Sign In

By signing in or creating an account, you agree with Associated Broadcasting Company's Terms & Conditions and Privacy Policy.

Sadhu Singh Dharamsot: ಭ್ರಷ್ಟಾಚಾರ ಪ್ರಕರಣ; ಪಂಜಾಬ್‌ನ ಮಾಜಿ ಸಚಿವ ಸಾಧು ಸಿಂಗ್ ಧರಂಸೋತ್ ಬಂಧನ

ಕಾಂಗ್ರೆಸ್ ನಾಯಕ ಸಾಧು ಸಿಂಗ್ ಧರಂಸೋತ್ ಈ ಹಿಂದೆ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಂಪುಟದಲ್ಲಿ ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಭ್ರಷ್ಟಾಚಾರ ಆರೋಪದಲ್ಲಿ ಇಂದು ಮುಂಜಾನೆ ಅವರನ್ನು ಬಂಧಿಸಲಾಗಿದೆ.

Sadhu Singh Dharamsot: ಭ್ರಷ್ಟಾಚಾರ ಪ್ರಕರಣ; ಪಂಜಾಬ್‌ನ ಮಾಜಿ ಸಚಿವ ಸಾಧು ಸಿಂಗ್ ಧರಂಸೋತ್ ಬಂಧನ
ಸಾಧು ಸಿಂಗ್ ಧರಂಸೋತ್ ಬಂಧನImage Credit source: Aaj Tak
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 07, 2022 | 8:45 AM

ನವದೆಹಲಿ: ತಮ್ಮದೇ ಸಂಪುಟದ ಸಚಿವ ವಿಜಯ್ ಸಿಂಗ್ಲಾ (Vijay Singla) ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಮಂತ್ರಿ ಸ್ಥಾನದಿಂದ ವಜಾಗೊಳಿಸಿ, ಬಂಧಿಸಲು ಆದೇಶ ನೀಡಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (CM Bhagwant Mann) ಇದೀಗ ಕಾಂಗ್ರೆಸ್​ಗೆ ಶಾಕ್ ನೀಡಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಸಮರ ಸಾರಲು ಸಿದ್ಧರಾಗಿದ್ದೇವೆ ಎಂದು ಘೋಷಿಸಿದ್ದ ಸಿಎಂ ಭಗವಂತ್ ಮಾನ್ ಸರ್ಕಾರದ ನಡೆಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರ ಭ್ರಷ್ಟಾಚಾರ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಸಾಧು ಸಿಂಗ್ ಧರಂಸೋತ್ (Sadhu Singh Dharamsot) ಅವರನ್ನು ಬಂಧಿಸಿದೆ.

ಇಂದು (ಮಂಗಳವಾರ) ಮುಂಜಾನೆ ಸಾಧು ಸಿಂಗ್ ಧರಮ್‌ಸೋತ್‌ ಅವರ ಬಂಧನವಾಗಿದೆ. ಇವರು ಕಾಂಗ್ರೆಸ್​ ಪಕ್ಷದ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಸಂಪುಟದಲ್ಲಿ ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇವರೊಂದಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಸ್ಥಳೀಯ ಪತ್ರಕರ್ತ ಕಮಲ್ಜಿತ್ ಸಿಂಗ್ ಅವರನ್ನೂ ಭ್ರಷ್ಟಾಚಾರದ ಆರೋಪದಲ್ಲಿ ಬಂಧಿಸಲಾಗಿದೆ.

ಒಂದು ತಿಂಗಳ ಹಿಂದಷ್ಟೇ ಭ್ರಷ್ಟಾಚಾರ ಪ್ರಕರಣದಲ್ಲಿ ಈ ಕಾಂಗ್ರೆಸ್ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭಗವಂತ್ ಮಾನ್ ಎಚ್ಚರಿಕೆ ನೀಡಿದ್ದರು. ಅದರ ಬೆನ್ನಲ್ಲೇ ದಿಢೀರನೆ ಮಾಜಿ ಸಚಿವ ಸಾಧು ಸಿಂಗ್ ಅವರನ್ನು ಬಂಧಿಸಲಾಗಿದೆ. ಈ ಮೂಲಕ ಆಮ್ ಆದ್ಮಿ ಸರ್ಕಾರ ಪಂಜಾಬ್​ನಲ್ಲಿ ಕಾಂಗ್ರೆಸ್​​ ನಾಯಕರಿಗೂ ಬಿಸಿ ಮುಟ್ಟಿಸಿದೆ.

ಇದನ್ನೂ ಓದಿ
Image
Sidhu Moose Wala Murder: ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣ; ನಾವೇ ಕೊಲೆ ಮಾಡಿದ್ದು ಎಂದ ಗ್ಯಾಂಗ್​ಸ್ಟರ್ ಬಿಷ್ಣೋಯ್
Image
Fact Check ಪಂಜಾಬ್ ಸಿಎಂ ಮಾನ್ ಜತೆ ಗ್ಯಾಂಗ್​​ಸ್ಟರ್​​ ಗೋಲ್ಡಿ ಬ್ರಾರ್ ಫೋಟೊ? ಆರೋಪಿ ಹೆಸರಲ್ಲಿ ಅಮಾಯಕ ಉದ್ಯಮಿಯ ಫೋಟೊ ವೈರಲ್
Image
Arvind Kejriwal: ನಿಮ್ಮ ಬಗ್ಗೆ ಹೆಮ್ಮೆಯಾಗುತ್ತಿದೆ; ಭ್ರಷ್ಟಾಚಾರಿ ಸಚಿವರನ್ನು ಕಿತ್ತೊಗೆದ ಸಿಎಂ ಭಗವಂತ್​ ಮಾನ್​ಗೆ ಕೇಜ್ರಿವಾಲ್ ಶಹಬ್ಬಾಸ್​
Image
ಲಂಚ ಪಡೆದಿದ್ದಕ್ಕೆ ಆರೋಗ್ಯ ಸಚಿವರನ್ನೇ ವಜಾಗೊಳಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್

ಇದನ್ನೂ ಓದಿ: Vijay Singla: ಭ್ರಷ್ಟಾಚಾರ ಪ್ರಕರಣ; ಪಂಜಾಬ್ ಮಾಜಿ ಸಚಿವ ವಿಜಯ್ ಸಿಂಗ್ಲಾಗೆ 14 ದಿನ ನ್ಯಾಯಾಂಗ ಬಂಧನ

ಈ ಮಾಹಿತಿಯನ್ನು ಖಚಿತಪಡಿಸಿದ ವಿಜಿಲೆನ್ಸ್ ಬ್ಯೂರೋ ಅಧಿಕಾರಿಯೊಬ್ಬರು, ಮಾಜಿ ಸಚಿವ ಮತ್ತು ಪರ್ತಕರ್ತನನ್ನು ಭ್ರಷ್ಟಾಚಾರದ ಆರೋಪದಡಿಯಲ್ಲಿ ಬಂಧಿಸಲಾಗಿದೆ ಎಂದು ಹೇಳಿದರು. ಕಳೆದ ವಾರ ವಿಭಾಗೀಯ ಅರಣ್ಯ ಅಧಿಕಾರಿ ಗುರ್ನಮ್ಪ್ರೀತ್ ಸಿಂಗ್ ಮತ್ತು ಮತ್ತೋರ್ವ ವ್ಯಕ್ತಿ ಹರ್ಮಿಂದರ್ ಸಿಂಗ್ ಹುಮ್ಮಿ ಅವರನ್ನು ಬಂಧಿಸಿದಾಗ ಮಾಜಿ ಸಚಿವರ ವಿರುದ್ಧ ಬ್ಯೂರೋ ಅನೇಕ ಪುರಾವೆಗಳನ್ನು ಸಂಗ್ರಹಿಸಿತ್ತು. ಅವರು ಧರಂಸೋತ್​ಗೆ ಭಾರೀ ಲಂಚವನ್ನು ನೀಡಿದ್ದಾರೆ ಎಂದು ಹೇಳಲಾಗಿತ್ತು.

ಕಮಲ್ಜೀತ್ ಮೂಲಕ ಹಮ್ಮಿ ಧರಂಸೋತ್​​ಗೆ ಲಂಚ ನೀಡುತ್ತಿದ್ದರು. ಕ್ಯಾಪ್ಟನ್ ಅಮರಿಂದರ್ ಅವರ ಅಧಿಕಾರಾವಧಿಯಲ್ಲಿ ಐಎಎಸ್ ಅಧಿಕಾರಿ ಕಿರ್ಪಾ ಶಂಕರ್ ಸರೋಜ್ ಅವರು ಸ್ಕಾಲರ್‌ಶಿಪ್ ಹಗರಣದಲ್ಲಿ ಸಾಧು ವಿರುದ್ಧ ದೋಷಾರೋಪ ಹೊರಿಸಲಾಗಿತ್ತು. ಆದರೆ, ಬಳಿಕ ಅವರಿಗೆ “ಕ್ಲೀನ್ ಚಿಟ್” ನೀಡಲಾಗಿತ್ತು. ಆದರೆ, ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಸಾಕಷ್ಟು ಪುರಾವೆಗಳಿವೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 am, Tue, 7 June 22

ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ