ಬಾಂಗ್ಲಾದೇಶದಲ್ಲಿ ದೇವಸ್ಥಾನಗಳ ಮೇಲಿನ ದಾಳಿ ಬಗ್ಗೆ ಸದ್ಗುರು ಕಳವಳ; ಹಿಂದೂಗಳ ರಕ್ಷಣೆಗೆ ಭಾರತ ಸರ್ಕಾರಕ್ಕೆ ಮನವಿ

ಹಿಂಸಾಚಾರ ಮತ್ತು ರಾಜಕೀಯ ಅಶಾಂತಿಯಿಂದ ನಲುಗಿರುವ ಬಾಂಗ್ಲಾದೇಶದ ಹಿಂದೂ ಸಮುದಾಯವನ್ನು ರಕ್ಷಿಸಲು ಭಾರತ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಇಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಒತ್ತಾಯಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳು, ಸಾಂಸ್ಕೃತಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ದಾಳಿಯ ಹಿನ್ನೆಲೆಯಲ್ಲಿ ಅವರು ಈ ಮನವಿ ಮಾಡಿದ್ದಾರೆ.

ಬಾಂಗ್ಲಾದೇಶದಲ್ಲಿ ದೇವಸ್ಥಾನಗಳ ಮೇಲಿನ ದಾಳಿ ಬಗ್ಗೆ ಸದ್ಗುರು ಕಳವಳ; ಹಿಂದೂಗಳ ರಕ್ಷಣೆಗೆ ಭಾರತ ಸರ್ಕಾರಕ್ಕೆ ಮನವಿ
ಜಗ್ಗಿ ವಾಸುದೇವ್
Follow us
ಸುಷ್ಮಾ ಚಕ್ರೆ
|

Updated on: Aug 07, 2024 | 7:03 PM

ನವದೆಹಲಿ: ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗಳ ಮೇಲೆ ನಡೆಯುತ್ತಿರುವ ದಾಳಿ ಆತಂಕಕಾರಿ ಎಂದು ಸದ್ಗುರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರವು ಪರಿಸ್ಥಿತಿಯ ಮೇಲೆ ನಿಗಾ ಇಡಬೇಕು ಮತ್ತು ಹಿಂದೂಗಳ ಸುರಕ್ಷತೆಗಾಗಿ ಉಪಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಖ್ಯಾತ ಆಧ್ಯಾತ್ಮಿಕ ಗುರು ಮತ್ತು ಇಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ವಾಸುದೇವ್ ಜಗ್ಗಿ ಅವರು ಬಾಂಗ್ಲಾದೇಶದ ಹಿಂಸಾಚಾರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಹಿಂದೂಗಳ ಮೇಲಿನ ದೌರ್ಜನ್ಯಗಳು ಕೇವಲ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ, ಭಾರತ ಈ ದಿಸೆಯಲ್ಲಿ ಸಕಾರಾತ್ಮಕ ಹೆಜ್ಜೆಗಳನ್ನು ಇಡಬೇಕು ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸದ್ಗುರು ಜಗ್ಗಿ ವಾಸುದೇವ್ ಭಾರತ ಮತ್ತು ಬಾಂಗ್ಲಾದೇಶದ ಸಂಬಂಧಗಳು ಮತ್ತು ಇತಿಹಾಸದ ಕುರಿತು ಸುದೀರ್ಘ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ನಮ್ಮ ನೆರೆಯ ದೇಶದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸುವುದು ನಮ್ಮ ಜವಾಬ್ದಾರಿಯಾಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Sheikh Hasina: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ

ಬಾಂಗ್ಲಾದೇಶವು ಒಂದು ಕಾಲದಲ್ಲಿ ಈ ರಾಷ್ಟ್ರದ ಭಾಗವಾಗಿತ್ತು. ಆದರೆ ದುರದೃಷ್ಟವಶಾತ್ ಇಂದು ಅದು ನೆರೆಯ ದೇಶವಾಗಿ ಮಾರ್ಪಟ್ಟಿದೆ ಎಂದು ಆಧ್ಯಾತ್ಮಿಕ ಗುರು ಸದ್ಗುರು ಹೇಳಿದ್ದಾರೆ. ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಆಧ್ಯಾತ್ಮಿಕ ನಾಯಕ ಜಗ್ಗಿ ವಾಸುದೇವ್ ಬಾಂಗ್ಲಾದೇಶಿ ಹಿಂದೂಗಳನ್ನು ರಕ್ಷಿಸಲು ಭಾರತವನ್ನು ಒತ್ತಾಯಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗಳು, ದೇವಸ್ಥಾನಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಯುತ್ತಿರುವ ಸಂದರ್ಭದಲ್ಲಿ ಆಧ್ಯಾತ್ಮಿಕ ಗುರು ಸದ್ಗುರುಗಳ ಈ ಹೇಳಿಕೆಗಳು ಬಂದಿವೆ. ಹಿಂಸಾತ್ಮಕ ಪ್ರತಿಭಟನೆಯಿಂದಾಗಿ, ಮಾಜಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶವನ್ನು ತೊರೆದು ತಾತ್ಕಾಲಿಕವಾಗಿ ಭಾರತದಲ್ಲಿ ಆಶ್ರಯ ಪಡೆಯಬೇಕಾಯಿತು. ಪ್ರತಿಭಟನೆಯಲ್ಲಿ ಶೇಖ್ ಹಸೀನಾ ಅವರ ಪಕ್ಷದ ಹಲವು ನಾಯಕರು ಸಾವನ್ನಪ್ಪಿದ್ದಾರೆ. ಗಲಭೆಕೋರರು ಶೇಖ್ ಹಸೀನಾ ಅವರ ಆಸ್ತಿ ಮತ್ತು ಅವರ ಬೆಂಬಲಿಗರನ್ನು ಗುರಿಯಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮೆದುಳಿನ ಶಸ್ತ್ರಚಿಕಿತ್ಸೆಯಾಗಿ ಒಂದು ತಿಂಗಳ ನಂತರ ಇಂಡೋನೇಷ್ಯಾಕ್ಕೆ ತೆರಳಿದ ಸದ್ಗುರು

ಸದ್ಗುರುಗಳು ತಮ್ಮ ಪೋಸ್ಟ್‌ನೊಂದಿಗೆ ಕೆಲವು ಮಾಧ್ಯಮಗಳ ತುಣುಕುಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹಿಂದೂಗಳ ಮೇಲಿನ ದಾಳಿಯ ಸುದ್ದಿಗಳನ್ನು ಪ್ರಕಟಿಸಲಾಗಿದೆ. ಈ ಪರಿಸ್ಥಿತಿಯನ್ನು ನೋಡಿದರೆ, ನಮ್ಮ ನೆರೆಯ ದೇಶವು ದುರದೃಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದೆ, ಅಲ್ಲಿ ಬೆಳೆಯುವ ಸಾಧ್ಯತೆಯಿರುವ ಧಾರ್ಮಿಕ ಉಗ್ರವಾದವು ನಮ್ಮ ಪ್ರೀತಿಯ ಭಾರತದ ಮೇಲೆ ಎಂದಿಗೂ ಪರಿಣಾಮ ಬೀರದಂತೆ ನಾವೆಲ್ಲರೂ ನೋಡಿಕೊಳ್ಳೋಣ ಎಂದು ಸದ್ಗುರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ