‘ಸೂಪರ್ ಕಾಪ್‘ ಆಗಲು ನಾನೇ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಇಟ್ಟಿದ್ದೆ; ತಪ್ಪೊಪ್ಪಿಗೆ ಹೇಳಿಕೆ ನೀಡಿದ ಸಚಿನ್ ವಾಜೆ

ಈ ಪ್ರಕರಣವನ್ನು ಪರಿಹರಿಸಿ ‘ಸೂಪರ್ ಕಾಪ್’ ಆಗಬೇಕೆಂದಿದ್ದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ಎದುರು ಸಚಿನ್ ವಾಜೆ ತಪ್ಪೊಪ್ಪಿಕೊಂಡಿದ್ದಾರೆ.

‘ಸೂಪರ್ ಕಾಪ್‘ ಆಗಲು ನಾನೇ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಇಟ್ಟಿದ್ದೆ; ತಪ್ಪೊಪ್ಪಿಗೆ ಹೇಳಿಕೆ ನೀಡಿದ ಸಚಿನ್ ವಾಜೆ
ಸಚಿನ್ ವಾಜೆ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 25, 2021 | 6:46 PM

ಮುಂಬೈ: ಮುಕೇಶ್ ಅಂಬಾನಿ ಮನೆ ಮುಂದೆ ಕಾರಿನಲ್ಲಿ ಸ್ಫೋಟಕ ಇಟ್ಟಿದ್ದು ನಾನೇ ಎಂದು ಅಮಾನತಾಗಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ. ನಂತರ ಈ ಪ್ರಕರಣವನ್ನು ಪರಿಹರಿಸಿ ‘ಸೂಪರ್ ಕಾಪ್’ ಆಗಬೇಕೆಂದಿದ್ದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ಎದುರು ಸಚಿನ್ ವಾಜೆ ತಪ್ಪೊಪ್ಪಿಕೊಂಡಿದ್ದಾರೆ. ಅವರ ತಪ್ಪೊಪ್ಪಿಗೆ ಹೇಳಿಕೆಯನ್ನು ಪರಿಶೀಲಿಸಿರುವ ಎನ್​ಐಎ ಸ್ಫೋಟಕ ಇರಿಸಿದ ಮೂಲ ಉದ್ದೇಶಕ್ಕಾಗಿ ತನಿಖೆ ಚುರುಕುಗೊಳಿಸಿದೆ.

ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಪೋಟಕ ಹೊತ್ತಿದ್ದ ಕಾರು ಸಿಕ್ಕ ಪ್ರಕರಣದಲ್ಲಿ ಎನ್​ಐಎ ಬಂಧಿಸಿದ್ದ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆಯನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು. ಸಚಿನ್ ವಾಜೆ ಅವರನ್ನು ಅಮಾನತುಗೊಳಿಸಿ ಮುಂಬೈ ಸ್ಪೆಷಲ್ ಬ್ರ್ಯಾಂಚ್​ನ ಹೆಚ್ಚುವರಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದರು. ಸ್ಫೋಟಕ ಇಟ್ಟಿದ್ದ ತಂಡದಲ್ಲಿ ಸಚಿನ್ ವಾಜೆ ಕೂಡ ಭಾಗಿಯಾಗಿದ್ದು ಈ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.

ಎನ್​ಕೌಂಟರ್ ಸ್ಪೆಷಲಿಸ್ಟ್ ಆಗಿದ್ದ ಸಚಿನ್ ವಾಜೆ, ಅಂಬಾನಿ ಮನೆ ಬಳಿ ಪತ್ತೆಯಾದ ವಾಹನದಲ್ಲಿ ಸ್ಫೋಟಕ ಇರಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಫೆಬ್ರವರಿ 25ರಂದು ದಕ್ಷಿಣ ಮುಂಬೈನ ಕಾರ್ಮಿಚೇಲ್ ರಸ್ತೆಯಲ್ಲಿರುವ ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿರುವ ಕಾರೊಂದು ಪತ್ತೆಯಾಗಿತ್ತು. ಈ ಕಾರಿನೊಳಗೆ ಜಿಲೆಟಿನ್ ಕಡ್ಡಿಗಳನ್ನು ತುಂಬಿಸಿಡಲಾಗಿತ್ತು. ಅದೃಷ್ಟವಶಾತ್ ಜಿಲೆಟಿನ್ ಸ್ಫೋಟಗೊಳ್ಳದ ಕಾರಣ ಭಾರಿ ಅನಾಹುತ ತಪ್ಪಿತ್ತು.

ಮುಕೇಶ್ ಅಂಬಾನಿ ಅವರ ನಿವಾಸದ ಬಳಿ ಜಿಲೆಟಿನ್ ಕಡ್ಡಿಗಳನ್ನು ಇರಿಸಿದ ಮಹೇಂದ್ರಾ ಸ್ಕಾರ್ಪಿಯೋ ಕಾರನ್ನು ನಿರ್ವಹಿಸುತ್ತಿದ್ದ ಮನ್​ಸುಖ್ ಹಿರೇನ್ ಅವರ ಮೃತದೇಹ ಪತ್ತೆಯಾಗಿತ್ತು. ಈ ಘಟನೆ ಹಿಂದೆ ಸಚಿನ್ ವಾಜೆ ಅವರ ಕೈವಾಡ ಇದೆ ಎಂದು ಮನ್​ಸುಖ್ ಪತ್ನಿ ಆರೋಪಿಸಿದ್ದರು. ಈ ಆರೋಪ ಕೇಳಿ ಬಂದ ಮೇಲೆ ಘಟನೆಯ ತನಿಖೆಯ ಹೊಣೆ ಹೊತ್ತಿದ್ದ ವಾಜೆ ಅವರನ್ನು ತನಿಖಾ ತಂಡದಿಂದ ಕೈಬಿಡಲಾಗಿತ್ತು.

ಇದನ್ನೂ ಓದಿ: ವ್ಯಕ್ತಿ ವ್ಯಕ್ತಿತ್ವ: ಹಿಂದೂ ಮುಸ್ಲಿಂ ಸಾಮರಸ್ಯ, ಸೈಬರ್ ಕ್ರೈಂ ಪತ್ತೆಹಚ್ಚುವಲ್ಲಿ ಏಷ್ಯಾಕ್ಕೇ ಪ್ರಥಮ; ಸಚಿನ್ ವಾಜೆಯ ವೈವಿಧ್ಯಮಯ ವ್ಯಕ್ತಿತ್ವ

Mukesh Ambani | ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್ ಕಡ್ಡಿಗಳು​ ಪತ್ತೆ

ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು; ಉದ್ಧವ್ ಠಾಕ್ರೆಗೆ ಪತ್ರ ಬರೆದ ಪರಮ್​ವೀರ್ ಸಿಂಗ್

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ