Russia-Ukraine Conflict: ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ ಮಾತುಕತೆ; ಉಕ್ರೇನ್ ಭೇಟಿಯ ಬಗ್ಗೆ ಚರ್ಚೆ

|

Updated on: Aug 27, 2024 | 4:26 PM

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಉಕ್ರೇನ್‌ಗೆ ಪ್ರವಾಸ ಮಾಡಿದ್ದರು. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ರಷ್ಯಾ- ಉಕ್ರೇನ್ ಸಂಘರ್ಷದ ಕುರಿತು ಚರ್ಚಿಸಿದರು. ರಷ್ಯಾ-ಉಕ್ರೇನ್ ಸಂಘರ್ಷದ ಆರಂಭಿಕ, ಸ್ಥಿರ ಮತ್ತು ಶಾಂತಿಯುತ ಪರಿಹಾರವನ್ನು ಬೆಂಬಲಿಸುವ ಭಾರತದ ದೃಢ ಬದ್ಧತೆಯನ್ನು ಪಿಎಂ ಮೋದಿ ಪುನರುಚ್ಚರಿಸಿದರು.

Russia-Ukraine Conflict: ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಪ್ರಧಾನಿ ಮೋದಿ ಮಾತುಕತೆ; ಉಕ್ರೇನ್ ಭೇಟಿಯ ಬಗ್ಗೆ ಚರ್ಚೆ
ಮೋದಿ- ಪುಟಿನ್
Follow us on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ದ್ವಿಪಕ್ಷೀಯ ಬಾಂಧವ್ಯ ಹಾಗೂ ತಮ್ಮ ಇತ್ತೀಚಿನ ಉಕ್ರೇನ್ ಭೇಟಿಯ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ನರೇಂದ್ರ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ನಿನ್ನೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜೊತೆಗೂ ತಮ್ಮ ಉಕ್ರೇನ್ ಪ್ರವಾಸದ ಬಗ್ಗೆ ಮೋದಿ ಫೋನ್​ನಲ್ಲಿ ಚರ್ಚಿಸಿದ್ದರು.

“ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಇಂದು ಮಾತನಾಡಿದೆ. ಈ ವೇಳೆ ವಿಶೇಷವಾದ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ರಷ್ಯಾ-ಉಕ್ರೇನ್ ಸಂಘರ್ಷದ ದೃಷ್ಟಿಕೋನಗಳು ಮತ್ತು ಇತ್ತೀಚಿನ ಉಕ್ರೇನ್ ಭೇಟಿಯ ಬಗ್ಗೆ ನನ್ನ ಒಳನೋಟಗಳನ್ನು ವಿನಿಮಯ ಮಾಡಿಕೊಂಡೆ” ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ: Unified Pension Scheme: ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಗೆ ಪ್ರಧಾನಿ ಮೋದಿ ಸಂಪುಟ ಅನುಮೋದನೆ

ಪ್ರಧಾನಿ ಮೋದಿ ಇತ್ತೀಚೆಗೆ ಉಕ್ರೇನ್‌ ಪ್ರವಾಸ ನಡೆಸಿದ್ದರು. ಈ ವೇಳೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ರಷ್ಯಾದೊಂದಿಗೆ ನಡೆಯುತ್ತಿರುವ ಸಂಘರ್ಷದ ಕುರಿತು ಚರ್ಚಿಸಿದ್ದರು. ಭಾರತ-ಉಕ್ರೇನ್ ಜಂಟಿ ಹೇಳಿಕೆಯಲ್ಲಿ ಪ್ರಧಾನಿ ಮೋದಿಯವರ ಕಚೇರಿಯು ಎರಡೂ ನಾಯಕರು ಪ್ರಾದೇಶಿಕ ಸಮಗ್ರತೆ ಮತ್ತು ರಾಜ್ಯಗಳ ಸಾರ್ವಭೌಮತ್ವವನ್ನು ಗೌರವಿಸುವಂತಹ ಯುಎನ್ ಚಾರ್ಟರ್ ಸೇರಿದಂತೆ ಅಂತಾರಾಷ್ಟ್ರೀಯ ಕಾನೂನಿನ ತತ್ವಗಳನ್ನು ಎತ್ತಿಹಿಡಿಯುವಲ್ಲಿ ಹೆಚ್ಚಿನ ಸಹಕಾರಕ್ಕಾಗಿ ತಮ್ಮ ಸಿದ್ಧತೆಯನ್ನು ಪುನರುಚ್ಚರಿಸಿದ್ದರು.

ಇದನ್ನೂ ಓದಿ: ಅಮೆರಿಕ ಅಧ್ಯಕ್ಷ ಬೈಡೆನ್​ಗೆ ಪ್ರಧಾನಿ ಮೋದಿ ಫೋನ್; ಉಕ್ರೇನ್ ಸಂಘರ್ಷ, ಬಾಂಗ್ಲಾದೇಶದ ಅಶಾಂತಿ ಕುರಿತು ಚರ್ಚೆ

ತಮ್ಮ ಉಕ್ರೇನ್ ಭೇಟಿಗೂ ಒಂದು ತಿಂಗಳ ಮೊದಲು ಜುಲೈನಲ್ಲಿ ಪ್ರಧಾನಿ ಮೋದಿ ರಷ್ಯಾ ಪ್ರವಾಸ ಮಾಡಿದ್ದರು. ಆಗ ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Tue, 27 August 24