Sadhvi Pragya: ಸತ್ಯ ಹೇಳೋದು ದಂಗೆಯೇ?; ನೂಪುರ್ ಶರ್ಮಾಗೆ ಸಾಧ್ವಿ ಪ್ರಜ್ಞಾ ಠಾಕೂರ್ ಬೆಂಬಲ

ಸತ್ಯವನ್ನು ಹೇಳುವುದು ಬಂಡಾಯವಾಗಿದ್ದರೆ ನನ್ನನ್ನು ಬಂಡಾಯ ಎಂದು ಪರಿಗಣಿಸಿ. ಜೈ ಸನಾತನ, ಜೈ ಹಿಂದುತ್ವ." ಎಂದು ಸಾಧ್ವಿ ಪ್ರಜ್ಞಾ ಸಿಂಗ್ ಟ್ವೀಟ್ ಮಾಡಿದ್ದಾರೆ.

Sadhvi Pragya: ಸತ್ಯ ಹೇಳೋದು ದಂಗೆಯೇ?; ನೂಪುರ್ ಶರ್ಮಾಗೆ ಸಾಧ್ವಿ ಪ್ರಜ್ಞಾ ಠಾಕೂರ್ ಬೆಂಬಲ
ಪ್ರಗ್ಯಾ ಸಿಂಗ್ ಠಾಕೂರ್Image Credit source: India Today
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 10, 2022 | 2:56 PM

ನವದೆಹಲಿ: ಪ್ರವಾದಿ ಮೊಹಮ್ಮದ್ ( Prophet Muhammad) ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮ(Nupur Sharma) ಹಾಗೂ ಬಿಜೆಪಿ ನಾಯಕ ನವೀನ್ ಜಿಂದಾಲ್ ಅವರನ್ನು ಬಿಜೆಪಿಯಿಂದ ಅಮಾನತು ಮಾಡಲಾಗಿದೆ. ಇದಕ್ಕೆ ಬಿಜೆಪಿಯಲ್ಲೇ ಸಾಕಷ್ಟು ವಿರೋಧವೂ ವ್ಯಕ್ತವಾಗಿತ್ತು. ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ (Sadhvi Pragya Singh Thakur) ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯಿಂದ ಅಮಾನತುಗೊಂಡಿರುವ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರಿಗೆ ಬೆಂಬಲ ನೀಡಿದ್ದಾರೆ. ಪ್ರವಾದಿ ವಿವಾದಕ್ಕೆ ಸಂಬಂಧಿಸಿದಂತೆ ಕಮಲೇಶ್ ತಿವಾರಿ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿದ್ದಾರೆ.

“ನಾಸ್ತಿಕರೇ ಹೀಗೆ ಮಾಡುತ್ತಿದ್ದಾರೆ. ಕಮಲೇಶ್ ತಿವಾರಿ ಏನೋ ಹೇಳಿದಾಗ ಅವರನ್ನು ಕೊಂದಿದ್ದಾರೆ. ನಮ್ಮ ದೇವರು, ದೇವತೆಗಳ ಮೇಲೆ ಸಿನಿಮಾ ಮಾಡ್ತಾರೆ, ನಿರ್ದೇಶಿಸ್ತಾರೆ, ನಿರ್ಮಾಣ ಮಾಡ್ತಾರೆ. ಹಿಂದೂಗಳ ಧಾರ್ಮಿಕ ಭಾವನೆಗೆ ಬೆಲೆ ಇಲ್ಲದಂತಾಗಿದೆ” ಎಂದು ಸಾಧ್ವಿ ಪ್ರಜ್ಞಾ ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ
Image
Rajya Sabha polls ಕ್ಯಾನ್ಸರ್​​ ವಿರುದ್ಧ ಹೋರಾಡುತ್ತಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕಿ ಸ್ಟ್ರೆಚರ್​​ನಲ್ಲೇ ಬಂದು ಮತ ಚಲಾವಣೆ
Image
Shocking News: ಹೆಂಡತಿಗೆ ಸರ್ಕಾರಿ ಕೆಲಸ ಸಿಕ್ಕಿದ್ದಕ್ಕೆ ಆಕೆಯ ಕೈ ಕತ್ತರಿಸಿದ ಗಂಡ!; ಹೀಗೂ ಇರ್ತಾರಾ?
Image
Viral Video: ಆ್ಯಂಬುಲೆನ್ಸ್​ ಇಲ್ಲದೆ 4 ವರ್ಷದ ಮಗಳ ಹೆಣವನ್ನು ಹೊತ್ತು ಬಸ್​ನಲ್ಲಿ ಹೋದ ತಂದೆ!

ಇದೇನೂ ಹೊಸ ವಿಷಯವಲ್ಲ. ಭಾರತವು ಹಿಂದೂಗಳಿಗೆ ಸೇರಿದ್ದು. ಭಾರತದಲ್ಲಿ ಸನಾತನ ಸಂಸ್ಕೃತಿ ಜೀವಂತವಾಗಿದೆ. ಅದನ್ನು ಮುಂದೆಯೂ ಜೀವಂತವಾಗಿಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಸಾಧ್ವಿ ಪ್ರಜ್ಞಾ ಹೇಳಿದ್ದಾರೆ. ಪ್ರವಾದಿ ಮೊಹಮ್ಮದ್ ಕುರಿತು ನೂಪುರ್ ಶರ್ಮಾ ಅವರ ಹೇಳಿಕೆ ಕುರಿತು ನಡೆಯುತ್ತಿರುವ ಗದ್ದಲದ ನಡುವೆ, ಸಾಧ್ವಿ ಪ್ರಜ್ಞಾ ಇತ್ತೀಚೆಗೆ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಪ್ರತಿಕೃತಿಯನ್ನು ಗಲ್ಲಿಗೆ ಏರಿಸಿದ ಕಿಡಿಗೇಡಿಗಳು

“ಸತ್ಯವನ್ನು ಹೇಳುವುದು ಬಂಡಾಯವಾಗಿದ್ದರೆ ನನ್ನನ್ನು ಬಂಡಾಯ ಎಂದು ಪರಿಗಣಿಸಿ. ಜೈ ಸನಾತನ, ಜೈ ಹಿಂದುತ್ವ.” ಎಂದು ಸಾಧ್ವಿ ಪ್ರಜ್ಞಾ ಸಿಂಗ್ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Fri, 10 June 22

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ