Khalistanis: ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಿಗೆ ಭಾರತ ಮನವಿ

ಖಲಿಸ್ತಾನಿ(Khalistani)ಗಳಿಗೆ ಜಾಗ ನೀಡದಂತೆ ಕೆನಡಾ, ಅಮೆರಿಕ, ಯುಕೆ ಹಾಗೂ ಆಸ್ಟ್ರೇಲಿಯಾ ದೇಶಗಳಿಗೆ ಭಾರತ ಮನವಿ ಮಾಡಿದೆ. ಇದು ನಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್(S Jaishankar) ಹೇಳಿದ್ದಾರೆ.

Khalistanis: ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಿಗೆ ಭಾರತ ಮನವಿ
ಎಸ್ ಜೈಶಂಕರ್
Follow us
ನಯನಾ ರಾಜೀವ್
|

Updated on:Jul 05, 2023 | 11:36 AM

ಖಲಿಸ್ತಾನಿ(Khalistani)ಗಳಿಗೆ ಜಾಗ ನೀಡದಂತೆ ಕೆನಡಾ, ಅಮೆರಿಕ, ಯುಕೆ ಹಾಗೂ ಆಸ್ಟ್ರೇಲಿಯಾ ದೇಶಗಳಿಗೆ ಭಾರತ ಮನವಿ ಮಾಡಿದೆ. ಇದು ನಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್(S Jaishankar) ಹೇಳಿದ್ದಾರೆ. ಖಲಿಸ್ತಾನಿಗಳ ಮನಸ್ಥಿತಿಯು ಭಾರತ ಹಾಗೂ ಅವರು ವಾಸಿಸುತ್ತಿರುವ ದೇಶಗಳಿಗೆ ಹಾನಿಕಾರಕವಾಗಿದೆ. ಕೆನಡಾದಲ್ಲಿ ಸಿಖ್ ಫಾರ್ ಜಸ್ಟಿಸ್ ಬ್ಯಾನರ್ ಅಡಿಯಲ್ಲಿ ಕೆಲವು ಪೋಸ್ಟರ್‌ಗಳನ್ನು ಹಾಕಲಾಗಿದೆ, ಅದರಲ್ಲಿ ಕಿಲ್ ಇಂಡಿಯಾ ಎಂದು ಬರೆಯಲಾಗಿತ್ತು.

ಈ ಪೋಸ್ಟರ್‌ನಲ್ಲಿ ಜುಲೈ 8 ರಂದು ನಿಗದಿಯಾಗಿರುವ ಖಲಿಸ್ತಾನ್ ಫ್ರೀಡಂ ರ್ಯಾಲಿಗೆ ಜನರನ್ನು ಆಹ್ವಾನಿಸಲಾಗಿದೆ. ಪೋಸ್ಟರ್ ಪ್ರಕಾರ, ರ್ಯಾಲಿಯು ಗ್ರೇಟ್ ಪಂಜಾಬ್ ಬಿಸಿನೆಸ್ ಸೆಂಟರ್ ಮಾಲ್ಟನ್‌ನಿಂದ ಪ್ರಾರಂಭವಾಗಿ ಟೊರೊಂಟೊದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಕೊನೆಗೊಳ್ಳುತ್ತದೆ. ಖಾಲಿಸ್ತಾನ್ ಟೈಗರ್ ಫೋರ್ಸ್‌ನ ಮಾಜಿ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಹತ್ಯೆ ಮಾಡಲಾಗಿದೆ.

ಮತ್ತಷ್ಟು ಓದಿ: Amritpal Singh: ಖಲಿಸ್ತಾನಿ ಬೆಂಬಲಿಗ ಅಮೃತ್​ಪಾಲ್ ಸಿಂಗ್ ಶರಣಾಗುವ ಸಾಧ್ಯತೆ, ಏ.14ರವರೆಗೆ ಪಂಜಾಬ್​ ಪೊಲೀಸರ ರಜೆಗಳು ರದ್ದು

ಕೆನಡಾದಲ್ಲಿ ಭಾರತೀಯ ರಾಯಭಾರಿ, ಹೈಕಮಿಷನರ್ ಸಂಜಯ್ ವರ್ಮಾ ಮತ್ತು ಟೊರೊಂಟೊದಲ್ಲಿರುವ ಭಾರತದ ಕಾನ್ಸುಲ್ ಜನರಲ್ ಅಪೂರ್ವ ಶ್ರೀವಾಸ್ತವ ಅವರ ಚಿತ್ರಗಳು ಮತ್ತು ಹೆಸರುಗಳನ್ನು ಹೊಂದಿರುವ ಖಲಿಸ್ತಾನ್ ಪರ ಪೋಸ್ಟರ್ ಕೆನಡಾದಲ್ಲಿ ಹೊರಬಿದ್ದಿದ್ದು, ಖಲಿಸ್ತಾನಿ ಹರ್ದೀಪ್ ನಿಜ್ಜಾರ್ ಹತ್ಯೆಗೆ ಭಾರತವೇ ಕಾರಣ ಎಂದು ಹೇಳಿಕೊಂಡಿದೆ.

2022 ರಲ್ಲಿ, ಜಲಂಧರ್‌ನಲ್ಲಿ ಪಾದ್ರಿಯೊಬ್ಬರನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಖಾಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ನಿಜ್ಜರ್‌ಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.

ಮಾರ್ಚ್‌ನಲ್ಲಿ ಖಲಿಸ್ತಾನ ಬೆಂಬಲಿಗರು ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:35 am, Wed, 5 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್