All Party Meeting: ಹಸೀನಾ ಮೊದಲು ಚೇತರಿಸಿಕೊಳ್ಳಲಿ, ಸರ್ವಪಕ್ಷಗಳ ಸಭೆಯಲ್ಲಿ ಜೈಶಂಕರ್ ಮಾತು

Bangladesh Protest: ಬಾಂಗ್ಲಾದೇಶದಲ್ಲಿನ ಪ್ರಸ್ತುತ ಪರಿಸ್ಥಿತಿ ಹಾಗೂ ಶೇಖ್ ಹಸೀನಾ ಭಾರತಕ್ಕೆ ಆಗಮಿಸಿರುವ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಅಲ್ಲಿರುವ ಭಾರತೀಯರ ಬಗ್ಗೆ ಮಾತನಾಡಿದ್ದು, ಸ್ಥಳಾಂತರಿಸುವಷ್ಟು ಕೆಟ್ಟದ್ದಿಲ್ಲ, ಆದರೆ ಎಚ್ಚರದಿಂದಿರಬೇಕು ಎಂದು ಹೇಳಿದರು.

All Party Meeting: ಹಸೀನಾ ಮೊದಲು ಚೇತರಿಸಿಕೊಳ್ಳಲಿ, ಸರ್ವಪಕ್ಷಗಳ ಸಭೆಯಲ್ಲಿ ಜೈಶಂಕರ್ ಮಾತು
ಸರ್ವಪಕ್ಷಗಳ ಸಭೆ
Follow us
|

Updated on: Aug 06, 2024 | 12:02 PM

ಬಾಂಗ್ಲಾದೇಶದಲ್ಲಿ ಉದ್ಭವಿಸಿರುವ ಅಶಾಂತಿ ಹಾಗೂ ಭಾರತಕ್ಕೆ ಬಂದು ಆಶ್ರಯ ಪಡೆದಿರುವ ಪ್ರಧಾನಿ ಶೇಖ್ ಹಸೀನಾ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸರ್ವಪಕ್ಷಗಳ ಸಭೆ ಕರೆದಿದ್ದರು. ಶೇಖ್​ ಹಸೀನಾ ಮೊದಲು ಚೇತರಿಸಿಕೊಳ್ಳಲಿ ಒಂದೆಡೆ ನೆಲೆಯೂರಲಿ ಬಳಿಕ ಈ ವಿಚಾರದ ಕುರಿತು ಅವರ ಬಳಿ ಮಾತನಾಡೋಣ ಎಂದು ಜೈಶಂಕರ್ ಹೇಳಿದ್ದಾರೆ.

ಕೆಲವು ದೇವಾಲಯಗಳ ಮೇಲೆ ದಾಳಿಗಳು ನಡೆದಿರುವುದರಿಂದ ಸರ್ಕಾರವು ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿದರು. ಸರ್ಕಾರ ಕಾದು ನೋಡುವ ಕ್ರಮದಲ್ಲಿದೆ, ಆದರೆ ಬಾಂಗ್ಲಾದೇಶದ ಸೇನೆಯೊಂದಿಗೆ ಸಂಪರ್ಕದಲ್ಲಿದೆ. ಶೇಖ್ ಹಸೀನಾ ಭಾರತಕ್ಕೆ ಬಂದಿರುವ ವಿಚಾರವನ್ನು ವಿದೇಶಾಂಗ ವ್ಯಹಾರಗಳ ಸಚಿವಾಲಯ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಬಾಂಗ್ಲಾದೇಶದಲ್ಲಿರುವ ರಾಯಭಾರಿ ಅಧಿಕಾರಿಗಳು ಮತ್ತು ಭಾರತೀಯ ಪ್ರಜೆಗಳ ಸುರಕ್ಷತೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಸಚಿವರು ಹೇಳಿದರು. ಆದರೆ, ಪರಿಸ್ಥಿತಿಯು ಸ್ಥಳಾಂತರಿಸುವಷ್ಟು ಕೆಟ್ಟದ್ದಲ್ಲ ಆದರೆ ಎಚ್ಚರಿಕೆಯನ್ನು ತೆಗೆದುಕೊಳ್ಳುವಷ್ಟು ಆತಂಕಕಾರಿಯಾಗಿದೆ ಎಂದು ಅವರು ಹೇಳಿದರು. ಬಾಂಗ್ಲಾದೇಶದಲ್ಲಿ ಕನಿಷ್ಠ 20 ಸಾವಿರ ಮಂದಿ ಭಾರತೀಯರಿದ್ದಾರೆ. ಅವರಲ್ಲಿ 8 ಸಾವಿರ ಮಂದಿ ಹಿಂದಿರುಗಿದ್ದಾರೆ.

ಮತ್ತಷ್ಟು ಓದಿ: Sheikh Hasina: ಹಿಂಡನ್ ವಾಯುನೆಲೆಯಲ್ಲಿ ಶೇಖ್ ಹಸೀನಾ ಭೇಟಿಯಾದ ಅಜಿತ್ ದೋವಲ್; ಮೇಘಾಲಯದ ಗಡಿಯಲ್ಲಿ ರಾತ್ರಿ ಕರ್ಫ್ಯೂ ಜಾರಿ

ಬಾಂಗ್ಲಾದೇಶದಲ್ಲಿ ಪ್ರತಿಭಟನೆ ನಡೆಯಲು ಕಾರಣವೇನು? ಉದ್ಯೋಗ ಕೋಟಾ ಮರುಜಾರಿ ಕುರಿತು ಪ್ರತಿಭಟನೆ ಶುರುವಾಗಿತ್ತು. ಉದ್ಯೋಗ ಕೋಟಾ ಮರುಜಾರಿ ಆದೇಶವನ್ನು ಉನ್ನತ ನ್ಯಾಯಾಲಯ ಈಗಾಗಲೇ ಹಿಂಪಡೆದಿದೆ. ಉದ್ಯೋಗ ಕೋಟಾ ಮರುಜಾರಿ ಆದೇಶವನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿತ್ತು.

ಪೊಲೀಸರು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ನಡುವೆ ರಾಷ್ಟ್ರವ್ಯಾಪಿ ನಡೆದ ಘರ್ಷಣೆಯಲ್ಲಿ 151ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಲಭೆಯನ್ನು ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗದಿದ್ದಾಗ ಸೈನಿಕರು ಬಾಂಗ್ಲಾದೇಶದಾದ್ಯಂತ ನಗರಗಳಲ್ಲಿ ಗಸ್ತು ತಿರುಗಿದರು. ರಾಷ್ಟ್ರವ್ಯಾಪಿ ಇಂಟರ್ನೆಟ್ ಬಂದ್​ ಮಾಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ