಗಳನ್ನು ಮತ್ತು ಡಿಎಂಕೆ 1,251 ಅನ್ನು ಗೆದ್ದಿದೆ.

ಫೆಬ್ರವರಿ 19 ರಂದು ನಗರ ಸ್ಥಳೀಯ ಸಂಸ್ಥೆ ಚುನಾವಣೆ ನಡೆದಿದ್ದು, ರಾಜ್ಯದ 268 ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಯಿತು.

ರಾಜಧಾನಿ ಚೆನ್ನೈ ಸೇರಿದಂತೆ 21 ನಗರಗಳು, 138 ಪುರಸಭೆಗಳು ಮತ್ತು 490 ಪಟ್ಟಣ ಪಂಚಾಯತ್‌ಗಳು 12,000 ಕ್ಕೂ ಹೆಚ್ಚು ಸದಸ್ಯರನ್ನು ಆಯ್ಕೆ ಮಾಡುತ್ತವೆ. ಕಳೆದ ಐದು ವರ್ಷಗಳಲ್ಲಿ, ಈ ಸಂಸ್ಥೆಗಳಿಗೆ ಚುನಾವಣೆ ನಡೆಯದ ಕಾರಣ ಚುನಾಯಿತ ಪ್ರತಿನಿಧಿಗಳು ಇರಲಿಲ್ಲ.

ಎಂಕೆ ಸ್ಟಾಲಿನ್ ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಅವರು ತಮ್ಮ ಪಕ್ಷಕ್ಕೆ ಈ ಚುನಾವಣೆಯಲ್ಲಿ ನಾಲ್ಕನೇ ಸತತ ಗೆಲುವಿಗೆ ಪ್ರಯತ್ನಿಸುತ್ತಿದ್ದಾರೆ. ಸತತ ಮೂರು ಚುನಾವಣಾ ಸೋಲಿನ ನಂತರ ಎಐಎಡಿಎಂಕೆ ಪುನಶ್ಚೇತನಕ್ಕೆ ಪ್ರಯತ್ನಿಸುತ್ತಿದೆ. ಈ ಬಾರಿ ಆಡಳಿತಾರೂಢ ಡಿಎಂಕೆ ಫೆಡರಲಿಸಂ ಮತ್ತು ರಾಜ್ಯ ಸ್ವಾಯತ್ತತೆಯ ರಾಷ್ಟ್ರೀಯ ಸಮಸ್ಯೆಗಳನ್ನು ಕೈಗೆತ್ತಿಕೊಂಡಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಭಾರತದಾದ್ಯಂತ ಹಲವಾರು ಬಿಜೆಪಿಯೇತರ ಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಒಕ್ಕೂಟವನ್ನು ಪ್ರಾರಂಭಿಸಿದ್ದಾರೆ.

ರಾಜ್ಯದಲ್ಲಿ 30,735 ಮತಗಟ್ಟೆಗಳಿದ್ದು, 5,960 ಮತಗಟ್ಟೆಗಳನ್ನು ಸೂಕ್ಷ್ಮ ಎಂದು ಗುರುತಿಸಲಾಗಿದೆ. ಪೊಲೀಸರು, ಗೃಹರಕ್ಷಕ ದಳ ಸೇರಿದಂತೆ 1.13 ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.  ಮತದಾನದಲ್ಲಿ ಅಕ್ರಮ ನಡೆದಿದೆ ಎಂದು ಎಐಎಡಿಎಂಕೆ ಆರೋಪಿಸಿದೆ. ಮಾಸಿಕ ₹ 1,000 ನೀಡುವ ಭರವಸೆಯನ್ನು ಡಿಎಂಕೆ ಈಡೇರಿಸಿಲ್ಲ ಎಂದು ಎಐಎಡಿಎಂಕೆ ದೂರಿದೆ.  ಚುನಾವಣೆಗೆ ಅರೆಸೇನಾ ಪಡೆಗಳನ್ನು ನಿಯೋಜಿಸುವಂತೆ ಎಐಎಡಿಎಂಕೆ ಸಲ್ಲಿಸಿದ್ದ ಮನವಿಯನ್ನು ಮದ್ರಾಸ್ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಕೊಯಮತ್ತೂರಿನ ಚುನಾವಣಾ ಫಲಿತಾಂಶಗಳು ಮತಕ್ಕಾಗಿ ನಗದು ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.

ಇದನ್ನೂ ಓದಿ: ಉತ್ತರಾಖಂಡ: ಮದುವೆಗೆ ಹೋಗಿ ಬರುತ್ತಿದ್ದ ವಾಹನ ಕಮರಿಗೆ ಬಿದ್ದು 14 ಮಂದಿ ಸಾವು

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ