Sabarimala Prasadam: ಅಯ್ಯಪ್ಪ ಪ್ರಸಾದಕ್ಕೆ ಬಳಸುವ ಏಲಕ್ಕಿಯಲ್ಲಿ ಕೀಟನಾಶಕದ ಅಂಶ; ಅರವಣ ಪ್ರಸಾದಕ್ಕೆ ಹೈಕೋರ್ಟ್ ನಿಷೇಧ

Aravana Prasadam: ಶಬರಿಮಲೆ ಪ್ರಸಾದದ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ಪ್ರಸಾದ ಸೇವಿಸುವ ಭಕ್ತರ ಆರೋಗ್ಯಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂಬ ಟಿಡಿಬಿ ಪರ ವಕೀಲರ ವಾದವನ್ನು ನ್ಯಾಯಾಲಯ ಒಪ್ಪಲಿಲ್ಲ.

Sabarimala Prasadam: ಅಯ್ಯಪ್ಪ ಪ್ರಸಾದಕ್ಕೆ ಬಳಸುವ ಏಲಕ್ಕಿಯಲ್ಲಿ ಕೀಟನಾಶಕದ ಅಂಶ; ಅರವಣ ಪ್ರಸಾದಕ್ಕೆ ಹೈಕೋರ್ಟ್ ನಿಷೇಧ
ಶಬರಿಮಲೆ ಆರವಣ ಪ್ರಸಾದಮ್ (ಎಡಚಿತ್ರ) ಮತ್ತು ಕೇರಳ ಹೈಕೋರ್ಟ್ (ಬಲಚಿತ್ರ)Image Credit source: Tv9Kannada
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 12, 2023 | 12:22 PM

ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲವನ್ನು ನಿರ್ವಹಿಸುವ ಟ್ರಾವಾಂಕೋರ್ ದೇವಸ್ವಂ ಮಂಡಳಿಗೆ (Travancore Devaswom Board – TDB) ‘ಅರವಣ ಪ್ರಸಾದಮ್’ ವಿತರಣೆಯನ್ನು ತಕ್ಷಣ ನಿಲ್ಲಿಸುವಂತೆ ಕೇರಳ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಭಾರತೀಯ ಆಹಾರ ಸುರಕ್ಷೆ ಮತ್ತು ಮಾನಕಗಳ ಪ್ರಾಧಿಕಾರವು (Food Safety and Standards Authority of India – FSSAI) ತನ್ನ ಪ್ರಯೋಗಾಲಯದಲ್ಲಿ ಅಯ್ಯಪ್ಪಸ್ವಾಮಿ ಪ್ರಸಾದಕ್ಕೆ ಬಳಕೆಯಾಗುವ ಏಲಕ್ಕಿಯನ್ನು ತಪಾಸಣೆಗೆ ಒಳಪಡಿಸಿದಾಗ ಕೀಟನಾಶಕದ ಉಳಿಕೆ ಪ್ರಮಾಣವು ಅಪಾಯಕಾರಿ ಮಟ್ಟದಲ್ಲಿದ್ದ ಸಂಗತಿ ಬೆಳಕಿಗೆ ಬಂದಿತ್ತು. ‘ಮನುಷ್ಯರ ಬಳಕೆಗೆ ಇದು ಸುರಕ್ಷಿತ ಅಲ್ಲ’ ಎಂದು ಆಹಾರ ವಿಜ್ಞಾನಿಗಳು ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್​ ಪ್ರಸಾದ ವಿತರಣೆ ನಿಲ್ಲಿಸುವಂತೆ ಆದೇಶ ಹೊರಡಿಸಿತು.

ನ್ಯಾಯಮೂರ್ತಿಗಳಾದ ಅನಿಲ್ ಕೆ.ನರೇಂದ್ರನ್ ಮತ್ತು ಪಿ.ಜಿ.ಅಜಿತ್​ಕುಮಾರ್ ಅವರಿದ್ದ ಕೇರಳ ಹೈಕೋರ್ಟ್​ನ ವಿಭಾಗೀಯ ನ್ಯಾಯಪೀಠವು ಆದೇಶದ ಪ್ರತಿಗಾಗಿ ಕಾಯುವ ಅಗತ್ಯವಿಲ್ಲ. ತಕ್ಷಣದಿಂದ ಜಾರಿಗೆ ಬರುವಂತೆ ಪ್ರಸಾದ ವಿತರಣೆ ನಿಲ್ಲಿಸಬೇಕು ಎಂದು ಸೂಚಿಸಿತು. ನ್ಯಾಯಾಲಯದಲ್ಲಿ ಉಪಸ್ಥಿತರಿದ್ದ ಟಿಡಿಬಿ ಪರ ವಕೀಲರು ಈ ಸೂಚನೆಯನ್ನು ಆಡಳಿತ ಮಂಡಳಿಯ ಗಮನಕ್ಕೆ ದೂರವಾಣಿಯ ಮೂಲಕವೇ ತರಬೇಕು. ಆದೇಶವು ಜಾರಿಯಾಗಬೇಕು ಎಂದು ಸೂಚಿಸಿತು.

ಇಡುಕ್ಕಿ ಮೂಲದ ‘ಅಯ್ಯಪ್ಪ ಸ್ಪೈಸಸ್’ ಸಂಸ್ಥೆಯು ಈ ಸಂಬಂಧ ವಕೀಲ ವಿ.ಸೇತುನಾಥ್ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೇ ಅರ್ಜಿದಾರರು ಕಳೆದ ವರ್ಷದ ‘ಮಂಡಳ-ಮಕರವಿಳಕ್ಕು’ ಹಬ್ಬದ ಸಂದರ್ಭದಲ್ಲಿ ದೇವಸ್ಥಾನಕ್ಕೆ ಏಲಕ್ಕಿ ಸರಬರಾಜು ಮಾಡಿತ್ತು. ಈ ವರ್ಷ ಸ್ಥಳೀಯ ವ್ಯಾಪಾರಿಗಳಿಂದ ಏಲಕ್ಕಿ ಖರೀದಿಸಲು ಮುಂದಾಗಿದ್ದ ಶಬರಿಮಲೆ ದೇಗುಲ ಮಂಡಳಿ, ಟೆಂಡರ್​ ಪ್ರಕ್ರಿಯೆಯನ್ನು ಸರಿಯಾಗಿ ನಿರ್ವಹಿಸಿರಲಿಲ್ಲ. ದಿನಪತ್ರಿಕೆಗಳಲ್ಲಿ ಜಾಹೀರಾತನ್ನೂ ನೀಡಿರಲಿಲ್ಲ ಎಂದು ಅರ್ಜಿದಾರರು ಆರೋಪ ಮಾಡಿದ್ದರು. ಕೊಲ್ಲಂ ಸಮೀಪದ ಕರುನಗಪ್ಪಲ್ಲಿ ಗ್ರಾಮದ ಸುನಿಲ್ ಎಂಬುವವರು ಈ ಹಬ್ಬಸಾಲಿಗಾಗಿ 15 ಕ್ವಿಂಟಲ್ ಏಲಕ್ಕಿ ಸರಬರಾಜು ಮಾಡುವ ಆರ್ಡರ್ ನೀಡಲಾಗಿತ್ತು.

ಏಲಕ್ಕಿಯಲ್ಲಿ 14 ಕೀಟನಾಶಕಗಳ ಉಳಿಕೆ ಪತ್ತೆ

ಅಪಾಯಕಾರಿ ಮಟ್ಟದಲ್ಲಿ ಕೀಟನಾಶಕದ ಉಳಿಕೆ ಇರುವ ಏಲಕ್ಕಿ ಬಳಸಿ ಸಿದ್ಧಪಡಿಸಿದ ಪ್ರಸಾದವನ್ನು ಭಕ್ತರಿಗೆ ನೀಡುವಂತಿಲ್ಲ. ಈ ಆದೇಶ ಪಾಲನೆಯ ಖಾತ್ರಿಯ ಹೊಣೆಯು ಆಹಾರ ಸುರಕ್ಷಾ ಆಯುಕ್ತರದು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಪ್ರಯೋಗಾಲಯದ ವರದಿಯ ಪ್ರಕಾರ, ಈ ಏಲಕ್ಕಿಯಲ್ಲಿ 14 ಕೀಟನಾಶಕಗಳ ಉಳಿಕೆ ಪ್ರಮಾಣವು ಗರಿಷ್ಠ ಮಿತಿಯನ್ನು ಮೀರಿದೆ (Maximum Residue Limit – MRL). ಡಿತಿಯೊಕಾರ್​ಬಮೇಟ್ಸ್, ಸೈಪರ್​ಮೆತರಿನ್, ಇಮಿಡಾಕ್ಲೊಪ್ರಿಡ್ ಪ್ರಮಾಣ ಗಣನೀಯ ಮಟ್ಟದಲ್ಲಿದೆ.

ನ್ಯಾಯಾಲಯ ಮಧ್ಯಪ್ರವೇಶಕ್ಕೆ ಟಿಡಿಬಿ ವಿರೋಧ

ಶಬರಿಮಲೆ ದೇಗುಲ ಪ್ರಸಾದದ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ಪ್ರಸಾದವನ್ನು ವೈಜ್ಞಾನಿಕವಾಗಿ ಮತ್ತು ಆರೋಗ್ಯಕರ ರೀತಿಯಲ್ಲಿಯೇ ಸಿದ್ಧಪಡಿಸಲಾಗುತ್ತಿದೆ. ಸೇವಿಸುವ ಭಕ್ತರ ಆರೋಗ್ಯಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಟಿಡಿಬಿ ಪರ ವಕೀಲರು ವಾದ ಮಂಡಿಸಿದರು. ‘ಆರವಣ ಪ್ರಸಾದಮ್ ಸಿದ್ಧಪಡಿಸುವಾಗ ಅದನ್ನು 200 ಡಿಗ್ರಿ ಸೆಲ್ಷಿಯಸ್​ನಷ್ಟು ಉಷ್ಣಾಂಶದಲ್ಲಿ ಬಿಸಿ ಮಾಡಲಾಗುತ್ತದೆ. ಅಕ್ಕಿ, ಬೆಲ್ಲ ಸೇರಿದಂತೆ ಇತರ ಹಲವು ವಸ್ತುಗಳು ಬಳಕೆಯಾಗುತ್ತವೆ. 350 ಕೆಜಿ ಪ್ರಸಾದ ಸಿದ್ಧಪಡಿಸಲು ಕೇವಲ 720 ಗ್ರಾಮ್​ನಷ್ಟು ಏಲಕ್ಕಿ ಬಳಕೆಯಾಗುತ್ತದೆ. ಇದು ಅತಿಕಡಿಮೆ ಪ್ರಮಾಣವಾಗಿದ್ದು, ಮನುಷ್ಯರು ಪ್ರಸಾದ ಸೇವಿಸಿದರೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದರು.

ಜೀವಿಸುವ ಹಕ್ಕಿನ ಪ್ರಶ್ನೆ: ಕೇರಳ ಹೈಕೋರ್ಟ್

ಪ್ರಸಾದದ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅಧಿಕಾರ ನ್ಯಾಯಾಲಯಕ್ಕೆ ಇಲ್ಲ ಎಂಬ ಟಿಡಿಬಿ ವಾದವನ್ನು ಹೈಕೋರ್ಟ್ ಸ್ಪಷ್ಟವಾಗಿ ತಳ್ಳಿಹಾಕಿತು. ‘ಪ್ರಯೋಗಾಲಯದ ಪರೀಕ್ಷೆಗಳಲ್ಲಿ ಮನುಷ್ಯರ ಬಳಕೆಗೆ ಅಪಾಯಕಾರಿ ಎಂದು ಕಂಡುಬಂದ ಆಹಾರ ಪದಾರ್ಥವನ್ನು ಯಾರಿಗೂ ನೀಡುವಂತಿಲ್ಲ. ಇದು ಸಂವಿಧಾನವು 21ನೇ ಪರಿಚ್ಛೇದದ ಅಡಿಯಲ್ಲಿ ನೀಡಿರುವ ಜೀವಿಸುವ ಹಕ್ಕಿನ ಉಲ್ಲಂಘನೆಯಾಗುತ್ತದೆ. ಕೀಟನಾಶಕದ ಉಳಿಕೆ ಇರುವ ಏಲಕ್ಕಿಯಿಂದ ಸಿದ್ಧಪಡಿಸಿದ ‘ಆರವಣ ಪ್ರಸಾದಮ್’ ವಿತರಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಕೋರ್ಟ್ ತುರ್ತು ಆದೇಶ ಹೊರಡಿಸಿತು.

ಇದನ್ನೂ ಓದಿ: Sabarimala Ayyappa Swamy: ಅರಣ್ಯಪಾಲಕ, ಮಣಿಕಂಠ, ಹರಿಹರ ಸುತ ಅಯ್ಯಪ್ಪ ಸ್ವಾಮಿ ಬಗ್ಗೆ ನಿಮಗೆಷ್ಟು ಗೊತ್ತು?

ಮತ್ತಷ್ಟು ರಾಷ್ಟ್ರೀಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Thu, 12 January 23

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ