AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ: ಪೊಲೀಸ್ ಸೇವೆಯಿಂದ ಸಚಿನ್ ವಾಜೆ ವಜಾ

Sachin Vaze: ಫೆಬ್ರವರಿ 25ರಂದು ದಕ್ಷಿಣ ಮುಂಬೈನ ಕಾರ್ಮಿಚೇಲ್ ರಸ್ತೆಯಲ್ಲಿರುವ ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿರುವ ಕಾರೊಂದು ಪತ್ತೆಯಾಗಿತ್ತು. ಈ ಕಾರಿನೊಳಗೆ ಜಿಲೆಟಿನ್ ಕಡ್ಡಿಗಳನ್ನು ತುಂಬಿಸಿಡಲಾಗಿತ್ತು. ಅದೃಷ್ಟವಶಾತ್ ಜಿಲೆಟಿನ್ ಸ್ಫೋಟಗೊಳ್ಳದ ಕಾರಣ ಭಾರಿ ಅನಾಹುತ ತಪ್ಪಿತ್ತು.

ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ: ಪೊಲೀಸ್ ಸೇವೆಯಿಂದ ಸಚಿನ್ ವಾಜೆ ವಜಾ
ಸಚಿನ್ ವಾಜೆ
guruganesh bhat
|

Updated on:May 11, 2021 | 8:39 PM

Share

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಕಾರಿನಲ್ಲಿ ಸ್ಫೋಟಕ ಇಟ್ಟ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಸಚಿನ್ ವಾಜೆಯನ್ನು ಪೊಲೀಸ್ ಸೇವೆಯಿಂದ ವಜಾಗೊಳಿಸಿ ಮುಂಬೈ ಪೊಲೀಸ್ ಇಲಾಖೆ ಆದೇಶಿಸಿದೆ. ಮುಕೇಶ್ ಅಂಬಾನಿ ಮನೆ ಮುಂದಿ ಸ್ಫೋಟಕ ಇಟ್ಟಿದ್ದ ಕಾರಿನ ಮಾಲೀಕ ಎನ್ನಲಾದ ಮನ್​ಸುಖ್ ಹಿರೇನ್ ಸಾವಿನ ಹಿಂದೆ ಅನಿಲ್ ವಾಜೆ ಕೈವಾಡ ಇದೆ ಎಂದು ದೂರಲಾಗಿತ್ತು.

ಮುಕೇಶ್ ಅಂಬಾನಿ ಮನೆ ಮುಂದೆ ಕಾರಿನಲ್ಲಿ ಸ್ಫೋಟಕ ಇಟ್ಟಿದ್ದು ನಾನೇ ಎಂದು ಅಮಾನತಾಗಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ನಂತರ ಈ ಪ್ರಕರಣವನ್ನು ಪರಿಹರಿಸಿ ‘ಸೂಪರ್ ಕಾಪ್’ ಆಗಬೇಕೆಂದಿದ್ದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ಎದುರು ಸಚಿನ್ ವಾಜೆ ತಪ್ಪೊಪ್ಪಿಕೊಂಡಿದ್ದಾರೆ. ಅವರ ತಪ್ಪೊಪ್ಪಿಗೆ ಹೇಳಿಕೆಯನ್ನು ಪರಿಶೀಲಿಸಿದ್ದ ಎನ್​ಐಎ ಸ್ಫೋಟಕ ಇರಿಸಿದ ಮೂಲ ಉದ್ದೇಶಕ್ಕಾಗಿ ತನಿಖೆ ಚುರುಕುಗೊಳಿಸಿತ್ತು. ಕೆಲ ದಿನಗಳ ನಂತರ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು.

ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಪೋಟಕ ಹೊತ್ತಿದ್ದ ಕಾರು ಸಿಕ್ಕ ಪ್ರಕರಣದಲ್ಲಿ ಎನ್​ಐಎ ಬಂಧಿಸಿದ್ದ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆಯನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು. ಸಚಿನ್ ವಾಜೆ ಅವರನ್ನು ಅಮಾನತುಗೊಳಿಸಿ ಮುಂಬೈ ಸ್ಪೆಷಲ್ ಬ್ರ್ಯಾಂಚ್​ನ ಹೆಚ್ಚುವರಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದರು. ಸ್ಫೋಟಕ ಇಟ್ಟಿದ್ದ ತಂಡದಲ್ಲಿ ಸಚಿನ್ ವಾಜೆ ಕೂಡ ಭಾಗಿಯಾಗಿದ್ದು ಈ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು.

ಎನ್​ಕೌಂಟರ್ ಸ್ಪೆಷಲಿಸ್ಟ್ ಆಗಿದ್ದ ಸಚಿನ್ ವಾಜೆ, ಅಂಬಾನಿ ಮನೆ ಬಳಿ ಪತ್ತೆಯಾದ ವಾಹನದಲ್ಲಿ ಸ್ಫೋಟಕ ಇರಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಫೆಬ್ರವರಿ 25ರಂದು ದಕ್ಷಿಣ ಮುಂಬೈನ ಕಾರ್ಮಿಚೇಲ್ ರಸ್ತೆಯಲ್ಲಿರುವ ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿರುವ ಕಾರೊಂದು ಪತ್ತೆಯಾಗಿತ್ತು. ಈ ಕಾರಿನೊಳಗೆ ಜಿಲೆಟಿನ್ ಕಡ್ಡಿಗಳನ್ನು ತುಂಬಿಸಿಡಲಾಗಿತ್ತು. ಅದೃಷ್ಟವಶಾತ್ ಜಿಲೆಟಿನ್ ಸ್ಫೋಟಗೊಳ್ಳದ ಕಾರಣ ಭಾರಿ ಅನಾಹುತ ತಪ್ಪಿತ್ತು.

ಮುಕೇಶ್ ಅಂಬಾನಿ ಅವರ ನಿವಾಸದ ಬಳಿ ಜಿಲೆಟಿನ್ ಕಡ್ಡಿಗಳನ್ನು ಇರಿಸಿದ ಮಹೇಂದ್ರಾ ಸ್ಕಾರ್ಪಿಯೋ ಕಾರನ್ನು ನಿರ್ವಹಿಸುತ್ತಿದ್ದ ಮನ್​ಸುಖ್ ಹಿರೇನ್ ಅವರ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಹಿಂದೆ ಸಚಿನ್ ವಾಜೆ ಅವರ ಕೈವಾಡ ಇದೆ ಎಂದು ಮನ್​ಸುಖ್ ಪತ್ನಿ ಆರೋಪಿಸಿದ್ದರು. ಈ ಆರೋಪ ಕೇಳಿ ಬಂದ ಮೇಲೆ ಘಟನೆಯ ತನಿಖೆಯ ಹೊಣೆ ಹೊತ್ತಿದ್ದ ವಾಜೆ ಅವರನ್ನು ತನಿಖಾ ತಂಡದಿಂದ ಕೈಬಿಡಲಾಗಿತ್ತು. ಅವರು ಶಿವಸೇನೆಯ ನಾಯಕರಿಗೆ ಆಪ್ತರಾಗಿದ್ದರು.

ಇದನ್ನೂ ಓದಿ: ವ್ಯಕ್ತಿ ವ್ಯಕ್ತಿತ್ವ: ಹಿಂದೂ ಮುಸ್ಲಿಂ ಸಾಮರಸ್ಯ, ಸೈಬರ್ ಕ್ರೈಂ ಪತ್ತೆಹಚ್ಚುವಲ್ಲಿ ಏಷ್ಯಾಕ್ಕೇ ಪ್ರಥಮ; ಸಚಿನ್ ವಾಜೆಯ ವೈವಿಧ್ಯಮಯ ವ್ಯಕ್ತಿತ್ವ

ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು; ಉದ್ಧವ್ ಠಾಕ್ರೆಗೆ ಪತ್ರ ಬರೆದ ಪರಮ್​ವೀರ್ ಸಿಂಗ್

Published On - 8:38 pm, Tue, 11 May 21