AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha poll: ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೇರಿ 11 ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ

ರಾಜ್ಯಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಇಂದು (ಜುಲೈ 17) ಕೊನೆಯ ದಿನಾಂಕವಾಗಿದೆ. ನಾಮಪತ್ರ ಸಲ್ಲಿಸಿದ್ದ ಸ್ಥಾನಗಳಿಗೆ ಎದುರಾಳಿ ಅಭ್ಯರ್ಥಿಗಳೇ ಇಲ್ಲದ ಕಾರಣ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Rajya Sabha poll: ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೇರಿ 11 ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ
ಎಸ್ ಜೈಶಂಕರ್
Ganapathi Sharma
|

Updated on: Jul 17, 2023 | 10:51 PM

Share

ನವದೆಹಲಿ, ಜುಲೈ 17: ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಸೇರಿದಂತೆ ಗುಜರಾತ್‌ನ ಮೂವರು ಹಾಗೂ ಒಟ್ಟು 11 ಮಂದಿ ಅಭ್ಯರ್ಥಿಗಳು ರಾಜ್ಯಸಭೆಗೆ (Rajya Sabha) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುಜರಾತ್‌ನಿಂದ ಬಿಜೆಪಿ ಅಭ್ಯರ್ಥಿಗಳಾದ ಎಸ್ ಜೈಶಂಕರ್, ಬಾಬುಭಾಯ್ ದೇಸಾಯಿ ಮತ್ತು ಕೇಸರಿದೇವ್ ಸಿಂಗ್ ಝಾಲಾ ಆಯ್ಕೆಯಾಗಿದ್ದಾರೆ. ಇದರೊಂದಿಗೆ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಎರಡನೇ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದಂತಾಗಿದೆ.

ಗುಜರಾತ್‌ನ ಮೂರು ಸ್ಥಾನಗಳು, ಗೋವಾದ ಒಂದು ಸ್ಥಾನ ಮತ್ತು ಪಶ್ಚಿಮ ಬಂಗಾಳದ ಆರು ಸ್ಥಾನಗಳಿಗೆ ಜುಲೈ 24 ರಂದು ಚುನಾವಣೆ ನಡೆಯಬೇಕಿತ್ತು. ಕೇಂದ್ರ ಚುನಾವಣಾ ಆಯೋಗ ಹೊರಡಿಸಿದ ಅಧಿಸೂಚನೆಯ ಪ್ರಕಾರ, ರಾಜ್ಯಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಇಂದು (ಜುಲೈ 17) ಕೊನೆಯ ದಿನಾಂಕವಾಗಿದೆ. ನಾಮಪತ್ರ ಸಲ್ಲಿಸಿದ್ದ ಸ್ಥಾನಗಳಿಗೆ ಎದುರಾಳಿ ಅಭ್ಯರ್ಥಿಗಳೇ ಇಲ್ಲದ ಕಾರಣ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಫಲಿತಾಂಶವನ್ನು ಇಂದೇ ಘೋಷಿಸಲಾಗಿದೆ.

ಟಿಎಂಸಿಯ ಆರು ಮಂದಿ ಅಭ್ಯರ್ಥಿಗಳಾದ ಸುಖೇಂದು ಶೇಖರ್ ರಾಯ್, ಡೋಲಾ ಸೋನಾ, ಸಾಕೇತ್ ಗೋಖಲೆ, ಸಮೀರುಲ್ ಇಸ್ಲಾಂ, ಪ್ರಕಾಶ್ ಬಾರಿಕ್, ಡೆರೆಕ್ ಒ’ಬ್ರಯಾನ್​​ ಅವಿರೋಧ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: Kishan Reddy: ‘ಧರಣಿ’ ಪೋರ್ಟಲ್​​ನಿಂದ ಹೊಸ ಸಮಸ್ಯೆ; ಬಿಆರ್​​​ಎಸ್ ಸರ್ಕಾರದ ವಿರುದ್ಧ ಕಿಶನ್ ರೆಡ್ಡಿ ಕಿಡಿ

ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಗೋವಾದ ಬಿಜೆಪಿ ಅಭ್ಯರ್ಥಿಯೂ ಸೇರಿದ್ದಾರೆ.

ಐವರು ಸದಸ್ಯರ ಗೆಲುವಿನೊಂದಿಗೆ ಸಂಸತ್ತಿನ ಮೇಲ್ಮನೆಯಲ್ಲಿ ಬಿಜೆಪಿ ಬಹುಮತದ ಅಂಕವನ್ನು ತಲುಪುವ ನಿರೀಕ್ಷೆಯಲ್ಲಿದೆ. ಪ್ರಸ್ತುತ, ಎನ್‌ಡಿಎ ಮೈತ್ರಿಕೂಟವು ರಾಜ್ಯಸಭೆಯಲ್ಲಿ ಒಟ್ಟು 105 ಸದಸ್ಯರನ್ನು ಹೊಂದಿದೆ. ಇಬ್ಬರು ಸ್ವತಂತ್ರ ಸದಸ್ಯರು ಮತ್ತು ಐದು ನಾಮನಿರ್ದೇಶಿತ ಸಂಸದರ ಬೆಂಬಲವನ್ನು ಕೋರುತ್ತಿದ್ದು, ನಂತರ ಬಿಜೆಪಿ ಸದಸ್ಯರ ಸಂಖ್ಯೆ 112ಕ್ಕೆ ಏರಿಕೆಯಾಗಲಿದೆ. ಆದರೆ, ಬಹುಮತ ಸಾಧಿಸಲು ಇನ್ನೂ ಎಂಟು ಸದಸ್ಯರ ಅಗತ್ಯವಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ