AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಅಫ್ಘಾನಿಸ್ತಾನದ ಸಂಬಂಧವನ್ನು ಹಾಳುಮಾಡಲು ಪಾಕ್​ಗೆ ಬಿಡುವುದಿಲ್ಲ: ಜೈಶಂಕರ್

ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಸಂಬಂಧವನ್ನು ಹಾಳು ಮಾಡಲು ಅವಕಾಶ ಮಾಡಿಕೊಡುವುದಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ತಾಲಿಬಾನ್ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನವು ಐಸಿಸ್-ಕೆ, ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಮತ್ತು ಅಲ್-ಖೈದಾದಂತಹ ಉಗ್ರಗಾಮಿ ಗುಂಪುಗಳಿಗೆ ಕೇಂದ್ರವಾಗಿ ಉಳಿದಿದೆ. ಜೊತೆಗೆ, ಅಫ್ಘಾನಿಸ್ತಾನವು ಚೀನಾಕ್ಕೆ ಹತ್ತಿರವಾಗುತ್ತಿದೆ, ಚೀನಾ ಕಂಪನಿಗಳಿಗೆ ಗಣಿಗಾರಿಕೆ ಗುತ್ತಿಗೆಗಳನ್ನು ಪಾಕಿಸ್ತಾನ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಭಾರತ-ಅಫ್ಘಾನಿಸ್ತಾನದ ಸಂಬಂಧವನ್ನು ಹಾಳುಮಾಡಲು ಪಾಕ್​ಗೆ ಬಿಡುವುದಿಲ್ಲ: ಜೈಶಂಕರ್
ಎಸ್ ಜೈಶಂಕರ್
ನಯನಾ ರಾಜೀವ್
|

Updated on: May 16, 2025 | 8:59 AM

Share

ನವದೆಹಲಿ, ಮೇ 16: ಭಾರತ(India) ಹಾಗೂ ಅಫ್ಘಾನಿಸ್ತಾನ(Afghanistan)ದ ನಡುವಿನ ಸಂಬಂಧವನ್ನು ಹಾಳು ಮಾಡಲು ಪಾಕಿಸ್ತಾನಕ್ಕೆ ಬಿಡುವುದಿಲ್ಲವೆಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಜೈಶಂಕರ್ ಮತ್ತು ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ನಡುವಿನ ಇತ್ತೀಚಿನ ಮಾತುಕತೆಯ ಒಳಗಿನ ವಿವರಗಳನ್ನು ಸರ್ಕಾರಿ ಉನ್ನತ ಮೂಲಗಳು ಬಹಿರಂಗಪಡಿಸಿವೆ.  ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಜೈಶಂಕರ್ ಮತ್ತು ಮುತ್ತಕಿ ನೇರವಾಗಿ ಮಾತನಾಡುತ್ತಿರುವುದು ಇದೇ ಮೊದಲು . ಈ ಮಾತುಕತೆಗಳು ಎರಡೂ ರಾಷ್ಟ್ರಗಳಿಗೆ ಮತ್ತು ಪ್ರಾದೇಶಿಕ ಸ್ಥಿರತೆಗೆ ಕಾರ್ಯತಂತ್ರದ ಮಹತ್ವವನ್ನು ಹೊಂದಿವೆ.

ತಾಲಿಬಾನ್ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನವು ಐಸಿಸ್-ಕೆ, ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಮತ್ತು ಅಲ್-ಖೈದಾದಂತಹ ಉಗ್ರಗಾಮಿ ಗುಂಪುಗಳಿಗೆ ಕೇಂದ್ರವಾಗಿ ಉಳಿದಿದೆ. ಜೊತೆಗೆ, ಅಫ್ಘಾನಿಸ್ತಾನವು ಚೀನಾಕ್ಕೆ ಹತ್ತಿರವಾಗುತ್ತಿದೆ, ಚೀನಾ ಕಂಪನಿಗಳಿಗೆ ಗಣಿಗಾರಿಕೆ ಗುತ್ತಿಗೆಗಳನ್ನು ಪಾಕಿಸ್ತಾನ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ನಂತಹ ಗುಂಪುಗಳು ಸೇರಿದಂತೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಗೆ ಅಫ್ಘಾನ್ ಪ್ರದೇಶವನ್ನು ಬಳಸದಂತೆ ತಡೆಯಲು ತಾಲಿಬಾನ್ ಬದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನ ಸೃಷ್ಟಿಸಿದ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಈ ಚರ್ಚೆಗಳು ಹೊಂದಿದ್ದವು. ಪಾಕಿಸ್ತಾನವು ತಮ್ಮ ದೇಶಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಬಿಡುವುದಿಲ್ಲ ಎಂದು ಇಬ್ಬರೂ ನಾಯಕರು ಪರಸ್ಪರ ಭರವಸೆ ನೀಡಿದರು.

ಭಾರತೀಯ ಕ್ಷಿಪಣಿ ಅಫ್ಘಾನಿಸ್ತಾನವನ್ನು ಹೊಡೆದುರುಳಿಸಿದೆ ಎಂಬ ಪಾಕಿಸ್ತಾನದ ಹೇಳಿಕೆಯ ನಂತರ, ಕಾಬೂಲ್ ಅವುಗಳನ್ನು ಸುಳ್ಳು ಎಂದು ನಿರಾಕರಿಸಿದೆ. ಪಾಕಿಸ್ತಾನದ ಆರೋಪಗಳು ಆಧಾರರಹಿತ ಎಂದು ಅಫ್ಘಾನ್ ರಕ್ಷಣಾ ಸಚಿವಾಲಯದ ವಕ್ತಾರ ಎನೈತುಲ್ಲಾ ಖವರ್ಜ್ಮಿ ಹೇಳಿದ್ದಾರೆ.

ಮತ್ತಷ್ಟು ಓದಿ:ಸ್ಟೈಲಿಶ್ ಹೇರ್​ ಕಟ್, ಮಸೀದಿಗೆ ಗೈರಾದವರನ್ನು ಹಿಡಿದು ಜೈಲಿಗಟ್ಟುತ್ತಿದೆ ತಾಲಿಬಾನ್

ಅಫ್ಘಾನಿಸ್ತಾನ ಸುರಕ್ಷಿತ ಮತ್ತು ಸುಭದ್ರವಾಗಿದೆ. ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಅಫ್ಘಾನ್ ರಕ್ಷಣಾ ಸಚಿವಾಲಯದ ವಕ್ತಾರರನ್ನು ಉಲ್ಲೇಖಿಸಿ ಖಾಮಾ ಪ್ರೆಸ್ ವರದಿ ಮಾಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳು. ಅಫ್ಗಾನಿಸ್ತಾನದ ಜನರೊಂದಿಗೆ ನಮ್ಮ ಸಾಂಪ್ರದಾಯಿಕ ಸ್ನೇಹ ಮತ್ತು ಅವರ ಅಭಿವೃದ್ಧಿ ಅಗತ್ಯಗಳಿಗೆ ನಿರಂತರ ಬೆಂಬಲದ ಕುರಿತು ಮಾತುಕತೆ ನಡೆಸಲಾಯಿತು. ಉಭಯ ದೇಶಗಳ ಸಹಕಾರವನ್ನು ಮುಂದಕ್ಕೆ ಕೊಂಡೊಯ್ಯುವ ಮಾರ್ಗಗಳು ಮತ್ತು ವಿಧಾನಗಳ ಕುರಿತು ಚರ್ಚಿಸಲಾಯಿತು ಮುತ್ತಕಿ ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ