AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ಓಪನ್​​: 41 ದಿನಗಳ ಕಾಲ ಮಂಡಲ ಪೂಜೆ

Sabarimala Ayyappa Swamy Temple: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ದೇವಾಲಯದ ಬಾಗಿಲನ್ನು ತೆರೆಯಾಗಿತ್ತು. ಇಂದಿನಿಂದ (ನ.17) 41 ದಿನಗಳ ತೀರ್ಥಯಾತ್ರೆ ಆರಂಭವಾಗಲಿದೆ. ಈ ಸಮಯದಲ್ಲಿ ಬೇರೆ ಬೇರೆ ರಾಜ್ಯಗಳ ಲಕ್ಷಾಂತರ ಅಯ್ಯಪ್ಪ ಭಕ್ತರು ಶಬರಿಮಲೆಗೆ ಯಾತ್ರೆ ಕೈಗೊಳ್ಳಲಿದ್ದಾರೆ.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ಓಪನ್​​: 41 ದಿನಗಳ ಕಾಲ ಮಂಡಲ ಪೂಜೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 17, 2023 | 9:49 AM

Share

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ (Sabarimala Ayyappa Swamy Temple) ಬಾಗಿಲು ತೆರೆಯಲಾಗಿದೆ. ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ದೇವಾಲಯದ ಬಾಗಿಲನ್ನು ತೆರೆಯಾಗಿತ್ತು. ಇಂದಿನಿಂದ (ನ.17) 41 ದಿನಗಳ ತೀರ್ಥಯಾತ್ರೆ ಆರಂಭವಾಗಲಿದೆ. ಈ ಸಮಯದಲ್ಲಿ ಬೇರೆ ಬೇರೆ ರಾಜ್ಯಗಳ ಲಕ್ಷಾಂತರ ಅಯ್ಯಪ್ಪ ಭಕ್ತರು ಶಬರಿಮಲೆಗೆ ಯಾತ್ರೆ ಕೈಗೊಳ್ಳಲಿದ್ದಾರೆ. ಇನ್ನು ಗುರುವಾರ ದೇವಾಲಯದ ‘ತಂತ್ರಿ’ (ಮುಖ್ಯ ಅರ್ಚಕ) ಮಹೇಶ್ ಮೋಹನರು ಅವರ ನೇತೃತ್ವದಲ್ಲಿ ಅಯ್ಯಪ್ಪ ಸನ್ನಿಧಿಯ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗಿದೆ. ಇದರ ಜತೆಗೆ ಮತ್ತೊಬ್ಬ ಮುಖ್ಯ ಅರ್ಚಕ ಕೆ ಜಯರಾಮನ್ ನಂಬೂತಿರಿ ಅವರ ಸಮ್ಮುಖದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ.

ಈ ಸಮಯದಲ್ಲಿ ಶಬರಿ ಮಲೆಗೆ ಬಂದಿದ್ದ ಅಯ್ಯಪ್ಪ ಭಕ್ತರು ಪಂಪಾ ನದಿಯಲ್ಲಿ ಸಾನ್ನ ಮಾಡಿ, ಹದಿನೆಂಟು ಮೆಟ್ಟಿಲು ಹತ್ತಿ ಅಯ್ಯಪ್ಪನ ನೋಡಲು ಕಾತುರದಿಂದ ಕಾಯುತ್ತಿದ್ದರು. ಇನ್ನು ಮಲಯಾಳಂ ಕ್ಯಾಲೆಂಡರ್​ ಪ್ರಕಾರ 41 ದಿನಗಳ ಕಾಲ ದೇಗುಲದಲ್ಲಿ ಮಂಡಲ ಪೂಜೆ ಹಾಗೂ ಮಕರವಿಳಕ್ಕು ಯಾತ್ರೆ ಆರಂಭವಾಗಲಿದೆ. ಜನವರಿಯಲ್ಲಿ ಮಕರ ಸಂಕ್ರಾತಿಯಂದು ಮಕರವಿಳಕ್ಕು ನೆರವೇರಲಿದ್ದು, ಈ ಸಮಯದಲ್ಲಿ ಲಕ್ಷಾಂತರ ಭಕ್ತರು ಅಯ್ಯಪ್ಪನ ದರ್ಶನ ಪಡೆಯಲಿದ್ದಾರೆ.

ಇದನ್ನೂ ಓದಿ:ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆ ನಿಂತ ಅಯ್ಯಪ್ಪಸ್ವಾಮಿ ಜನ್ಮ ರಹಸ್ಯ

ಈಗಾಗಲೇ ದೇವಾಲಯದಲ್ಲಿ ಎಲ್ಲ ಕಾರ್ಯಕ್ರಮಗಳು ಆರಂಭವಾಗಿದ್ದು, ಆಡಳಿತ ವ್ಯವಸ್ಥೆಯಲ್ಲೂ ಕೂಡ ಬದಲಾವಣೆಗಳು ಆಗಿದೆ. ಶಬರಿಮಲೆ ಮತ್ತು ಮಲಿಕಪ್ಪುರಂ ದೇವಸ್ಥಾನದ ನೂತನ ‘ಮೇಲ್ಶಾಂತಿ’ಗಳಾಗಿ ( ಪ್ರಧಾನ ಅರ್ಚಕ) ಪಿಎನ್ ಮಹೇಶ್ ಮತ್ತು ಪಿಜಿ ಮುರಳಿ ನೇಮಕ ಮಾಡಲಾಗಿದೆ. ಇದರ ಜತೆಗೆ ದೇವಾಲಯಕ್ಕೆ ಬರುವ ಭಕ್ತರಿಗೆ ರಕ್ಷಣೆ ಹಾಗೂ ಮೂಲಸೌಕರ್ಯಗಳನ್ನು ಕೂಡ ಹೆಚ್ಚಿಸಲಾಗಿದೆ. ಆಸ್ಪತ್ರೆ ಹಾಗೂ ಶೌಚಾಲಯ, ಪಾರ್ಕಿಂಗ್​​ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್