ಹಾಥರಸ್ ಕಾಲ್ತುಳಿತ ದುರಂತಕ್ಕೆ ರಷ್ಯಾದ ವ್ಲಾಡಿಮಿರ್ ಪುಟಿನ್ ಸಂತಾಪ

ಉತ್ತರ ಪ್ರದೇಶದ ಹಾಥರಸ್​​ನಲ್ಲಿ ಧಾರ್ಮಿಕ ಬೋಧಕ ಭೋಲೆ ಬಾಬಾ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮವಾದ 'ಸತ್ಸಂಗ'ಕ್ಕಾಗಿ ಹಾಥರಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದ ರಾತಿ ಭಾನ್‌ಪುರ್ ಗ್ರಾಮದಲ್ಲಿ ವಿಶೇಷವಾಗಿ ಹಾಕಲಾದ ಟೆಂಟ್‌ನಲ್ಲಿ ಮಂಗಳವಾರ ಸಾವಿರಾರು ಜನರು ಜಮಾಯಿಸಿದಾಗ ಕಾಲ್ತುಳಿತ ಸಂಭವಿಸಿದೆ.

ಹಾಥರಸ್ ಕಾಲ್ತುಳಿತ ದುರಂತಕ್ಕೆ ರಷ್ಯಾದ ವ್ಲಾಡಿಮಿರ್ ಪುಟಿನ್ ಸಂತಾಪ
ವ್ಲಾಡಿಮಿರ್ ಪುಟಿನ್
Follow us
|

Updated on: Jul 03, 2024 | 8:30 PM

ಮಾಸ್ಕೊ ಜುಲೈ 03: ಉತ್ತರ ಪ್ರದೇಶ ಹಾಥರಸ್​​ನಲ್ಲಿ (Hathras stampede) ಕಾಲ್ತುಳಿತ ಸಂಭವಿಸಿ 121 ಜನರು ಸಾವಿಗೀಡಾಗಿದ್ದು ಈ ಘಟನೆಯ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಪುಟಿನ್ ಸಂದೇಶ ಕಳುಹಿಸಿದ್ದು, ಉತ್ತರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಅಪಘಾತದ ಬಗ್ಗೆ ಅತ್ಯಂತ ಪ್ರಾಮಾಣಿಕ ಸಂತಾಪವನ್ನು ದಯವಿಟ್ಟು ಸ್ವೀಕರಿಸಿ. ದಯವಿಟ್ಟು ಮೃತರ ಹತ್ತಿರದ ಮತ್ತು ಆತ್ಮೀಯರಿಗೆ ಸಹಾನುಭೂತಿ ಮತ್ತು ಬೆಂಬಲದ ಮಾತುಗಳನ್ನು ತಿಳಿಸಿ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ ಎಂದು ರಷ್ಯಾ ಅಧ್ಯಕ್ಷರು ಹೇಳಿದ್ದಾರೆ.

ಧಾರ್ಮಿಕ ಬೋಧಕ ಭೋಲೆ ಬಾಬಾ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮವಾದ ‘ಸತ್ಸಂಗ’ಕ್ಕಾಗಿ ಹಾಥರಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದ ರಾತಿ ಭಾನ್‌ಪುರ್ ಗ್ರಾಮದಲ್ಲಿ ವಿಶೇಷವಾಗಿ ಹಾಕಲಾದ ಟೆಂಟ್‌ನಲ್ಲಿ ಮಂಗಳವಾರ ಸಾವಿರಾರು ಜನರು ಜಮಾಯಿಸಿದಾಗ ಕಾಲ್ತುಳಿತ ಸಂಭವಿಸಿದೆ.

ಪೊಲೀಸರ ಪ್ರಕಾರ, ಭಾರೀ ಜನಸಂದಣಿ, ಹೊರಗೆ ಹೋಗಲು ಜಾಗ ಇಲ್ಲದೇ ಇರುವುದು, ಕೆಟ್ಟ ಹವಾಮಾನ ಮತ್ತು ಇತರ ಅಂಶಗಳು ಹೆಚ್ಚಿನ ಸಾವಿನ ಸಂಖ್ಯೆಗೆ ಕಾರಣವಾಗಿರಬಹುದು. ಏತನ್ಮಧ್ಯೆ, ಕಾರ್ಯಕ್ರಮ ಮುಗಿಸಿ ಸತ್ಸಂಗದ ಪ್ರಚಾರಕರು ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿರುವ ವ್ಯಕ್ತಿಯೊಬ್ಬರು ಹೇಳಿದ್ದಾರೆ. ಹಲವಾರು ಜನರು ದೇವಮಾನವನ ಕಾಲಿಗೆ ಬೀಳಲು ಅವನ ಕಡೆಗೆ ಧಾವಿಸಿದರು, ಇದರಿಂದಾಗಿ ಕಾಲ್ತುಳಿತವಾಯಿತು ಎಂದು ಸಂತ್ರಸ್ತರಲ್ಲಿ ಒಬ್ಬರು ಹೇಳಿದರು.

ಅಧಿಕಾರಿಗಳ ಆರಂಭಿಕ ವರದಿ ಪ್ರಕಾರ ಹೊರಗೆ ಹೋಗುವ ಬಾಗಿಲಿನಿ ಕಡೆಗೆ ಸಾವಿರಾರು ಜನರು ಸೇರುತ್ತಿದ್ದಂತೆ, ಅನೇಕರು ಮಣ್ಣಿನ ನೆಲದ ಮೇಲೆ ಜಾರಿದರು, ಇದರಿಂದಾಗಿ ಅವರು ಒಬ್ಬರ ಮೇಲೆ ಒಬ್ಬರು ಬಿದ್ದು ದುರಂತ ಸಂಭವಿಸಿದೆ.

ಇದನ್ನೂ ಓದಿ:  ಹಾಥರಸ್ ಕಾಲ್ತುಳಿತ: ಸಾವಿನ ಸಂಖ್ಯೆ 121ಕ್ಕೆ ಏರಿಕೆ; ಘಟನೆ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ

ಬುಧವಾರ, ಉತ್ತರ ಪ್ರದೇಶ ಪೊಲೀಸರು ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೇವಲ 80,000 ಮಂದಿಗೆ ಮಾತ್ರ ಅನುಮತಿ ನೀಡಿದ ಕಾರ್ಯಕ್ರಮಕ್ಕೆ 2.5 ಲಕ್ಷ ಜನರೊಂದಿಗೆ ಸಾಕ್ಷಿಗಳನ್ನು ಮರೆಮಾಚಿದ್ದಾರೆ ಮತ್ತು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಕಾಲ್ತುಳಿತಕ್ಕೆ ಕಾರಣವಾದ ‘ಸತ್ಸಂಗ’ದ ಹಿಂದಿನ ವ್ಯಕ್ತಿ ಭೋಲೆ ಬಾಬಾನನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿಲ್ಲ.

ಘಟನೆಯ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. “ನಾವು ಎಡಿಜಿ ಆಗ್ರಾ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದ್ದೇವೆ. ಇದು ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಲಾಗಿ ಎಂದು ಸಿಎಂ ಯೋಗಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್