ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯ 25 ನೇ ದಿನದಂದು ಈ ಕುಸ್ತಿಪಟುಗಳು ಜಂತರ್ ಮಂತರ್‌ನಿಂದ ನವದೆಹಲಿಯ ಬಾಂಗ್ಲಾ ಸಾಹಿಬ್ ಗುರುದ್ವಾರದವರೆಗೆ ಮೆರವಣಿಗೆ ನಡೆಸಿದ್ದರು. 

ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್
ಸಚಿನ್ ಪೈಲಟ್
Follow us
ರಶ್ಮಿ ಕಲ್ಲಕಟ್ಟ
|

Updated on:May 19, 2023 | 5:35 PM

ದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ದೆಹಲಿಯ ಜಂತರ್ ಮಂತರ್​​ನಲ್ಲಿ (Jantar Mantar) ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ (Sachin Pilot)ಶುಕ್ರವಾರ ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಇತರರನ್ನು ಭೇಟಿಯಾದರು. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯ 25 ನೇ ದಿನದಂದು ಈ ಕುಸ್ತಿಪಟುಗಳು ಜಂತರ್ ಮಂತರ್‌ನಿಂದ ನವದೆಹಲಿಯ ಬಾಂಗ್ಲಾ ಸಾಹಿಬ್ ಗುರುದ್ವಾರದವರೆಗೆ ಮೆರವಣಿಗೆ ನಡೆಸಿದ್ದರು.

ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಡಬ್ಲ್ಯುಎಫ್‌ಐ ಮುಖ್ಯಸ್ಥರನ್ನು ಬಂಧಿಸುವಂತೆ ಒತ್ತಾಯಿಸಿ ಪುನಿಯಾ, ಸಾಕ್ಷಿ, ವಿನೇಶ್ ಮತ್ತು ಇತರರು ಅಥ್ಲೀಟ್‌ಗಳು ಮೆರವಣಿಗೆಯಲ್ಲಿ ಪಾಲ್ಗೊಂಡರು. ಇದಕ್ಕೂ ಮುನ್ನ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಏಪ್ರಿಲ್ 29 ರಂದು ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಭೇಟಿ ಮಾಡಿದ್ದರು.

ಪ್ರಧಾನಿ ಅವರಿಂದ ನನಗೆ ಯಾವುದೇ ನಿರೀಕ್ಷೆಗಳಿಲ್ಲ, ಏಕೆಂದರೆ ಅವರು ಈ ಕುಸ್ತಿಪಟುಗಳ ಬಗ್ಗೆ ಚಿಂತೆ ಮಾಡುತ್ತಿದ್ದರೆ, ಅವರು ಇನ್ನೂ ಏಕೆ ಅವರೊಂದಿಗೆ ಮಾತನಾಡಿಲ್ಲ ಅಥವಾ ಅವರನ್ನು ಭೇಟಿ ಮಾಡಿಲ್ಲ? ದೇಶವೇ ಕುಸ್ತಿಪಟುಗಳೊಂದಿಗೆ ನಿಂತಿದೆ. ಈ ಕುಸ್ತಿಪಟುಗಳು ಅಂಥಾ ಸಮಸ್ಯೆ ವಿರುದ್ದ ದನಿಯೆತ್ತಿದ್ದಕ್ಕಾಗಿ ಹೆಮ್ಮೆ ಇದೆ ಎಂದು ಪ್ರಿಯಾಂಕಾ ಹೇಳಿದ್ದರು.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಮತ್ತು ಲೈಂಗಿಕ ಕಿರುಕುಳದ ಆರೋಪದಲ್ಲಿ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಕುಸ್ತಿಪಟುಗಳು ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ಸೂಚನೆಯ ನಂತರ ಏಪ್ರಿಲ್ 28 ರಂದು ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: PM Modi Japan Visit: G7 ಶೃಂಗಸಭೆಯಲ್ಲಿ ಭಾಗವಹಿಸಲು ಹಿರೋಷಿಮಾ ತಲುಪಿದ ಪ್ರಧಾನಿ ಮೋದಿ

ಏಪ್ರಿಲ್ 24 ರಂದು, ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) 45 ದಿನಗಳಲ್ಲಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ (ಡಬ್ಲ್ಯುಎಫ್‌ಐ) ಕಾರ್ಯಕಾರಿ ಸಮಿತಿಯ ಚುನಾವಣೆಯನ್ನು ನಡೆಸಲು ತಾತ್ಕಾಲಿಕ ಸಮಿತಿಯನ್ನು ರಚಿಸಲಿದೆ ಎಂದು ಘೋಷಿಸಿತು. ಅದರ ರಚನೆ, ಕ್ರೀಡಾಪಟುಗಳ ಆಯ್ಕೆ ಮತ್ತು ಅಂತರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಆಟಗಾರರ ಭಾಗವಹಿಸುವಿಕೆಗೆ ನಮೂದುಗಳನ್ನು ಮಾಡುವುದು ಸೇರಿದಂತೆ ದೈನಂದಿನ ವ್ಯವಹಾರಗಳನ್ನು ಸಮಿತಿ ನಿರ್ವಹಿಸಲಿದೆ. ಹೊಸ ಕಾರ್ಯಕಾರಿ ಸಮಿತಿ ಅಧಿಕಾರ ವಹಿಸಿಕೊಳ್ಳುವವರೆಗೆ ಈ ಸಮಿತಿಯು ಮಧ್ಯಂತರ ಅವಧಿಗೆ ಕಾರ್ಯನಿರ್ವಹಿಸಲಿದೆ.

ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಅಪರಾಧದ ಆರೋಪದಲ್ಲಿ ಮಹಿಳಾ ಕುಸ್ತಿಪಟುಗಳು ಸಲ್ಲಿಸಿದ ಅರ್ಜಿಯ ಕುರಿತು ದೆಹಲಿ ಪೊಲೀಸರು ಶುಕ್ರವಾರ ಸ್ಥಿತಿ ವರದಿಯನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Fri, 19 May 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್