AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Greenfield Airport: ಶಬರಿಮಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಹಸಿರು ನಿಶಾನೆ; ಗ್ರೇಟ್ ನ್ಯೂಸ್ ಎಂದ ಮೋದಿ

ಕೇರಳದ ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ದೇವಸ್ಥಾನಕ್ಕೆ ಸಮೀಪವಿರುವ ಕೊಟ್ಟಾಯಂ ಜಿಲ್ಲೆಯಲ್ಲಿ ಹೊಸ 'ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ' ಯೋಜನೆಗೆ ನಾಗರಿಕ ವಿಮಾನಯಾನ ಸಚಿವಾಲಯ (MoCA) ಸೋಮವಾರ ಅನುಮತಿ ನೀಡಿದೆ.

Greenfield Airport: ಶಬರಿಮಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಹಸಿರು ನಿಶಾನೆ; ಗ್ರೇಟ್ ನ್ಯೂಸ್ ಎಂದ ಮೋದಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 18, 2023 | 4:09 PM

Share

ಪತ್ತನಂತಿಟ್ಟ: ಅಯ್ಯಪ್ಪ ಭಕ್ತರಿಗೆ ಮೋದಿ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ದೇವಸ್ಥಾನಕ್ಕೆ (Sabarimala temple) ಸಮೀಪವಿರುವ ಕೊಟ್ಟಾಯಂ ಜಿಲ್ಲೆಯಲ್ಲಿ ಹೊಸ ‘ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ‘ (Greenfield Airport) ಯೋಜನೆಗೆ ನಾಗರಿಕ ವಿಮಾನಯಾನ ಸಚಿವಾಲಯ (MoCA) ಸೋಮವಾರ ಅನುಮತಿ ನೀಡಿದೆ. ಈ ಯೋಜನೆಯಿಂದ ಶಬರಿಮಲೆಯ ಅಯ್ಯಪ್ಪನ ದೇಗುಲಕ್ಕೆ ಭೇಟಿ ನೀಡಲು ಕೇರಳಕ್ಕೆ ಬರುವ ಸಾವಿರಾರು ಭಕ್ತರಿಗೆ ಪ್ರಯೋಜನಕಾರಿಯಾಗಲಿದೆ ಎಂದು ಹೇಳಲಾಗಿದೆ. ಸಚಿವಾಲಯ ಮತ್ತು ಯೋಜನಾ ಪ್ರಾಧಿಕಾರ, ಕೇರಳ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ (KSIDC) ನಡುವಿನ ಬಹು ಸುತ್ತಿನ ಚರ್ಚೆಗಳ ನಂತರ ಯೋಜನೆಗೆ ಅನುಮತಿ ದೊರೆತಿದೆ. ಈ ಯೋಜನೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದ್ದು, ಈ ವಿಮಾನ ನಿಲ್ದಾಣವು ಬೇರೆ ಬೇರೆ ರಾಜ್ಯಗಳಿಗೆ ಹೆಚ್ಚಿನ ಸಂಪರ್ಕವನ್ನು ಸಾಧಿಸುತ್ತದೆ ಮತ್ತು ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಸಚಿವಾಲಯ ಹೇಳಿದೆ.

ಕೊಟ್ಟಾಯಂ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಯೋಜನೆಗೆ 2,250 ಎಕರೆ ಭೂಮಿಯನ್ನು ಈಗಾಗಲೇ ನಿಗದಿ ಮಾಡಿದ್ದು, ಈ ವಿಮಾನ ನಿಲ್ದಾಣಕ್ಕೆ ಅಂದಾಜು 4,000 ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಲಾಗಿದೆ. ಶಬರಿಮಲೆಯಲ್ಲಿ ಹೊಸ ವಿಮಾನ ನಿಲ್ದಾಣದ ಕುರಿತು ಈಗಾಗಲೇ ನಾಗರಿಕ ವಿಮಾನಯಾನ ಸಚಿವಾಲಯದ ಪ್ರಕಟಣೆಯನ್ನು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು, ಈ ಟ್ವೀಟ್​​ನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಏ18)ರೀ ಟ್ವೀಟ್​​ ಮಾಡಿಕೊಂಡಿದ್ದಾರೆ. ಇದು ಪ್ರವಾಸೋದ್ಯಮಕ್ಕೆ, ವಿಶೇಷವಾಗಿ ಶರಿಮಲೆ ಭಕ್ತರಿಗೆ ಹಾಗೂ ದೇವರ ನಾಡಿನ ಬೇರೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರಿಗೆ “ಉತ್ತಮ ಸುದ್ದಿ” ಎಂದು ಮೋದಿ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Sabarimala Ayyappa Swamy Temple: ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆ ನಿಂತ ಅಯ್ಯಪ್ಪಸ್ವಾಮಿ ಜನ್ಮ ರಹಸ್ಯ

ಈ ಹಿಂದೆ ಮೋದಿ ಅವರು ಕಾಶಿ ವಿಶ್ವನಾಥ ದೇಗುಲ ಮತ್ತು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿರುವ ಪುಣ್ಯ ಕ್ಷೇತ್ರಗಳ ಬಗ್ಗೆ ಮತ್ತು ಈ 10 ಕಾರಣಕ್ಕೆ ಕಾಶಿಗೆ ಭೇಟಿ ನೀಡಬೇಕು ಎಂದು ಟ್ವೀಟರ್​​ನಲ್ಲಿ ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದರು. ಕಳೆದ ವಾರ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶಬರಿಮಲೆಯಲ್ಲಿ ಹೊಸ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳಿಗೆ ಅನುಮತಿಗಳನ್ನು ಪಡೆದುಕೊಳ್ಳಲಾಗಿದೆ. ಈಗಾಗಲೇ ಅಡಿಪಾಯವನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಶರಿಮಲೆ ಅಯ್ಯಪ್ಪನ ದೇಗುಲ ಇರುವ ಪತ್ತನಂತಿಟ್ಟ ಜಿಲ್ಲೆಯಲ್ಲಿ ಮಹತ್ವದ ರಸ್ತೆ ಯೋಜನೆಯ ಉದ್ಘಾಟನೆ ಸಂದರ್ಭದಲ್ಲಿ ಅವರು ಈ ಘೋಷಣೆ ಮಾಡಿದರು. ಆನ್‌ಲೈನ್ ಕಾರ್ಯಕ್ರಮವೊಂದರಲ್ಲಿ ಅವರು, ಶಬರಿಮಲೆಗೆ ಹೊಸ ವಿಮಾನ ನಿಲ್ದಾಣವನ್ನು ನಿರ್ಮಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಅದಕ್ಕೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಶಬರಿಮಲೆ ದೇಗುಲಕ್ಕೆ ದೇಶದ ವಿವಿಧ ಭಾಗಗಳಿಂದ ಮತ್ತು ವಿದೇಶಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. 2022ರಲ್ಲಿ ಸುಮಾರು 30 ಲಕ್ಷ ಯಾತ್ರಿಕರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ವರದಿ ಮಾಡಿದೆ.

Published On - 3:59 pm, Tue, 18 April 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್