ಭಯೋತ್ಪಾದನಾ ನಿಗ್ರಹಕ್ಕೆ ಆದ್ಯತೆ; ಚೀನಾದ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಮಾತುಕತೆ

ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ದೆಹಲಿಯಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ತಮ್ಮ ಆರಂಭಿಕ ಭಾಷಣದಲ್ಲಿ ಸಚಿವ ಜೈಶಂಕರ್ ಅವರು ಭಾರತ ಮತ್ತು ಚೀನಾದ ವಿಶೇಷ ಪ್ರತಿನಿಧಿಗಳ ನಡುವಿನ 24ನೇ ಸುತ್ತಿನ ಮಾತುಕತೆಗೆ ಚೀನಾದ ವಿದೇಶಾಂಗ ಸಚಿವ ಮತ್ತು ಅವರ ನಿಯೋಗವನ್ನು ಸ್ವಾಗತಿಸಿದ್ದಾರೆ.

ಭಯೋತ್ಪಾದನಾ ನಿಗ್ರಹಕ್ಕೆ ಆದ್ಯತೆ; ಚೀನಾದ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಮಾತುಕತೆ
S Jaishankar In China

Updated on: Aug 18, 2025 | 8:55 PM

ನವದೆಹಲಿ, ಆಗಸ್ಟ್ 18: ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ (Wang Yi) ಇಂದು (ಸೋಮವಾರ) ತಮ್ಮ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಇದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ (Ajit Doval) ಅವರೊಂದಿಗೆ ಗಡಿ ಸಮಸ್ಯೆಗಳ ಕುರಿತು ನಿರ್ಣಾಯಕ ಚರ್ಚೆಗಳಿಗೆ ವೇದಿಕೆಯನ್ನು ಸಿದ್ಧಪಡಿಸಿತು. ಪ್ರಧಾನಿ ನರೇಂದ್ರ ಮೋದಿ (PM Narendra Modi) ವಾರ್ಷಿಕ ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಗಾಗಿ ಚೀನಾಕ್ಕೆ ಪ್ರಯಾಣಿಸಲಿದ್ದಾರೆ. ಅದಕ್ಕೂ ಕೆಲವು ದಿನಗಳ ಮೊದಲು ಚೀನಾದ ವಿದೇಶಾಂಗ ಸಚಿವ ವಾಂಗ್ ಭಾರತಕ್ಕೆ ಆಗಮಿಸಿದ್ದಾರೆ.

ಇಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ವಾಂಗ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. “ಈ ಸಂದರ್ಭವು ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಲು ನಮಗೆ ಅವಕಾಶವನ್ನು ಒದಗಿಸುತ್ತದೆ. ಜಾಗತಿಕ ಪರಿಸ್ಥಿತಿ ಮತ್ತು ಪರಸ್ಪರ ಆಸಕ್ತಿಯ ಕೆಲವು ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಇದು ಸೂಕ್ತ ಸಮಯ. ನಮ್ಮ ಎರಡೂ ದೇಶಗಳ ನಡುವಿನ ಸಂಬಂಧದಲ್ಲಿ ಕಠಿಣ ಸಮಯವನ್ನು ಕಂಡ ನಂತರ, ನಮ್ಮ ಎರಡೂ ರಾಷ್ಟ್ರಗಳು ಈಗ ಮುಂದುವರಿಯಲು ಪ್ರಯತ್ನಿಸುತ್ತಿವೆ. ಇದಕ್ಕೆ ಎರಡೂ ಕಡೆಯಿಂದ ಪ್ರಾಮಾಣಿಕ ಪ್ರಯತ್ನದ ಅಗತ್ಯವಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2008ರ ಮುಂಬೈ ದಾಳಿಯಲ್ಲಿ ಯಾವ ಕ್ರಮ ತೆಗೆದುಕೊಂಡಿರಿ?; ರಾಹುಲ್ ಗಾಂಧಿ ವಿರುದ್ಧ ಸಚಿವ ಜೈಶಂಕರ್ ವಾಗ್ದಾಳಿ


ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ. 50ಕ್ ಏರಿಸಿದ ನಂತರ ಭಾರತ-ಯುಎಸ್ ಸಂಬಂಧಗಳಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಚೀನಾದ ವಿದೇಶಾಂಗ ಸಚಿವರ ಭಾರತ ಪ್ರವಾಸವು ಮಹತ್ವದ್ದಾಗಿದೆ. ಇದರಲ್ಲಿ ರಷ್ಯಾದ ಕಚ್ಚಾ ತೈಲವನ್ನು ಖರೀದಿಸಿದ್ದಕ್ಕೆ ಶೇ. 25ರಷ್ಟು ಹೆಚ್ಚುವರಿ ದಂಡವೂ ಸೇರಿದೆ. ವಾಂಗ್ ಮತ್ತು ಎನ್ಎಸ್ಎ ಅಜಿತ್ ದೋವಲ್ ನಾಳೆ (ಮಂಗಳವಾರ) ಬೆಳಿಗ್ಗೆ 11 ಗಂಟೆಗೆ ಗಡಿ ಸಮಸ್ಯೆ ಕುರಿತು ಸಂವಾದ ನಡೆಸಲಿದ್ದಾರೆ. ಮಂಗಳವಾರ ಸಂಜೆ 5.30ಕ್ಕೆ ವಾಂಗ್ ಅವರು ಪ್ರಧಾನಿ ಮೋದಿಯನ್ನು ದೆಹಲಿಯ ಲೋಕ್ ಕಲ್ಯಾಣ್ ಮಾರ್ಗ ನಿವಾಸದಲ್ಲಿ ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ: 2020ರ ಗಲ್ವಾನ್ ಘರ್ಷಣೆ ನಂತರ ಮೊದಲ ಬಾರಿಗೆ ಚೀನಾಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

2020ರಲ್ಲಿ ಮಾರಕ ಗಾಲ್ವಾನ್ ಕಣಿವೆಯ ಘರ್ಷಣೆಗಳ ನಂತರ ದ್ವಿಪಕ್ಷೀಯ ಸಂಬಂಧಗಳು ಕುಸಿದವು. ಸುಮಾರು 4 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ರಷ್ಯಾದ ಕಜಾನ್ ನಗರದಲ್ಲಿ ಭೇಟಿಯಾದರು. ಇದಾದ ನಂತರ ಎರಡೂ ದೇಶಗಳ ನಡುವಿನ ಅಂತರ ಕೊಂಚ ಕಡಿಮೆಯಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ