Sudan Conflict: ಸುಡಾನ್​​ನಲ್ಲಿರುವ ಭಾರತೀಯರ ಸುರಕ್ಷತೆಗೆ 4 ದೇಶಗಳ ಜತೆ ಎಸ್ ಜೈಶಂಕರ್ ಮಾತುಕತೆ

|

Updated on: Apr 19, 2023 | 11:36 AM

ಇದೀಗ ಸುಡಾನ್‌ನಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತವು ಯುಎಸ್, ಯುಕೆ, ಸೌದಿ ಅರೇಬಿಯಾ ಮತ್ತು ಯುಎಇಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತಿದೆ ಎಂದು ಮೂಲಗಳು ತಿಳಿಸಿದೆ.

Sudan Conflict: ಸುಡಾನ್​​ನಲ್ಲಿರುವ ಭಾರತೀಯರ ಸುರಕ್ಷತೆಗೆ 4 ದೇಶಗಳ ಜತೆ ಎಸ್ ಜೈಶಂಕರ್ ಮಾತುಕತೆ
ಜೈಶಂಕರ್
Follow us on

ಸುಡಾನ್‌ನಲ್ಲಿ (Sudan) ಸೇನೆಗಳ ನಡುವೆ ನಡೆಯುತ್ತಿರುವ ಹಿಂಸಾಚಾರದಲ್ಲಿ ಅನೇಕ ಸಾವು ನೋವುಗಳು ಸಂಭವಿಸಿದೆ. ಇದೀಗ ಸುಡಾನ್‌ನಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತವು ಯುಎಸ್, ಯುಕೆ, ಸೌದಿ ಅರೇಬಿಯಾ ಮತ್ತು ಯುಎಇಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತಿದೆ ಎಂದು ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಸೌದಿ ಅರೇಬಿಯಾ ಮತ್ತು ಯುಎಇಯಲ್ಲಿರುವ ತಮ್ಮ ಸಹವರ್ತಿಗಳೊಂದಿಗೆ ಸುಡಾನ್‌ನ ಪರಿಸ್ಥಿತಿಯ ಬಗ್ಗೆ ಚರ್ಚಿಸುತ್ತಿದೆ ಮತ್ತು ಎರಡೂ ದೇಶಗಳು ಸಹಾಯವನ್ನು ಪಡೆದು ಭಾರತೀಯರ ರಕ್ಷಣೆಗೆ ಕಾರ್ಯತಂತ್ರವನ್ನು ರೂಪಿಸಲಿದೆ.

ಸುಡಾನ್‌ನಲ್ಲಿರುವ ಭಾರತೀಯರ ಸುರಕ್ಷತೆ ಬಗ್ಗೆ ಮಾಹಿತಿ ಪಡೆಯಲು ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರಿ ಮತ್ತು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಕೂಡ ಸರ್ಕಾರಗಳೊಂದಿಗೆ ಸಂಪರ್ಕ ಸಾಧಿಸುತ್ತಿದೆ. ಇದೀಗ ಭಾರತವು ಈ ವಿಚಾರವಾಗಿ ವಿಶ್ವಸಂಸ್ಥೆ (ಯುಎನ್) ನೊಂದಿಗೆ ಸುಡಾನ್​​ನಲ್ಲಿ ನಡೆಯುತ್ತಿರುವ ಘಟನೆಯ ಬಗ್ಗೆ ಚರ್ಚೆ ನಡೆಸುತ್ತಿದೆ.

ಸುಡಾನ್​​ನಲ್ಲಿ ನಡೆಯುತ್ತಿರುವ ವಿದ್ಯಾಮಾನಗಳ ಬಗ್ಗೆ ಮತ್ತು ಭಾರತೀಯರ ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ಪಡೆಯಲು ದೆಹಲಿಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುವುದು ಎಂದು ವಿದೇಶಾಂಗ ಸಚಿವರು ಹೇಳಿದ್ದಾರೆ. ನಾವು ಖಾರ್ಟೂಮ್‌ನಲ್ಲಿರುವ ನಮ್ಮ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಮತ್ತು ಭಾರತೀಯ ಸ್ಥಿತಿಗತಿಗಳ ಬಗ್ಗೆ ವರದಿಗಳನ್ನು ಪಡೆಯುತ್ತಿದ್ದೇವೆ. ಖಾರ್ಟೂಮ್‌ನಲ್ಲಿರುವ ನಮ್ಮ ರಾಯಭಾರ ಕಚೇರಿಯ ಸಿಬ್ಬಂದಿಗಳು ಸುಡಾನ್​​ನಲ್ಲಿರುವ ಪ್ರತಿಯೊಬ್ಬ ಭಾರತೀಯರ ಸಂಪರ್ಕ ಸಾಧಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರ ಜತೆಗೆ, ವಾಟ್ಸಾಪ್ ಗ್ರೂಪ್ ಮಾಡಿ ಭಾರತೀಯರ ಸಂಪರ್ಕವನ್ನು ಪಡೆಯುವ ತಂತ್ರದ ಜತೆಗೆ ಇತರ ವಿಧಾನಗಳನ್ನು ಮಾಡಲಾಗುತ್ತಿದೆ ಎಂದು ಸಚಿವಾಲಯ ಹೇಳಿದೆ.

ಸುಡಾನ್‌ನಲ್ಲಿ ಪರಿಸ್ಥಿತಿಯು ತುಂಬಾ ಉದ್ವಿಗ್ನವಾಗಿದೆ ಮತ್ತು ಈ ಹಂತದಲ್ಲಿ ಎಲ್ಲಿಯುವ ಓಡಾಡುವ ಸ್ಥಿತಿ ಇಲ್ಲ. ಹಾಗಾಗಿ ನಮ್ಮ ಭಾರತೀಯರ ಸಂಚಾರ ಸುರಕ್ಷತೆ ಮತ್ತು ಯೋಗಕ್ಷೇಮ ಮುಖ್ಯ ಎಂದು ಹೇಳಿದೆ. ಸಚಿವಾಲಯ ಮತ್ತು ರಾಯಭಾರ ಕಚೇರಿ ಎರಡೂ ನಿರಂತರವಾಗಿ ಪರಿಸ್ಥಿತಿ ಬಗ್ಗೆ ಮೇಲ್ವಿಚಾರಣೆ ಮಾಡುತ್ತಿದ್ದು, ಭದ್ರತೆಯ ಎಲ್ಲ ವರದಿಯನ್ನು ಪಡೆಯಲಾಗುತ್ತಿದೆ. ಇದರ ಜತೆಗೆ ನಮಗೆ ಅಲ್ಲಿಯ ವರದಿಗಳನ್ನು ತಿಳಿಸದಂತೆ ನಿರ್ಬಂಧಿಸಲಾಗುತ್ತಿದೆ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: Sudan conflict: ಸಂಘರ್ಷ ಪೀಡಿತ ಆಫ್ರಿಕಾದಲ್ಲಿ ಸಿಲುಕಿದ ನೂರಾರು ಕನ್ನಡಿಗರು: ಅಲ್ಲಿನ ಸಂಕಷ್ಟದ ಬಗ್ಗೆ ಟಿವಿ9 ಜೊತೆ ಅಳಲು ತೋಡಿಕೊಂಡ ದಾವಣಗೆರೆ ವ್ಯಕ್ತಿ

ಯುಎಇಯ ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗಿನ ದೂರವಾಣಿ ಸಂಭಾಷಣೆಯ ಮೂಲಕ ಭಾರತದ ವಿದೇಶಾಂಗ ಸಚಿವ ಎಸ್​​. ಜೈಶಂಕರ್​​ ಸುಡಾನ್‌ನಲ್ಲಿನ ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಈ ಮಾತುಕತೆಯಿಂದ ಒಂದು ಒಳ್ಳೆಯ ಭರವಸೆ ಮೂಡಿದೆ, ಜತೆಗೆ ಎಲ್ಲ ವಿದೇಶಾಂಗ ಸಚಿವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸುಡಾನ್​ನಲ್ಲಿ ಈಗ ಇರುವ ಪರಿಸ್ಥಿತಿಯ ಬಗ್ಗೆ 4 ದೇಶಗಳು ಬೇಸರ ವ್ಯಕ್ತಪಡಿಸಿದೆ, ಭಾರತದ ಜತೆಗೆ ನಿಕಟ ಸಂಪರ್ಕದಲ್ಲಿರುತ್ತೇವೆ ಎಂದು ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ.

ಸುಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯರು ತಮ್ಮ ನಿವಾಸಗಳಿಂದ ಹೊರಗೆ ಹೋಗದಂತೆ ಸಲಹೆಯನ್ನು ನೀಡಿತು. ಖಾರ್ಟೂಮ್‌ನಲ್ಲಿ ನಡೆದ ಗುಂಡಿನ ದಾಳಿಯಿಂದ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ರಾಯಭಾರ ಕಚೇರಿ ಭಾನುವಾರ ತಿಳಿಸಿದೆ. ಸುಡಾನ್ ಕಳೆದ ಆರು ದಿನಗಳಿಂದ ದೇಶದ ಸೇನೆ ಮತ್ತು ಅರೆಸೈನಿಕರ ನಡುವೆ ಹಿಂಸಾತ್ಮಕ ಘರ್ಷಣೆಗೆ ನಡೆಯುತ್ತಿದೆ, ಸುಮಾರು 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 10:54 am, Wed, 19 April 23