ಮೋದಿ ಆಹ್ವಾನ ಸ್ವೀಕರಿಸಿದ ಪುಟಿನ್; ಶೀಘ್ರದಲ್ಲೇ ಭಾರತಕ್ಕೆ ರಷ್ಯಾ ಅಧ್ಯಕ್ಷ ಭೇಟಿ

|

Updated on: Mar 27, 2025 | 6:16 PM

ಉಕ್ರೇನ್ ಯುದ್ಧ ಆರಂಭವಾದ ನಂತರ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತಕ್ಕೆ ಭೇಟಿ ನೀಡಲು ಪ್ರಧಾನಿ ಮೋದಿ ಅವರ ಆಹ್ವಾನವನ್ನು ಸ್ವೀಕರಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸದ್ಯದಲ್ಲೇ ನಮ್ಮ ದೇಶಕ್ಕೆ ಆಗಮಿಸಲಿದ್ದಾರೆ. 2022ರಲ್ಲಿ ಉಕ್ರೇನ್ ಜೊತೆಗಿನ ಯುದ್ಧ ಆರಂಭವಾದ ನಂತರ ಪ್ರಧಾನಿ ಮೋದಿ ಅವರೊಂದಿಗೆ ನಿಕಟ ಸಂಬಂಧವನ್ನು ಬೆಳೆಸಿಕೊಂಡಿರುವ ವ್ಲಾಡಿಮಿರ್ ಪುಟಿನ್ ಅವರ ಭಾರತದ ಮೊದಲ ಭೇಟಿ ಇದಾಗಿದೆ.

ಮೋದಿ ಆಹ್ವಾನ ಸ್ವೀಕರಿಸಿದ ಪುಟಿನ್; ಶೀಘ್ರದಲ್ಲೇ ಭಾರತಕ್ಕೆ ರಷ್ಯಾ ಅಧ್ಯಕ್ಷ ಭೇಟಿ
Modi Putin
Follow us on

ನವದೆಹಲಿ, ಮಾರ್ಚ್ 27: ಕಳೆದ ವರ್ಷ ಮಾಸ್ಕೋಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ಆಗಮಿಸುವಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಆಹ್ವಾನಿಸಿದ್ದರು. ಅವರ ಆಹ್ವಾನದ ಮೇರೆಗೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ರಷ್ಯಾ ಇಂದು ದೃಢಪಡಿಸಿದೆ. 2022ರಲ್ಲಿ ಉಕ್ರೇನ್ ಜೊತೆಗಿನ ಯುದ್ಧ ಆರಂಭವಾದ ನಂತರ ಪ್ರಧಾನಿ ಮೋದಿ ಅವರೊಂದಿಗೆ ನಿಕಟ ಸಂಬಂಧವನ್ನು ಬೆಳೆಸಿಕೊಂಡಿರುವ ಪುಟಿನ್ ಅವರ ಮೊದಲ ಭಾರತ ಭೇಟಿ ಇದಾಗಿದೆ.

ಇಲ್ಲಿಯವರೆಗೂ ಯಾವುದೇ ನಿರ್ದಿಷ್ಟ ದಿನಾಂಕಗಳನ್ನು ನೀಡದಿದ್ದರೂ ಪುಟಿನ್ ಅವರ ಭಾರತ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿದ್ದಾರೆ. “ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದ ಸರ್ಕಾರದ ಪ್ರಧಾನಿಯಿಂದ ಭಾರತಕ್ಕೆ ಭೇಟಿ ನೀಡಲು ಆಹ್ವಾನವನ್ನು ಸ್ವೀಕರಿಸಿದ್ದಾರೆ” ಎಂದು ಲಾವ್ರೊವ್ ಹೇಳಿದರು.

ಇದನ್ನೂ ಓದಿ: ವೆನುಜುವೇಲಾದಿಂದ ಯಾರೇ ತೈಲ ಖರೀದಿಸಿದರೂ ಅವರಿಗೆ ಶೇ. 25 ಸುಂಕ: ಅಮೆರಿಕ ಅಧ್ಯಕ್ಷ ಘೋಷಣೆ; ಟ್ರಂಪ್​ ಕೋಪಕ್ಕೆ ಏನು ಕಾರಣ?

ಇದನ್ನೂ ಓದಿ
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ಮೂರನೇ ಅವಧಿಗೆ ಮರು ಆಯ್ಕೆಯಾದ ನಂತರ ಪ್ರಧಾನಿ ಮೋದಿ ತಮ್ಮ ಮೊದಲ ವಿದೇಶಿ ಭೇಟಿಗೆ ರಷ್ಯಾವನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ “ಈಗ ನಮ್ಮ ಸರದಿ” ಎಂದು ಅವರು ಹೇಳಿದರು. ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರದ ಭೌಗೋಳಿಕ ರಾಜಕೀಯ ಕ್ರಾಂತಿಯ ಬಗ್ಗೆಯೂ ಪುಟಿನ್- ಮೋದಿ ಇಬ್ಬರೂ ನಾಯಕರು ಚರ್ಚಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

ಇದು ಯುದ್ಧದ ಯುಗವಲ್ಲ ಎಂದು ಪ್ರಧಾನಿ ಮೋದಿ ಪುಟಿನ್ ಅವರಿಗೆ ಪದೇ ಪದೇ ಹೇಳಿದ್ದರೂ, ಉಕ್ರೇನ್ ಸಂಘರ್ಷದ ಬಗ್ಗೆ ಭಾರತ ತಟಸ್ಥ ನಿಲುವನ್ನು ಕಾಯ್ದುಕೊಂಡಿದೆ. ರಷ್ಯಾವನ್ನು ಖಂಡಿಸಿ ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯಗಳಿಂದ ಭಾರತ ದೂರವಿತ್ತು ಮತ್ತು ಪುಟಿನ್ ಅವರನ್ನು ಸಾರ್ವಜನಿಕವಾಗಿ ಟೀಕಿಸುವುದನ್ನು ದೂರವಿಟ್ಟಿದೆ.

ಇದನ್ನೂ ಓದಿ: ವ್ಲಾಡಿಮಿರ್ ಪುಟಿನ್ ಸದ್ಯದಲ್ಲೇ ಸಾಯುತ್ತಾರೆ; ರಷ್ಯಾ ಅಧ್ಯಕ್ಷರ ಅನಾರೋಗ್ಯದ ವದಂತಿ ನಡುವೆ ಝೆಲೆನ್ಸ್ಕಿ ಶಾಕಿಂಗ್ ಹೇಳಿಕೆ

2024ರಲ್ಲಿ ಉಕ್ರೇನ್ ಮತ್ತು ರಷ್ಯಾ ಎರಡಕ್ಕೂ ಭೇಟಿ ನೀಡಿದ ಕೆಲವೇ ನಾಯಕರಲ್ಲಿ ಪ್ರಧಾನಿ ಮೋದಿ ಕೂಡ ಒಬ್ಬರು. ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ಅಕ್ಟೋಬರ್‌ನಲ್ಲಿ ರಷ್ಯಾದ ಕಜನ್‌ಗೆ ಸಹ ಪ್ರಯಾಣ ಬೆಳೆಸಿದರು. 22ನೇ ರಷ್ಯಾ-ಭಾರತ ಶೃಂಗಸಭೆಗಾಗಿ ಮಾಸ್ಕೋಗೆ ಭೇಟಿ ನೀಡಿದ ಸಂದರ್ಭದಲ್ಲಿ ಪುಟಿನ್ ಅವರೊಂದಿಗಿನ ಪ್ರಧಾನಿ ಮೋದಿಯ ಸ್ನೇಹಪರತೆ ಗಮನ ಸೆಳೆಯಿತು. ಪ್ರಧಾನಿ ಮೋದಿ ಪುಟಿನ್ ನಿವಾಸಕ್ಕೆ ಆಗಮಿಸಿದಾಗ ಇಬ್ಬರು ನಾಯಕರು ಆತ್ಮೀಯ ಅಪ್ಪುಗೆಯನ್ನು ಹಂಚಿಕೊಂಡರು ಮತ್ತು ನಂತರ ಗಟ್ಟಿಯಾದ ಹಸ್ತಲಾಘವ ಮಾಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ