AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ

ಶಬರಿಮಲೆ ದೇಗುಲದ ದ್ವಾರಪಾಲಕರ ಪ್ರತಿಮೆಗಳ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ತೀವ್ರಗೊಂಡಿದೆ. ಬೆಂಗಳೂರು ಮೂಲದ ಉದ್ಯಮಿ, ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ್ನು ಬಂಧಿಸಲಾಗಿದೆ. 2019ರಲ್ಲಿ ಸುಮಾರು 4.54 ಕೆಜಿ ಚಿನ್ನದ ಲೇಪನ ಮಾಯವಾಗಿತ್ತು. ಈ ಕಳ್ಳತನದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ ಸದಸ್ಯರ ಪಾತ್ರದ ಬಗ್ಗೆಯೂ ಎಸ್‌ಐಟಿ ವಿಚಾರಣೆ ನಡೆಸಲಿದೆ.

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ: ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನ
ಶಬರಿಮಲೆ
ಅಕ್ಷಯ್​ ಪಲ್ಲಮಜಲು​​
|

Updated on: Oct 17, 2025 | 10:11 AM

Share

ತಿರುವನಂತಪುರಂ, ಅ.17: ಶಬರಿಮಲೆ ದೇವಸ್ಥಾನದ (Sabarimala Gold Plating Scam) ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ್ನು ಬಂಧಿಸಿದೆ. ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಅವರ ನಿವಾಸದಲ್ಲಿ ಬಂಧಿಸಿದ್ದಾರೆ. ಅಲ್ಲಿಂದ ತಿರುವನಂತಪುರದ ಅಪರಾಧ ಶಾಖೆಯ ಕಚೇರಿಗೆ ಕರೆದುಕೊಂಡು ಬಂದು ವಿಚಾರಣೆಯನ್ನು ನಡೆಸಿದ್ದಾರೆ.

ಉನ್ನಿಕೃಷ್ಣನ್ ಪೊಟ್ಟಿ ವೈದ್ಯಕೀಯ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ವಿಚಾರಣೆ ನಂತರ ಅವರನ್ನು ಇಂದು ಪತ್ತನಂತಿಟ್ಟದ ರನ್ನಿಯಲ್ಲಿರುವ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಈ ವೇಳೆ ಕೋರ್ಟ್​ ಮುಂದೆ ಎಸ್​​​ಐಟಿ ಅಧಿಕಾರಿಗಳು ವಿಚಾರಣೆ ನಡೆಸಲು ಕಸ್ಟಡಿಗೆ ನೀಡುವಂತೆ ಕೇಳುವ ಸಾಧ್ಯತೆ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಈ ಎಸ್​​ಐಟಿ ತಂಡದ ರಚನೆ ಮಾಡಲಾಗಿದೆ.

ದ್ವಾರಪಾಲಕರಿಗೆ ಚಿನ್ನದ ಲೇಪನ ಮಾಯ

1999 ರಲ್ಲಿ, ಟಿಡಿಬಿ ಪ್ರವೇಶದ್ವಾರದಲ್ಲಿ ದ್ವಾರಪಾಲಕರಿಗೆ ಚಿನ್ನದ ಲೇಪನವನ್ನು ಮಾಡಿಸಲಾಗಿತ್ತು. ಯುಬಿ ಗ್ರೂಪ್ ಅಧ್ಯಕ್ಷ ವಿಜಯ್ ಮಲ್ಯ 30 ಕೆಜಿ ಚಿನ್ನವನ್ನು ನೀಡಿದರು. ದ್ವಾರಪಾಲಕ ವಿಗ್ರಹಗಳನ್ನು ಮಾತ್ರ ಮುಚ್ಚಲು ಐದು ಕಿಲೋಗ್ರಾಂಗಳಷ್ಟು ಚಿನ್ನವನ್ನು ಬಳಸಲಾಯಿತು ಮತ್ತು ಉಳಿದದ್ದನ್ನು ದೇವಾಲಯದ ಇತರ ವೈಶಿಷ್ಟ್ಯಗಳನ್ನು ಲೇಪಿಸಲು ಬಳಸಲಾಯಿತು. ಇಪ್ಪತ್ತು ವರ್ಷಗಳ ನಂತರ, ದೇವಾಲಯದ ವಿಗ್ರಹಗಳು ಮತ್ತು ಬೆಲೆಬಾಳುವ ವಸ್ತುಗಳ ಚಿನ್ನದ ಲೇಪನವನ್ನು ತನ್ನ ಸ್ವಂತ ಖರ್ಚಿನಲ್ಲಿ ಮಾಡಲು ಟಿಡಿಬಿಯ ಅನುಮೋದನೆಯನ್ನು ಪಡೆದಿದ್ದರು. ಹಸ್ತಾಂತರ ದಾಖಲೆಯಲ್ಲಿ 1999ರಲ್ಲಿ ನೀಡಲಾದ ಚಿನ್ನದ ಹೊದಿಕೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ.ವಿಗ್ರಹಗಳು ಚಿನ್ನದ ಲೇಪನಕ್ಕಾಗಿ ಚೆನ್ನೈನ ಸ್ಮಾರ್ಟ್ ಕ್ರಿಯೇಷನ್ಸ್‌ಗೆ ಹೋಗಿದ್ದವು. ಚಿನ್ನದಿಂದ ಲೇಪಿತವಾದ ತಾಮ್ರದ ತಟ್ಟೆಗಳನ್ನು ದೇವಾಲಯಕ್ಕೆ ಮರಳಿ ತಂದಾಗ, ಬರೋಬ್ಬರಿ 4.54 ಕೆಜಿ ಲೇಪನ ಕಾಣೆಯಾಗಿತ್ತು.

ಇದನ್ನೂ ಓದಿ: ಶಬರಿಮಲೆಗೆ ವಿಜಯ್ ಮಲ್ಯ ನೀಡಿದ್ದ ಚಿನ್ನ ಕಳವು, ಎಸ್​ಐಟಿ ರಚನೆಗೆ ಹೈಕೋರ್ಟ್​ ಸೂಚನೆ

ಇದೀಗ 2019 ರಲ್ಲಿ ದ್ವಾರಪಾಲಕ ವಿಗ್ರಹಗಳಿಂದ ಚಿನ್ನದ ಹೊದಿಕೆಯ ತಾಮ್ರದ ತಟ್ಟೆಗಳು ಮತ್ತು ಶ್ರೀಕೋವಿಲ್ ಬಾಗಿಲಿನ ಚೌಕಟ್ಟುಗಳನ್ನು ಎಲೆಕ್ಟ್ರೋಪ್ಲೇಟಿಂಗ್‌ಗಾಗಿ ಪಾಟಿಗೆ ಹಸ್ತಾಂತರಿಸುವಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಸದಸ್ಯರು ಮತ್ತು ಅಧಿಕಾರಿಗಳ ಪಾತ್ರ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸಬೇಕಿದೆ. ಇನ್ನು ಇದಕ್ಕೂ ಮೊದಲು ಟಿಡಿಬಿ ವಿಜಿಲೆನ್ಸ್ ವಿಂಗ್ ಪಾಟಿ ಅವರನ್ನು ವಿಚಾರಣೆ ನಡೆಸಿ, ಅವರ ಹೇಳಿಕೆಯನ್ನು ಕೂಡ ಪಡೆಯಲಾಗಿದೆ. ಇನ್ನು ಈ ಪ್ರಕರಣದ ತನಿಖೆಯನ್ನು 6 ತಿಂಗಳ ಒಳಗೆ ಮುಗಿಸುವಂತೆ ಹೈಕೋಟರ್​​​ ಎಸ್​​ಐಟಿ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ