AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರದ ಹಸ್ತಕ್ಷೇಪಕ್ಕೂ ಮಿತಿ ಇದೆ’; ಸ್ಪೈಸ್‌ಜೆಟ್ ಬಿಕ್ಕಟ್ಟಿನ ಕುರಿತು ಕೇಂದ್ರ ಸರ್ಕಾರದ ಸ್ಪಷ್ಟನೆ

ವಿಮಾನಯಾನ ಸಂಸ್ಥೆ 'ಸ್ಪೈಸ್‌ಜೆಟ್' ತೀವ್ರ ನಗದು ಅಭಾವ ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ, ಅದರ ಕಾರ್ಯಾಚರಣೆ ಮತ್ತು ಹಣಕಾಸಿನ ಸ್ಥಿತಿಗತಿಯ ಮೇಲೆ ಕೇಂದ್ರ ಸರ್ಕಾರವು ಕಣ್ಣಾವಲು ಬಿಗಿಗೊಳಿಸಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ತಿಳಿಸಿದ್ದಾರೆ. ಡಿಜಿಸಿಎ ಮೂಲಕ ವಿಮಾನಯಾನ ಸಚಿವಾಲಯವು ಸ್ಪೈಸ್​​ಜೆಟ್ ಸಂಸ್ಥೆಯ ವಾಣಿಜ್ಯ ವ್ಯವಹಾರ ಹಾಗೂ ಕಾರ್ಯಾಚರಣೆಯ ಪ್ರತಿಯೊಂದು ಹಂತವನ್ನೂ ಪರಿಶೀಲಿಸುತ್ತಿದೆ. ವಿಮಾನಯಾನ ಸಂಸ್ಥೆಯು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳು ವಿಮಾನಗಳ ಸುರಕ್ಷತಾ ಲೋಪಗಳಿಗೆ ಕಾರಣವಾಗದಂತೆ ತಡೆಯುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಅವರು ಹೇಳಿದರು.

‘ಸರ್ಕಾರದ ಹಸ್ತಕ್ಷೇಪಕ್ಕೂ ಮಿತಿ ಇದೆ’; ಸ್ಪೈಸ್‌ಜೆಟ್ ಬಿಕ್ಕಟ್ಟಿನ ಕುರಿತು ಕೇಂದ್ರ ಸರ್ಕಾರದ ಸ್ಪಷ್ಟನೆ
ರಾಮ್ ಮೋಹನ್ ನಾಯ್ಡುImage Credit source: PTI
ಸುಷ್ಮಾ ಚಕ್ರೆ
|

Updated on: Sep 22, 2026 | 7:55 PM

Share

ನವದೆಹಲಿ, ಸೆಪ್ಟೆಂಬರ್ 22: ಆರ್ಥಿಕ ಬಿಕ್ಕಟ್ಟು ಹಾಗೂ ಕಾರ್ಯಾಚರಣೆಯ ಸವಾಲುಗಳನ್ನು ಎದುರಿಸುತ್ತಿರುವ ಸ್ಪೈಸ್‌ಜೆಟ್ ವಿಮಾನಯಾನ ಸಂಸ್ಥೆಯ ಸ್ಥಿತಿಗತಿಯನ್ನು ಕೇಂದ್ರ ಸರ್ಕಾರ ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಅತ್ಯಂತ ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ತಿಳಿಸಿದ್ದಾರೆ.  ವಿಮಾನಯಾನ ನಿಯಂತ್ರಣ ಸಂಸ್ಥೆಯಾದ DGCA ಮೂಲಕ ಸರ್ಕಾರವು ಸ್ಪೈಸ್‌ಜೆಟ್‌ನ ಆರ್ಥಿಕ ಮತ್ತು ಕಾರ್ಯಾಚರಣೆಯ ಪ್ರಕ್ರಿಯೆಗಳನ್ನು ಪರಿಶೀಲಿಸುತ್ತಿದ್ದು, ವಿಮಾನಯಾನದ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

“ಸ್ಪೈಸ್‌ಜೆಟ್‌ನಲ್ಲಿ ಯಾವುದೇ ರೀತಿಯ ಸುರಕ್ಷತಾ ಲೋಪಗಳು ಸಂಭವಿಸಬಾರದು ಎಂಬ ಕಾರಣಕ್ಕೆ ನಮ್ಮ ಸಚಿವಾಲಯವು ಡಿಜಿಸಿಎ ಮೂಲಕ ಸಂಸ್ಥೆಯ ಕಾರ್ಯಾಚರಣೆ ಹಾಗೂ ಆರ್ಥಿಕ ಪರಿಸ್ಥಿತಿಯ ಮೇಲೆ ತೀವ್ರ ನಿಗಾ ವಹಿಸಿದೆ. ನಾವು ಸಂಸ್ಥೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ನೆರವು ನೀಡುವ ಮಾರ್ಗಗಳನ್ನು ಹುಡುಕುತ್ತಿದ್ದೇವೆ. ಆದರೆ, ಸ್ಪೈಸ್‌ಜೆಟ್ ಒಂದು ಖಾಸಗಿ ವಿಮಾನಯಾನ ಸಂಸ್ಥೆಯಾಗಿದ್ದು, ಸರ್ಕಾರದ ಹಸ್ತಕ್ಷೇಪಕ್ಕೂ ಕೆಲವು ಮಿತಿಗಳಿವೆ” ಎಂದು ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು

ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದಾಗಿ ವಿಮಾನಯಾನ ಕ್ಷೇತ್ರವು ತೀವ್ರ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದೆ ಎಂದ ಸಚಿವರು, ಸರ್ಕಾರ ಜಾರಿಗೆ ತಂದಿರುವ ‘ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್’ ಮೂಲಕ ಸ್ಪೈಸ್‌ಜೆಟ್‌ಗೆ ಈಗಾಗಲೇ 150 ಕೋಟಿ ರೂ. ನೆರವು ನೀಡಲಾಗಿದೆ ಎಂದರು. ಬಾಕಿ ಉಳಿದ ನಿಧಿಯನ್ನು ಬ್ಯಾಂಕಿಂಗ್ ಪಾಲುದಾರರೊಂದಿಗೆ ಮಾತುಕತೆ ನಡೆಸಿ ಸಂಸ್ಥೆಯು ಪಡೆದುಕೊಳ್ಳಬೇಕಿದೆ.

ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಮತ್ತು ಕಾರ್ಯಾಚರಣೆಯ ಸುರಕ್ಷತಾ ಮಾನದಂಡಗಳನ್ನು ಕಾಯ್ದುಕೊಳ್ಳುವುದು ಸರ್ಕಾರದ ತಕ್ಷಣದ ಆದ್ಯತೆಯಾಗಿದೆ ಎಂದು ರಾಮ್ ಮೋಹನ್ ನಾಯ್ಡು ಪ್ರತಿಪಾದಿಸಿದರು.

ಇದನ್ನೂ ಓದಿ: ದೆಹಲಿಯಲ್ಲಿ ಸ್ಪೈಸ್‌ಜೆಟ್ ವಿಮಾನಗಳ ವಿಳಂಬಕ್ಕೆ ಖಂಡನೆ; ಏರ್​​ಪೋರ್ಟ್​​ನಲ್ಲಿ 200ಕ್ಕೂ ಹೆಚ್ಚು ಪ್ರಯಾಣಿಕರ ಪ್ರತಿಭಟನೆ

ಸ್ಪೈಸ್‌ಜೆಟ್ ಸಂಸ್ಥೆಯು ಕಳೆದ ಕೆಲವು ಸಮಯದಿಂದ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ದೇಶೀಯ ವಿಮಾನಯಾನ ಮಾರುಕಟ್ಟೆಯಲ್ಲಿ ತನ್ನ ಪಾಲನ್ನು ಕಳೆದುಕೊಳ್ಳುತ್ತಿದೆ. ಜೊತೆಗೆ ಕಾರ್ಯಾಚರಣೆಯಲ್ಲಿರುವ ವಿಮಾನಗಳ ಸಂಖ್ಯೆಯೂ ಕ್ಷೀಣಿಸಿದೆ. ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇರಾನ್ ಮೇಲೆ ನಡೆಸಿದ ದಾಳಿಯ ನಂತರ ಭುಗಿಲೆದ್ದ ಯುದ್ಧದಿಂದಾಗಿ, ವಿಮಾನಯಾನ ಇಂಧನ (ATF) ಬೆಲೆ ಭಾರಿ ಏರಿಕೆಯಾಗಿದೆ. ವಾಯುಪ್ರದೇಶದ ನಿರ್ಬಂಧಗಳು ಮತ್ತು ಅಂತಾರಾಷ್ಟ್ರೀಯ ವಿಮಾನ ರದ್ದತಿಯಿಂದಾಗಿ ವಿಮಾನಯಾನ ಸಂಸ್ಥೆಗಳು ತೀವ್ರ ನಷ್ಟಕ್ಕೆ ಸಿಲುಕಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ